Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ; ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ದಾಳಿ, ಮೂವರು ವಶಕ್ಕೆ

ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಾ ಭ್ರಷ್ಟ ಅಧಿಕಾರಿಗಳ ಚಳಿ ಬಿಡುತ್ತಿದ್ದಾರೆ. ಇಂದು ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ದಾಳಿ ನಡೆಸಿ ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ; ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ದಾಳಿ, ಮೂವರು ವಶಕ್ಕೆ
ಬಾಗೇಪಲ್ಲಿ ಆರ್​ಟಿಒ ಚೆಕ್​ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ
Follow us
TV9 Web
| Updated By: Rakesh Nayak Manchi

Updated on:Oct 22, 2022 | 10:45 AM

ಚಿಕ್ಕಬಳ್ಳಾಪುರ: ಎಸಿಬಿ ರದ್ದುಗೊಂಡ ನಂತರ ರಾಜ್ಯದಲ್ಲಿ ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ ಅಲ್ಲೊಂದು ಇಲ್ಲೊಂದು ಬೇಟೆಯಾಡುತ್ತಲೇ ಇದೆ. ನಿನ್ನೆ ಬೆಂಗಳೂರು, ಕೊಡಗು, ಮೈಸೂರಿನಲ್ಲಿ ಒಟ್ಟು ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಇಂದು ಚಿಕ್ಕಬಳ್ಳಾಪುರದಲ್ಲಿ ಮತ್ತು ಕೋಲಾರದಲ್ಲಿ ಬೇಟೆಯಾಡುತ್ತಿದೆ. ವಾಹನ ಚಾಲಕರಿಂದ ಹೆಚ್ಚುವರಿ ಹಣ ವಸೂಲಿ ಆರೋಪ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಆರ್​ಟಿಒ ಚೆಕ್​ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿರುವ ಈ ಚೆಕ್​ಪೋಸ್ಟ್​ ಮೇಲೆ ದಾಳಿ ನಡೆಸಿದಾಗ ಹಣ ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು ದಾಖಲೆಗಳ ಜೊತೆ ಹಣದ ಮೂಲದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್​ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಆರ್​ಟಿಒ ಇನ್ಸ್​ಪೆಕ್ಟರ್ ಮಹಾದೇವಪ್ಪ ಮತ್ತು ಸಿಬ್ಬಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಣ್ಣ ನೀರಾವರಿ ಇಲಾಖೆಯ ಎಇಇ ಲೋಕಾಯುಕ್ತ ಬಲೆಗೆ

ಕೋಲಾರ: ನಿನ್ನೆಯಷ್ಟೇ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬೆಸ್ಕಾಂ ಎಇ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಇದೀಗ ಕೋಲಾರದಲ್ಲಿ ಸಣ್ಣ ನೀರಾವರಿ ಇಲಾಖೆಯ ಎಇಇ ಲಂಚಕ್ಕೆ ಕೈಯೊಡ್ಡುತ್ತಿದ್ದಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಕೋಲಾರ ಸಣ್ಣನೀರಾವರಿ ಇಲಾಖೆ ಎಇಇ ಗುರುಶಂಕರ್ ಅವರು ಚೆಕ್ ಡ್ಯಾಂ ನಿರ್ಮಾಣದ ಬಿಲ್ ನೀಡಲು ಮಾಲೂರು ಗುತ್ತಿಗೆದಾರ ರಾಘವೇಂದ್ರ ಎಂಬುವರಲ್ಲಿ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಅದರಂತೆ ಕೋಲಾರ ತಾಲ್ಲೂಕು ನರಸಾಪುರ ರಾಷ್ಟ್ರೀಯ ಹೆದ್ದಾರಿ-75 ರ ಕಾಫಿಡೇ ಡೇ ಬಳಿ 40 ಲಕ್ಷ ರೂ. ಪೈಕಿ 40 ಸಾವಿರ ರೂಪಾಯಿ ಪಡೆಯುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿ ಗುರುಶಂಕರ್​ರನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್​ಪಿ ಉಮೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 am, Sat, 22 October 22

‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ