Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 17 ಲಕ್ಷ ಮೌಲ್ಯದ ಡ್ರಗ್ಸ್​ ವಶ: ಇಬ್ಬರು ವಿದೇಶಿಗರ ಬಂಧನ

ಬೆಂಗಳೂರಿನ ಸಿಸಿಬಿ ಪೊಲೀಸರು 17 ಲಕ್ಷ ರೂ. ಮೌಲ್ಯದ 108 ಗ್ರಾಂ ಎಂಡಿಎಂಎ ಜಪ್ತಿ ಮಾಡಿದ್ದಾರೆ. ನೈಜೀರಿಯಾದ ಎಸ್ಸೋ ಜರ್ಮನ್ ಮತ್ತು ಜಾನ್ ಚುಕುವಾ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ಮುಂಬೈನಿಂದ ಮಾದಕವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಇವರಿಬ್ಬರೂ ಈ ಹಿಂದೆ ಕೂಡ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು.

ಬೆಂಗಳೂರಿನಲ್ಲಿ 17 ಲಕ್ಷ ಮೌಲ್ಯದ ಡ್ರಗ್ಸ್​ ವಶ: ಇಬ್ಬರು ವಿದೇಶಿಗರ ಬಂಧನ
ಸಿಸಿಬಿ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:Mar 04, 2025 | 12:45 PM

ಬೆಂಗಳೂರು, ಮಾರ್ಚ್​ 04: ಸಿಸಿಬಿ (CCB) ಮಾದಕದ್ರವ್ಯ (Drugs) ನಿಗ್ರಹದಳ ಅಧಿಕಾರಿಗಳು ಬೆಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. ನೈಜೀರಿಯಾದ ಎಸ್ಸೋ ಜರ್ಮನ್ ಮತ್ತು ಜಾನ್ ಚುಕುವಾ ಬಂಧಿತರು. ಆರೋಪಿಗಳಿಂದ 17 ಲಕ್ಷ ಮೌಲ್ಯದ 108 ಗ್ರಾಂ ಎಂಡಿಎಂಎ, ಎರಡು ಮೊಬೈಲ್​ಗಳನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

ಆರೋಪಿಗಳು ಮುಂಬೈನಿಂದ ಮಾದಕ ದ್ರವ್ಯ ತಂದು ಪರಿಚಯಸ್ಥರು, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬಂದು ನೆಲೆಸಿದ್ದಾರೆ. ಈ ಹಿಂದೆಯೂ ಕೂಡ ಡ್ರಗ್ ಮಾರಾಟ ಆರೋಪದಲ್ಲಿ ಆರೋಪಿಗಳು ಬಂಧನವಾಗಿದ್ದರು. ಜೈಲಿಂದ ಬಿಡುಗಡೆಯಾದ ಬಳಿಕ ಮತ್ತೆ ಕೆ.ಆರ್.ಪುರಂ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಮತ್ತೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಗಾಂಜಾ ಸಾಗಿಸುತ್ತಿದ್ದ ಆರೋಪಿಗಳು ಪೊಲೀಸರ ಅತಿಥಿ

ಕೋಲಾರ: ಮುಳಬಾಗಲು ತಾಲೂಕಿನ ಅಲ್ಲಾಳಸಂದ್ರ ಬಸ್ ನಿಲ್ದಾಣದ ಬಳಿ ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಟೋ ಸಮೇತ 23 ಲಕ್ಷ ಮೌಲ್ಯದ 23 ಕೆಜಿ 850 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೆಂಕಟರಾಜನಹಳ್ಳಿ ನಿವಾಸಿ ಕೃಷ್ಣಮೂರ್ತಿ, ಕಡದನಹಳ್ಳಿ ನಿವಾಸಿ ಮನೋಹರ್ ಬಂಧಿತ ಆರೋಪಿಗಳು. ಮುಳಬಾಗಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ
Image
ಚಾಮರಾಜಪೇಟೆ ಅಂಚೆ ಕಚೇರಿಗೆ ಕೋರಿಯರ್​ ಮೂಲಕ ಬಂದ ಡ್ರಗ್ಸ್
Image
ಡ್ರಗ್ ​: ಬೆಂಗಳೂರಿನ ಅಂಚೆ ಕಚೇರಿ, ಕೋರಿಯರ್ ಏಜೆನ್ಸಿಯಲ್ಲಿ CCB ​​ತಪಾಸಣೆ
Image
ಬೆಂಗಳೂರು: ಸಿಸಿಬಿ ದಾಳಿ, 71 ಲಕ್ಷ ರೂ. ಮೌಲ್ಯದ ಡ್ರಗ್ ವಶ
Image
ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್​ ವಶಕ್ಕೆ

3 ಕೋಟಿ ಮೌಲ್ಯದ ಸಿಂಥೆಟಿಕ್​ ಡ್ರಗ್ಸ್ ಜಪ್ತಿ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಿಸಿಬಿ ಪೊಲೀಸರು ಇಬ್ಬರು ವಿದೇಶಿ ಡ್ರಗ್​ ಪೆಡ್ಲರ್​ಗಳನ್ನು ಬಂಧಿಸಿದ್ದರು. ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್​ ಡ್ರಗ್ಸ್ ಜಪ್ತಿ ಮಾಡಿದ್ದರು. ಹೊಸ ವರ್ಷಾಚರಣೆಗೆಂದು ಆರೋಪಿಗಳು ಸೋಲದೇವನಹಳ್ಳಿ ಬಳಿ ಡ್ರಗ್ಸ್ ಸಂಗ್ರಹಿಸಿದ್ದರು.

ಈ ವಿಚಾರ ತಿಳಿದ ಸಿಸಿಬಿ ಅಧಿಕಾರಿಗಳು ಡ್ರಗ್ಸ್​ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ, 1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಪತ್ತೆಯಾಗಿದ್ದವು. ಕೂಡಲೆ ಸಿಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, ಮಾದಕ ವಸ್ತು ಜಪ್ತಿ ಮಾಡಿದ್ದರು.

ಇದನ್ನೂ ಓದಿ: ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ, ನಾಲ್ವರ ಬಂಧನ

ಆರೋಪಿಗಳು ಹೊಸ ವರ್ಷಾಚರಣೆ ದಿನದಂದು ಬೆಂಗಳೂರಿನಲ್ಲಿ ಮಾರಲು ಸಜ್ಜಾಗಿದ್ದರು. ಆರೋಪಿಗಳು ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್​ ತರಿಸುತ್ತಿದ್ದರು. ಈ ವಿದೇಶಿ ಡ್ರಗ್​ ಪೆಡ್ಲರ್​ಗಳು ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Tue, 4 March 25

ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್