ಬೆಂಗಳೂರಲ್ಲಿ ಎರಡು ಕಡೆ ಸಿಸಿಬಿ ದಾಳಿ; ವೇಶ್ಯಾವಾಟಿಕೆ, ಬೆಟ್ಟಿಂಗ್​ ದಂಧೆಗೆ ಬ್ರೇಕ್

ರಾಮಮೂರ್ತಿನಗರದಲ್ಲಿ ವಿದೇಶಿಗರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಸಿಸಿಬಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರು ವಿದೇಶಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರಲ್ಲಿ ಎರಡು ಕಡೆ ಸಿಸಿಬಿ ದಾಳಿ; ವೇಶ್ಯಾವಾಟಿಕೆ, ಬೆಟ್ಟಿಂಗ್​ ದಂಧೆಗೆ ಬ್ರೇಕ್
ಕೇಂದ್ರ ಅಪರಾಧ ವಿಭಾಗ
Edited By:

Updated on: Dec 09, 2020 | 3:31 PM

ಬೆಂಗಳೂರು: ನಗರದಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮಂಗಳವಾರ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿದೆ. ಒಂದು ಕಡೆ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಧೆ ಮಟ್ಟ ಹಾಕಲಾಗಿದ್ದು, ಮತ್ತೊಂದೆಡೆ ಬೆಟ್ಟಿಂಗ್​ ದಂಧೆ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಲಾಗಿದೆ.

ಬೆಂಗಳೂರು ಜಂಟಿ ಪೊಲೀಸ್​ ಆಯುಕ್ತ ಸಂದೀಪ್ ಪಾಟೀಲ್​ ಈ ಬಗ್ಗೆ ಟ್ವೀಟ್​ ಮಾಡಿ ಮಾಹಿತಿ ನೀಡಿದ್ದಾರೆ. ರಾಮಮೂರ್ತಿ ನಗರದಲ್ಲಿ ವಿದೇಶಿಗರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಸಿಸಿಬಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರು ವಿದೇಶಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಬೆಟ್ಟಿಂಗ್​ ದಂಧೆಗೆ ಬ್ರೇಕ್​: ಇನ್ನು, ನಿನ್ನೆ ಆಸ್ಟ್ರೇಲಿಯಾ ಹಾಗೂ ಭಾರತದ ನಡುವೆ ಅಂತಿಮ ಟಿ-20 ಪಂದ್ಯ ನಡೆದಿತ್ತು. ಈ ಪಂದ್ಯಕ್ಕೆ ಬೆಟ್ಟಿಂಗ್​ ಕಟ್ಟುತ್ತಿದ್ದ ದಂಧೆಯನ್ನು ಕೂಡ ಸಿಸಿಬಿ ಮಟ್ಟ ಹಾಕಿದೆ. ಬೆಂಗಳೂರಿನಲ್ಲಿ ನಿನ್ನೆ ದೊಡ್ಡ ಮಟ್ಟದಲ್ಲಿ ಬೆಟ್ಟಿಂಗ್​ ನಡೆಯುತ್ತಿತ್ತು. ಈ ವೇಳೆ ದಾಳಿ ನಡೆಸಿದ ಸಿಸಿಬಿ, ₹ 4.5 ಲಕ್ಷ ರೂಪಾಯಿ ವಶಕ್ಕೆ ಪಡೆದಿದೆ.

ಒಂದೇ ದಿನ 21 ಜನರ ಬಂಧನ: ಬೆಂಗಳೂರಿನಲ್ಲಿ ಆಗಸ್ಟ್​ 30ರಂದು ಜೂಜಾಡುತ್ತಿದ್ದವರ ಮೇಲೆ ಮೇಲೆ ಸಿಸಿಬಿ ದಾಳಿ ನಡೆಸಿ 21 ಜನರು ಬಂಧಿಸಿತ್ತು. ಅಲ್ಲದೆ, ದೊಡ್ಡ ಪ್ರಮಾಣದಲ್ಲಿ ಹಣ ಕೂಡ ಜಪ್ತಿ ಮಾಡಲಾಗಿತ್ತು. ಈ ದಾಳಿ ವೇಳೆ ಮನೆಯ ಮಾಲೀಕ ಕೂಡ ಅರೆಸ್ಟ್​ ಆಗಿದ್ದ.

ಸಿಸಿಬಿ ವಿಚಾರಣೆ ವೇಳೆ ಬಯಲಾಯ್ತು ಹ್ಯಾ”ಕಿಂಗ್” ಶ್ರೀಕಿಯ ಮತ್ತೊಂದು ಕೋಡ್..

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us