ಚನ್ನಪಟ್ಟಣ: ಬೈರಾಪಟ್ಟಣದ ಬಳಿ ಲಾರಿ, ಟಿಟಿ ಭೀಕರ ಅಪಘಾತ, ಸ್ಥಳದಲ್ಲೇ ಮೂವರು ಸಾವು

Channapatna Accident: ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಟ್ಟಾರೆ ಆರು ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಚನ್ನಪಟ್ಟಣ: ಬೈರಾಪಟ್ಟಣದ ಬಳಿ ಲಾರಿ, ಟಿಟಿ ಭೀಕರ ಅಪಘಾತ, ಸ್ಥಳದಲ್ಲೇ ಮೂವರು ಸಾವು
ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿರುವ ಟಿಟಿ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: Ganapathi Sharma

Updated on:Feb 17, 2024 | 10:56 AM

ರಾಮನಗರ, ಫೆಬ್ರವರಿ 17: ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ (Accident) ಸಂಭವಿಸಿದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚನ್ನಪಟ್ಟಣದ (Channapatna) ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮೈಸೂರು‌ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಟಿಟಿ ವಾಹನ ಡಿಕ್ಕಿಯಾಗಿವೆ. ಘಟನೆಯಲ್ಲಿ 6 ಜನ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಟಿಟಿಯಲ್ಲಿದ್ದವರು ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದರು ಎನ್ನಲಾಗಿದೆ. ಕುಟುಂಬ ಸಮೇತ ವಾಪಸ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಟಿಟಿ ವಾಹನ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದೆ.

ಮೃತರನ್ನು ಸೋಮಲಿಂಗಪ್ಪ (70), ಶಿವಲಿಂಗಪ್ಪ (66), ರಾಜೇಶ್ವರಿ ಎಂದು ಗುರುತಿಸಲಾಗಿದೆ. ಸದ್ಯ ಆರು ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ರಾಯಚೂರು: ಹೊನ್ನಟಗಿಯಲ್ಲಿ ಮಹಿಳೆ ಆತ್ಮಹತ್ಯೆ

ರಾಯಚೂರಿನ ದೇವದುರ್ಗ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾವಿಗೆ ಹಾರಿ ದೇವಮ್ಮ (35) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಬಸನಗೌಡ ಮಾಲಿ ಪಾಟೀಲ್​ ಜಮೀನು ಕೆಲಸಕ್ಕೆ ಬಂದಿದ್ದ ದೇವಮ್ಮ, ಈ ವೇಳೆ ದುರ್ಗಮ್ಮ ಎಂಬುವರ ಜತೆ ಜಗಳವಾಡಿದ್ದರು. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ: ಬೆಂಗಳೂರು: ಮಹಿಳಾ ಪೊಲೀಸ್ ಮೊಬೈಲ್ ಕಳ್ಳನ ಹಿಡಿದ ಪ್ರಕರಣಕ್ಕೆ ಟ್ವಿಸ್ಟ್, ಘಟನೆ ಹಿಂದಿದೆ ಪ್ರೇಮ್ ಕಹಾನಿ!

ಉಡುಪಿ: ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷಾ ಭೀತಿಯಿಂದ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಮಾಹೆ ವಿವಿಯಲ್ಲಿ ಸಂಭವಿಸಿದೆ. ಮಾಹೆ ವಿವಿಯ ಎಂಸಿಎಚ್‌ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ, ಬಿಹಾರ ಮೂಲದ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಟ್ಟಡದಿಂದ ಜಿಗಿಯುತ್ತಿದ್ದಂತೆ ಇತರ ವಿದ್ಯಾರ್ಥಿಗಳು ಆತಂಕಗೊಂಡು ಓಡಾಡಿರುವ ದೃಶ್ಯ ಕೆಮರಾದಲ್ಲಿ ಸೆರೆಯಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:49 am, Sat, 17 February 24

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ