ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ; ಯುವತಿ ರಕ್ಷಣೆ

ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಹೋಟೆಲ್​​ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ವಿದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ; ಯುವತಿ ರಕ್ಷಣೆ
ಸಿಸಿಬಿ ಕಚೇರಿ
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on:Nov 19, 2023 | 7:36 AM

ಬೆಂಗಳೂರು ನ.19: ನಗರದ ಪ್ರತಿಷ್ಠಿತ ಖಾಸಗಿ ಹೋಟೆಲ್​​ನಲ್ಲಿ (Hotel) ನಡೆಯುತ್ತಿದ್ದ ವೇಶ್ಯಾವಾಟಿಕೆ (Prostitution) ಅಡ್ಡೆ ಮೇಲೆ ಸಿಸಿಬಿ (CCB) ಪೊಲೀಸರು ದಾಳಿ ಮಾಡಿದ್ದಾರೆ. ಓರ್ವ ಯುವತಿಯನ್ನು ರಕ್ಷಿಸಿ ಕಬ್ಬನ್​ ಪಾರ್ಕ್ ಠಾಣೆಗೆ ಕರೆತಂದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ವಿದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್​​

ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಡ್ಯಾನೀಯಲ್ ಬಂಧಿತ ಆರೋಪಿ. ಆರೋಪಿ ಡ್ಯಾನೀಯಲ್ ವಾಟ್ಸಾಪ್ ಮೂಲಕ ಕಸ್ಟಮರ್ ಸಂಪರ್ಕಿಸುತ್ತಿದ್ದನು. ಬಳಿಕ ತನ್ನ ಅಕೌಂಟ್​​ಗೆ ಯುಪಿಐ ಮೂಲಕ ಹಣ ಹಾಕಿಸಿಕೊಳ್ಳುತ್ತಿದ್ದನು. ನಂತರ ಲೋಕೇಷನ್​ವೊಂದರಲ್ಲಿ ಡ್ರಗ್ಸ್ ಇಟ್ಟು ಅಲ್ಲಿಂದ ಪರಾರಿಯಾಗುತ್ತಿದ್ದನು. ಬಳಿಕ ಡ್ರಗ್ಸ್ ಕನ್ಸೂಮರ್ಸ್ ಡ್ರಗ್ಸ್​​ ಇಟ್ಟ ಜಾಗಕ್ಕೆ ಬಂದು ತೆಗೆದುಕೊಂಡು ಹೋಗುತ್ತಿದ್ದರು.

ಆರೋಪಿ ಒಟ್ಟು ಐದು ಬ್ಯಾಂಕ್ ಅಕೌಂಟ್​ಗಳನ್ನು ಹೊಂದಿದ್ದನು.  ಮೂರು ತಿಂಗಳಲ್ಲಿ ಈತನ ಒಂದು ಅಕೌಂಟ್​ಗೆ 25 ಲಕ್ಷ ರೂ. ಹಣ ವರ್ಗಾವಣೆ ಆಗಿತ್ತು. ಸದ್ಯ ಅಮೃತಹಳ್ಳಿ ಠಾಣೆ ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !

ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ

ಮೈಸೂರು: ಲಲಿತ‌ಮಹಲ್ ನಗರದ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಯ ಮನೆ  ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಒಡನಾಡಿ ಮತ್ತು ಪೊಲೀಸ್ ಕಮಿಷನರ್ ವಿಶೇಷ ದಳ ಜಂಟಿಯಾಗಿ ದಾಳಿ ಮಾಡಿತ್ತು. ಬಾಡಿಗೆ ಮನೆಯಲ್ಲಿ ಫ್ಯಾಮಿಲಿ ಸಲೂನ್ ಹೆಸರಲ್ಲಿ ಮಹೇಶ್​ ಎಂಬಾತ ವೇಶ್ಯಾವಾಟಿಕೆ ನಡೆಸುತ್ತಿದ್ದನು.

ಮಹೇಶ್ ಎಂಬಾತ ಸಲೂನ್ ನಡೆಸುವುದಾಗಿ ಮೈಸೂರಿನ ಲಲಿತ‌ಮಹಲ್ ನಗರದ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಕಟ್ಟಡವನ್ನು ಬಾಡಿಗೆ ಪಡೆದುಕೊಂಡಿದ್ದನು. ಅದರಂತೆ ಹೊರಗಡೆ ನೋಡುವವರುಗೆ ಫ್ಯಾಮಿಲಿ ಸಲೂನ್ ಅಂತ ಬೋರ್ಡ್ ಹಾಕಿದ್ದನು. ಆದರೆ, ಒಳಗಡೆ ಮಾತ್ರ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದನು. ಇದನ್ನು ಒಡನಾಡಿ, ಪೊಲೀಸ್ ಕಮಿಷನರ್ ವಿಶೇಷ ದಳ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿತ್ತು. ಈ ಬಗ್ಗೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:17 am, Sun, 19 November 23