Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಓಡಿ ಹೋಗಿ ಮದುವೆಯಾದ ಪ್ರೇಮಿಗಳು, ಯುವಕನ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ

ಸದ್ಯ ಗುಡಿಬಂಡೆ ಠಾಣೆ ಪೊಲೀಸರು ಗ್ರಾಮದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಯುವಕನ ತಂದೆ ತಾಯಿ ಗಾಯಗೊಂಡು ಆಸ್ಪತ್ರೆ ಸೇರಿರುವ ಕಾರಣ ಹುಡುಗಿಯ ಕಡೆಯವರು ಕೆಲವರು ಗಾಯವಾದಂತೆ ನಟಿಸಿ ಅವರು ಸಹ ಗುಡಿಬಂಡೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಿಕ್ಕಬಳ್ಳಾಪುರ: ಓಡಿ ಹೋಗಿ ಮದುವೆಯಾದ ಪ್ರೇಮಿಗಳು, ಯುವಕನ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ
ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: Ganapathi Sharma

Updated on: Dec 19, 2023 | 2:42 PM

ಚಿಕ್ಕಬಳ್ಳಾಪುರ, ಡಿಸೆಂಬರ್ 19: ಬೆಳಗಾವಿಯಲ್ಲಿ ನಡೆದ ಪ್ರೇಮ ಪ್ರಕರಣವೊಂದರಲ್ಲಿ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ನಡೆಸಿಕೊಂಡ ಘಟನೆಯ ಕಹಿ ನೆನಪು ಮಾಸುವ ಮುನ್ನ ಇತ್ತ ಚಿಕ್ಕಬಳ್ಳಾಪುರದಲ್ಲಿ (Chikkaballapur) ಅಂಥದ್ದೇ ಘಟನೆ ನಡೆದಿದೆ. ಪ್ರೇಮಿಗಳು ಓಡಿ ಹೋಗಿ ಮದುವೆ ಮಾಡಿಕೊಂಡ ಕಾರಣ ಯುವತಿಯ ಕಡೆಯವರು ಯುವನ ತಂದೆ ತಾಯಿ ಮೇಲೆ ಮಾರಣಾಂತಿಕವಾಗಿ ಹೊಡೆದು ಗಾಯಗೋಳಿಸಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಯುವಕ, ಯುವತಿ ಒಂದೇ ಜಾತಿ, ಒಂದೇ ಸಮುದಾಯದವರಾಗಿದ್ದು, ಅಕ್ಕ-ಪಕ್ಕದ ನಿವಾಸಿಗಳು. ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸಿ ಕೆಲವು ದಿನಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದರು. ಇವರ ಮದುವೆಗೆ ಯುವತಿಯ ಮನೆಯವರು ತೀವ್ರ ವಿರೋದ ವ್ಯಕ್ತಪಡಿಸಿದ ಕಾರಣ ಗ್ರಾಮಸ್ಥರು ನ್ಯಾಯ ಪಂಚಾಯತಿ ಮಾಡಿ ಯುವತಿಯನ್ನು ತಂದೆ ತಾಯಿ ಜೊತೆ ಮನೆಗೆ ಕಳುಹಿಸಿ ಕೊಟ್ಟಿದ್ದರು. ಆದ್ರೆ ಇಬ್ಬರೂ ಅಷ್ಟಕ್ಕೆ ಸುಮ್ಮನಾಗದೆ ಸೋಮವಾರ ಮತ್ತೆ ಒಂದುಗೂಡಿ ಮನೆಯಿಂದ ಎಸ್ಕೇಪ್ ಆಗಿದ್ದರು.

ಇದರಿಂದ ಕುಪಿತಗೊಂಡ ಯುವತಿಯ ಕಡೆಯವರು ಯುವಕನ ತಂದೆ ತಾಯಿ ಇದ್ದ ಮನೆಯ ಮೇಲೆ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಯುವಕನ ತಂದೆ ತಾಯಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ

ಸದ್ಯ ಗುಡಿಬಂಡೆ ಠಾಣೆ ಪೊಲೀಸರು ಗ್ರಾಮದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಯುವಕನ ತಂದೆ ತಾಯಿ ಗಾಯಗೊಂಡು ಆಸ್ಪತ್ರೆ ಸೇರಿರುವ ಕಾರಣ ಹುಡುಗಿಯ ಕಡೆಯವರು ಕೆಲವರು ಗಾಯವಾದಂತೆ ನಟಿಸಿ ಅವರು ಸಹ ಗುಡಿಬಂಡೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತ ಯುವಕನ ತಾಯಿಯ ತಲೆ ಹಾಗೂ ಅವರ ತಂದೆಯ ಹೊಟ್ಟೆಗೆ ಗಾಯಗಳಾಗಿವೆ.

ಇತ್ತಿಚಿಗೆ ಇದೇ ಗುಡಿಬಂಡೆ ತಾಲೂಕಿಮ ಮೇಲಿನಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ಅಂತರ್ಜಾತಿ ಪ್ರೇಮಿಗಳು ಓಡಿ ಹೋಗಿ ಮದುವೆ ಮಾಡಿಕೊಂಡಿರುವ ಕಾರಣ ಕುಪಿತಗೊಂಡ ಹುಡುಗಿಯ ಕಡೆವರು ಯುವಕನ ಆಟೊ ಸುಟ್ಟು ಹಾಕಿದ್ದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್