ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು

| Updated By: Rakesh Nayak Manchi

Updated on: Dec 04, 2023 | 9:36 PM

ವಿಧಾನಸಭಾ ಚುನಾವಣೆಯ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪ್ರಕರಣದ ಮೊದಲ ಆರೋಪಿ ಚೈತ್ರಾ ಹಾಗೂ ಎರಡನೇ ಆರೋಪಿ ಶ್ರೀಕಾಂತ್ ಅವರಿಗೆ ಜಾಮೀನು ಮಂಜೂರಾಗಿದೆ. ನಾಳೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು
ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು
Follow us on

ಬೆಂಗಳೂರು, ಡಿ.4: ಉದ್ಯಮಿ ಗೋವಿಂದಬಾಬು ಪೂಜಾರಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ (Chaitra) ಹಾಗೂ ಎರಡನೇ ಆರೋಪಿ ಶ್ರೀಕಾಂತ್​ಗೆ ಮೂರನೇ ಎಸಿಎಂಎಂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅದರಂತೆ ಆರೋಪಿಗಳು ನಾಳೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಉದ್ಯಮಿ ಗೋವಿಂದ ಬಾಬು ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾಳನ್ನು ಸೆಪ್ಟೆಂಬರ್ 13 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಪಾರ್ಟ್​ ಟೈಂ ಕೆಲಸ ಹುಡುಕುತ್ತಿರುವವರನ್ನು ಟಾರ್ಗೆಟ್ ಮಾಡಿ 40 ಕೋಟಿ ರೂ. ವಂಚನೆ: ನಾಲ್ವರ ಬಂಧನ

ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಒಟ್ಟು 4 ಕೋಟಿ ರೂ. ಹಣ ಪಡೆದಿದ್ದಳು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್​ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಮತ್ತು ಗ್ಯಾಂಗ್ ಹಣ ನೀಡದೇ ವಂಚಿಸಿತ್ತು. ಈ ಬಗ್ಗೆ ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಸಿಸಿಬಿ ಪೊಲೀಸರು ಚೈತ್ರಾಳನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:16 pm, Mon, 4 December 23