Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕುರಿಗಾಹಿಗಳ ಮೇಲೆ ಹುಲಿ ದಾಳಿ: ಇಬ್ಬರಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ನ ಅರಣ್ಯದಂಚಿನಲ್ಲಿರುವ ಶಿವಪುರ ಹೊರವಲಯದಲ್ಲಿ ಹುಲಿ ದಾಳಿ ಇಬ್ಬರು ಕುರಿಗಾಹಿಗಳಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ. ಹೀಗಾಗಿ ಗಡಿ ನಾಡು ಚಾಮರಾಜನಗರದಲ್ಲಿ ಮಾನವ ಹಾಗೂ ಕಾಡು ಪ್ರಾಣಿ ಸಂಘರ್ಷ ಮತ್ತೆ ಮುಂದುವರೆದಿದೆ. ಗಾಯಾಳುಗಳಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಚಾಮರಾಜನಗರ: ಕುರಿಗಾಹಿಗಳ ಮೇಲೆ ಹುಲಿ ದಾಳಿ: ಇಬ್ಬರಿಗೆ ಗಾಯ
ಗಾಯಗೊಂಡ ಕುರಿಗಾಹಿಗಳು
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 12, 2024 | 7:16 PM

ಚಾಮರಾಜನಗರ, ಫೆಬ್ರವರಿ 12: ಗಡಿ ನಾಡು ಚಾಮರಾಜನಗರದಲ್ಲಿ ಮಾನವ ಹಾಗೂ ಕಾಡು ಪ್ರಾಣಿ ಸಂಘರ್ಷ ಮತ್ತೆ ಮುಂದುವರೆದಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ನ ಅರಣ್ಯದಂಚಿನಲ್ಲಿರುವ ಶಿವಪುರ ಹೊರವಲಯದಲ್ಲಿ ಹುಲಿ ದಾಳಿ (Tiger attack) ಇಬ್ಬರು ಕುರಿಗಾಹಿಗಳಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ. ಶಿವಶೆಟ್ಟಿ(55), ಜವರಯ್ಯ(65) ಗಾಯಗೊಂಡವರು. ಮೊದಲಿಗೆ ಕುರಿಗಳ ಮೇಲೆ ಹುಲಿ ದಾಳಿ ನಡೆಸಿದ್ದು, ಕುರಿಯನ್ನು ರಕ್ಷಿಸಲು ಕುರಿಗಾಹಿಗಳು ಯತ್ನಿಸಿದಾಗ ಕುರಿಗಾಹಿಗಳ ಮೇಲೆ ದಾಳಿ ಮಾಡಿದೆ. ಗಾಯಾಳುಗಳಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿಯಲ್ಲಿ ಇತ್ತೀಚೆಗೆ ಹಸುವಿನ ಮೇಲೆ ಹುಲಿ ದಾಳಿ ಮಾಡಿತ್ತು. ಕಲ್ಲಹಳ್ಳಿ-ಸಂಪಿಗೆಪುರ ಮಾರ್ಗದಲ್ಲಿ ಹುಲಿ ಸಂಚರಿಸುವ ದೃಶ್ಯ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪದೇ ಪದೆ ಹುಲಿ ಕಾಣಿಸಿರುವ ಕಾರಣ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದರು.

ಒಂದೇ ದಿನ ಮೂರು ಗೋವುಗಳ ಬೇಟೆಯಾಡಿದ ಹುಲಿ: ಆತಂಕದಲ್ಲಿ ರೈತಾಪಿ ವರ್ಗ

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ದೇವರಪುರ ಗ್ರಾಮದಲ್ಲಿ ಹುಲಿಯೊಂದು ಎರಡು ಗಬ್ಬದ ಹಸು ಹಾಗೂ ಒಂದು ಎತ್ತನ್ನು ಕೊಂದು ಹಾಕಿತ್ತು. ಒಂದು ಹಸು ಕಾಣೆಯಾಗಿದ್ದು ಬಹುಶಃ ಭಕ್ಷಿಸಿರುವ ಸಾಧ್ಯತೆ ಇದೆ. ಗ್ರಾಮದ ಟಿಡಿ ಶಿವಕುಮಾರ್ ಎಂಬುವರಿಗೆ ಈ ಹಸುಗಳು ಸೇರಿವೆ. ತೋಟದಲ್ಲಿ ಮೇಯಲು ಬಿಡಲಾಗಿದ್ದ ಹಸುಗಳ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು.

ಇದನ್ನೂ ಓದಿ: ಬಂಡೀಪುರದಲ್ಲಿ ವ್ಯಕ್ತಿಯ ಅರ್ಧ ಮೃತದೇಹ ಪತ್ತೆ: ಹುಲಿ ಕೊಂದಿರುವ ಶಂಕೆ

ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ಮಹಜರು ಮಾಡದೇ ಹಸುಗಳ ಕಳೇಬರವನ್ನ ಹೂಳಲು ಮುಂದಾಗಿದ್ದರು. ಆದರೆ ಮಾಲಿಕ ಶಿವಕುಮಾರ್ ಅವರ ಒತ್ತಾಯದ ಮೇರೆಗೆ ಮಹಜರು ಮಾಡಿ ಸಂಸ್ಕಾರ ಮಾಡಲಾಗಿದೆ. ಹುಲಿ ದಾಳಿಯಿಂದ ಅಂದಾಜು 1.5 ಲಕ್ಷ ರೂ ನಷ್ಟವಾಗಿದೆ.

ಇದನ್ನೂ ಓದಿ: ಬಂಡೀಪುರದಲ್ಲಿ ಚಿತ್ರ ಸೆರೆ ಹಿಡಿಯಲು ನಿಂತ ಪ್ರವಾಸಿಗರು: ಆನೆ ತುಳಿತದಿಂದ ಕೂದಲೆಳೆ ಅಂತರದಿಂದ ಪಾರಾದ ವ್ಯಕ್ತಿ

ಕೊಡಗಿನಲ್ಲಿ ಇದೀಗ ಕಾಫಿ ಕುಯ್ಲಿನ ಸಮಯವಾಗಿದ್ದು ಕಾರ್ಮಿಕರೆಲ್ಲಾ ತೋಟದಲ್ಲಿ ಕೆಲಸದಲ್ಲಿರುತ್ತಾರೆ. ಇಂತಹ ಸಂದರ್ಭದಲ್ಲಿ ಹುಲಿ ಹಾಡ ಹಗಲೇ ದಾಳಿ ಮಾಡುತ್ತಿರುವುದು ಜನರ ನಿದ್ದೆ ಗೆಡಿಸಿದೆ. ಅರಣ್ಯ ಇಲಾಖೆ ನಿಷ್ಪತ್ರಯೋಜನವಾಗಿದೆ ಅಂತ ಆಕ್ರೋಶ ಹೊರಹಾಕಿದ್ದರು.

ಟ್ರಾನ್ಸ್‌ಫಾರ್ಮರ್‌ನಿಂದ ವಿದ್ಯುತ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

ತುಮಕೂರು: ಟ್ರಾನ್ಸ್‌ಫಾರ್ಮರ್‌ನಿಂದ ವಿದ್ಯುತ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ. ಮಿಡಿಗೇಶಿ ಗ್ರಾಮದ ನಿವಾಸಿ ದೇವರಾಜು(45) ಮೃತ ದುರ್ದೈವಿ. ಸ್ಥಳಕ್ಕೆ ಪೊಲೀಸರು ಹಾಗೂ ಬೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.