ಚಿಕ್ಕಬಳ್ಳಾಪುರ: ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 21, 2024 | 9:50 PM

ಚಿಕ್ಕಬಳ್ಳಾಪುರ(Chikkaballapur)ದ ಇಂದಿರಾನಗರದ ಮನೆಯೊಂದರಲ್ಲಿ ವ್ಯಕ್ತಿಯೋರ್ವ ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ನಡೆದಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಹತ್ಯೆಗೆ ಹಳೆ ದ್ವೇಷವೇನಾದರೂ ಇತ್ತಾ?, ಎಂಬ ಕುರಿತು ವಿಚಾರಣೆ ಶುರುವಾಗಿದೆ.

ಚಿಕ್ಕಬಳ್ಳಾಪುರ: ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ
ಆರೋಪಿ ರಾಘವೇಂದ್ರ, ಮೃತ ವ್ಯಕ್ತಿ
Follow us on

ಚಿಕ್ಕಬಳ್ಳಾಪುರ, ಫೆ.21: ವ್ಯಕ್ತಿಯೋರ್ವ ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ(Chikkaballapur)ದ ಇಂದಿರಾನಗರದ ಮನೆಯಲ್ಲಿ ನಡೆದಿದೆ. ಆಂಜಿನಪ್ಪ(35) ಮೃತ ರ್ದುದೈವಿ. ಗೃಹಿಣಿ ಆಶಾ ಎಂಬುವವರು ಒಂಟಿಯಾಗಿದ್ದ ವೇಳೆ ಆಂಜಿನಪ್ಪ ಬೆಡ್​ರೂಮ್​ಗೆ ನುಗ್ಗಿದ್ದಾನೆ. ಕೂಡಲೇ ಎಚ್ಚೆತ್ತ ಮಹಿಳೆ ಮೈದುನನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮನೆಗೆ ಬಂದ ಮೈದುನ ರಾಘವೇಂದ್ರ ಎಂಬಾತ ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿ ಆಂಜಿನಪ್ಪನನ್ನು ಹತ್ಯೆ ಮಾಡಿದ್ದಾನೆ. ಬಳಿಕ ತಾನೇ ಹೋಗಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆ ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆಯ ತರಬನಹಳ್ಳಿಯಲ್ಲಿ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಸುರೇಶ್(43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೌಟುಂಬಿಕ ಕಲಹ ಹಿನ್ನೆಲೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಇದನ್ನೂ ಓದಿ:ಕಡೂರಿನಲ್ಲಿ ಬೆಂಗಳೂರಿನ ಕ್ಯಾಬ್ ಡ್ರೈವರ್ ಕೊಲೆ: ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಮಹಿಳೆ ಸಜೀವ ದಹನ

ಚಿತ್ರದುರ್ಗ: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಮಹಿಳೆ ಸಜೀವ ದಹನವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಳವಿಬಾವಿ ಪ್ರದೇಶ ಬಳಿ ನಡೆದಿದೆ. ಗುಡಿಸಿಲಿನಲ್ಲಿ ವಾಸವಾಗಿದ್ದ ಜಯಬಾಯಿ(50)ಮೃತ ರ್ದುದೈವಿ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Wed, 21 February 24