AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸಾವು; ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು

ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೊರ್ವಳು, ಕಾಲೇಜಿನ ಹಾಸ್ಟಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ.

ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸಾವು; ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು
ಮೃತ ವಿದ್ಯಾರ್ಥಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 05, 2023 | 8:57 AM

Share

ಚಿಕ್ಕಬಳ್ಳಾಫುರ: ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಕ್ಷುಲ್ಲಕ ಕಾರಣಗಳಿಗೆ ಪ್ರಾಣವನ್ನೇ ತ್ಯಜಿಸುತ್ತಿದ್ದಾರೆ. ಅದರಂತೆ ಇದೀಗ ಇಂಜಿನಿಯರಿಂಗ್(Engineering) ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಹೌದು ಕೋಲಾರ(Kolar) ಜಿಲ್ಲೆ ಶ್ರೀನಿವಾಸಪುರ ತಾಲೂಕು ಎಲ್ದೂರು ನಿವಾಸಿಯಾದ ಪ್ರೀತಿ ಎಂಬ 22 ವರ್ಷದ ಯುವತಿ, ಚಿಕ್ಕಬಳ್ಳಾಫುರ (Chikkaballapur) ನಗರ ಹೊರಹೊಲಯದ ಪ್ರತಿಷ್ಠಿತ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಇನ್ ಪಾರ್ಮಮೇಷನ್ ಸೈನ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ವಿದ್ಯಾಬ್ಯಾಸ ಮಾಡುತ್ತಾ, ಕಾಲೇಜಿನ ಲೇಡಿಸ್ ಹಾಸ್ಟಲ್(Hostel)​ನಲ್ಲಿ ತಂಗಿದ್ದಳು, ಆದ್ರೆ, ನಿನ್ನೆ(ಜು.4) ಮಧ್ಯಾಹ್ನ ರೂಮ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಇದರಿಂದ ಆಕೆಯ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರೀತಿ, ನಿನ್ನೆ ಬೆಳಿಗ್ಗೆ ಕಾಲೇಜಿಗೆ ಹೋಗಿರಲಿಲ್ಲ. ಹಾಸ್ಟಲ್​ನಲ್ಲಿಯೇ ಇದ್ದಳು. ಮೈಯಲ್ಲಿ ಹುಷಾರು ಇಲ್ಲ, ಆದ್ದರಿಂದ ಕಾಲೇಜಿಗೆ ಹೋಗಲ್ಲವೆಂದು ಹಾಸ್ಟಲ್ ವಾರ್ಡನ್ ಹಾಗೂ ಸ್ನೇಹಿತೆಗೆ ತಿಳಿಸಿದ್ದಾಳೆ. ಇದಾದ ಬಳಿಕ 12 ಗಂಟೆ ಸಮಯದಲ್ಲಿ ಆಕೆಯ ಸ್ನೇಹಿತೆ ಪ್ರೀತಿಗೆ ಹುಷಾರ್​ ಇರಲಿಲ್ಲ, ಹೇಗಿದ್ದಾಳೆ ಎಂದು ನೋಡಲು ಆಕೆಯ ರೂಮ್ ಬಳಿ ಹೋಗಿ ನೋಡಿದಾಗ, ಪ್ರೀತಿ ನೇಣು ಬಿಗಿದ ಸ್ಥಿತಿಯಲ್ಲಿ ಕಾಣಿಸಿದ್ದಾಳೆ.

ಇದನ್ನೂ ಓದಿ:ಪದವಿ ಮುಗಿಸಿದ್ದರೂ ಉದ್ಯೋಗವಿಲ್ಲ, ಮದ್ವೆಯಾಗಲು ಹೆಣ್ಣು ಸಿಕ್ಕಿಲ್ಲ; ಖಿನ್ನತೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆ

ಇನ್ನು ವಿಷಯ ಗೊತ್ತಾಗುತ್ತಿದ್ದಂತೆ ಕಾಲೇಜಿನ ಆಡಳಿತ ಮಂಡಳಿ ತಕ್ಷಣ ರೂಮ್​ಗೆ ಆಗಮಿಸಿ ನೋಡುವಷ್ಟರಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಆದ್ರೂ, ಶವ ಕೆಳಗೆ ಇಳಿಸಿ ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದಾರೆ. ಏನೂ ಪ್ರಯೋಜನವಾಗಿಲ್ಲ. ಮನೆಯ ವೈಯಕ್ತಿಕ ಸಮಸ್ಯೆಯೋ, ಅಥವಾ ಕಾಲೇಜು ಸಮಸ್ಯೆಯೋ. ಯಾವುದನ್ನೂ ಸ್ಪಷ್ಟಪಡಿಸದ ಪ್ರೀತಿ, ತಂಗಿದ್ದ ರೂಮ್​ನಲ್ಲಿಯೇ ಶವವಾಗಿ ಪತ್ತೆಯಾಗಿದ್ದು, ಪೋಷಕರು ಅನುಮಾನ ವ್ಯಕ್ತಪಡಿಸಿ ವಿಜಯಪುರ ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ