AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh Crime: ಕ್ಲುಲ್ಲಕ ಕಾರಣಕ್ಕೆ ಅಪ್ಪ, ಅಮ್ಮ, ಅಜ್ಜಿಯನ್ನು ಕೊಂದು ದೇಹಗಳ ಸುಟ್ಟು ಹಾಕಿದ ಕ್ರೂರಿ ಮಗ

ವ್ಯಕ್ತಿಯೊಬ್ಬ ಕ್ಲುಲ್ಲಕ ಕಾರಣಕ್ಕೆ ಅಪ್ಪ, ಅಮ್ಮ, ಅಜ್ಜಿಯನ್ನು ಕೊಂದು, ದೇಹವನ್ನು ಸುಟ್ಟು ಹಾಕಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ.

Chhattisgarh Crime: ಕ್ಲುಲ್ಲಕ ಕಾರಣಕ್ಕೆ ಅಪ್ಪ, ಅಮ್ಮ, ಅಜ್ಜಿಯನ್ನು ಕೊಂದು ದೇಹಗಳ ಸುಟ್ಟು ಹಾಕಿದ ಕ್ರೂರಿ ಮಗ
ಜೈಲು
ನಯನಾ ರಾಜೀವ್
|

Updated on: May 19, 2023 | 12:36 PM

Share

ವ್ಯಕ್ತಿಯೊಬ್ಬ ಕ್ಲುಲ್ಲಕ ಕಾರಣಕ್ಕೆ ಅಪ್ಪ, ಅಮ್ಮ, ಅಜ್ಜಿಯನ್ನು ಕೊಂದು, ದೇಹವನ್ನು ಸುಟ್ಟು ಹಾಕಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಉದಿತ್ ಭೋಯ್ ಮಾದಕ ವ್ಯಸನಿಯಾಗಿದ್ದು, ತಂದೆ ಹಣ ಕೊಡಲಿಲ್ಲ ಎನ್ನುವ ಕಾರಣಕ್ಕೆ ಮನೆಯಲ್ಲಿದ್ದವರನ್ನೆಲ್ಲಾ ಹತ್ಯೆ ಮಾಡಿದ್ದಾನೆ.ಬಳಿಕ ಮೂವರ ದೇಹವನ್ನೂ ಮನೆಯ ಹಿಂಭಾಗ ಸುಟ್ಟು ಹಾಕಿದ್ದಾನೆ. ಸಿಂಗ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪುಟ್ಕಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು 24 ವರ್ಷದ ಉದಿತ್ ಭೋಯ್ ಎಂದು ಗುರುತಿಸಲಾಗಿದ್ದು, ಮಾದಕ ವ್ಯಸನಿಯಾಗಿದ್ದು, ತಂದೆ ಹಣ ನಿರಾಕರಿಸಿದ ನಂತರ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ತಂದೆ ಪ್ರಭಾತ್ ಭೋಯ್ ತನ್ನ ಪತ್ನಿ, ತಾಯಿ ಮತ್ತು ಮಗನೊಂದಿಗೆ ವಾಸವಾಗಿದ್ದರು. ಉದಿತ್ ತನ್ನ ತಂದೆ-ತಾಯಿ ಮತ್ತು ಅಜ್ಜಿ ಮಲಗಲು ಹೋದಾಗ ಕೊಂದಿದ್ದಾನೆ. ದೊಣ್ಣೆಯಿಂದ ತಂದೆಯ ತಲೆಗೆ ಹೊಡೆದು ನಂತರ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಲಾಟೆಯಿಂದ ಎಚ್ಚರಗೊಂಡ ಅಜ್ಜಿ ಮೇಲೂ ಉದಿತ್ ಹಲ್ಲೆ ನಡೆಸಿದ್ದಾನೆ.

ಮತ್ತಷ್ಟು ಓದಿ: Mumbai: ತನ್ನ 2 ವರ್ಷದ ಮಗುವನ್ನು ಹತ್ಯೆ ಮಾಡಿ, ನದಿಗೆ ಎಸೆದ ಪಾಪಿ ತಂದೆ

ನಂತರ ಅವರ ಶವಗಳನ್ನು ಮನೆಯ ಬಾತ್ ರೂಂನಲ್ಲಿ ಇರಿಸಿದ್ದರು. ಮರುದಿನ, ಉದಿತ್ ಮನೆಯ ಹಿತ್ತಲಿನಲ್ಲಿ ಮರ ಮತ್ತು ಸ್ಯಾನಿಟೈಸರ್ ಬಳಸಿ ದೇಹಗಳಿಗೆ ಬೆಂಕಿ ಹಚ್ಚಿದ್ದ. ನಂತರ ಉದಿತ್ ಅವರು ಮೇ 12 ರಂದು ಸಿಂಗ್‌ಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದ. ಇನ್ನೊಬ್ಬ ಮಗ ಅಮಿತ್ ರಾಯ್​ಪುರದಲ್ಲಿ ಓದುತ್ತಿದ್ದ, ಆತ ಎಲ್ಲರೂ ನಾಪತ್ತೆಯಾಗಿರುವ ಬಗ್ಗೆ ಅನುಮಾನಗೊಂಡಿದ್ದ.

ಅವರು ಪುಟ್ಕಾದಲ್ಲಿರುವ ಅವರ ನಿವಾಸಕ್ಕೆ ಬಂದಾಗ, ಹಿತ್ತಲಿನಲ್ಲಿ ರಕ್ತದ ಕಲೆಗಳು, ಸುಟ್ಟ ಜಾಗ ಜತೆಗೆ ಮತ್ತು ಮಾನವ ಮೂಳೆಗಳು ಕಂಡುಬಂದವು. ಪರಿಸ್ಥಿತಿಯಿಂದ ಆತಂಕಗೊಂಡ ಅಮಿತ್ ತಕ್ಷಣ ಸಿಂಗ್‌ಪುರ ಪೊಲೀಸ್ ಠಾಣೆಗೆ ತೆರಳಿ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಉದಿತ್ ಭೋಯ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆರಂಭದಲ್ಲಿ ಪೊಲೀಸರಿಗೆ ಅಸ್ಪಷ್ಟ ಉತ್ತರ ನೀಡಿ ದಾರಿತಪ್ಪಿಸಲು ಯತ್ನಿಸಿದ ಆತ ಬಳಿಕ ತಪ್ಪೊಪ್ಪಿಕೊಂಡಿದ್ದಾನೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ