ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ದೀಪಾವಳಿ ಹಬ್ಬಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಮೂವರು ಈಜಾಡಲು ಹೋಗಿ ನೀರುಪಾಲಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಬಳಿ ನಡೆದಿದೆ. ಊಟದ ನಂತರ ಈಜಾಡಲು ಕೆರೆಗೆ ಇಳಿದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸದ್ಯ ಸ್ಥಳಕ್ಕೆ ಪೆರೇಸಂದ್ರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು
ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 03, 2024 | 6:39 PM

ಚಿಕ್ಕಬಳ್ಳಾಪುರ, ನವೆಂಬರ್​ 03: ಒಂದೇ ಕುಟುಂಬದ ಮೂವರು ವ್ಯಕ್ತಿಗಳು ಕೆರೆಯಲ್ಲಿ ಮುಳುಗಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಬಳಿ ನಡೆದಿದೆ. ರಂಜಿತ್(27), ರಮ್ಯಾ(24), ಅಭಿಲಾಶ್(21) ಮೃತ ದುರ್ದೈವಿಗಳು. ದೀಪಾವಳಿ ಹಬ್ಬದ ಪ್ರಯುಕ್ತ ಸಂಬಂಧಿಗಳು ಊಟಕ್ಕೆ ಸೇರಿದ್ದರು. ಊಟದ ನಂತರ ಈಜಾಡಲು ಕೆರೆಗೆ ಇಳಿದಿದ್ದಾರೆ. ಆದರೆ ಆಳ ಅರಿಯದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ರಾಮನಗರ ಮೂಲದ ರಮ್ಯಾ, ಚಂದಪುರ ಮೂಲದ ಅಭಿಲಾಷ್ ಮತ್ತು ಶ್ರೀನಿವಾಸಪುರ ಮೂಲದ ಎಸ್. ರಂಜೀತ್ ಕುಮಾರ್​ ದೀಪಾವಳಿ ಹಬ್ಬದ ಪ್ರಯುಕ್ತ ಸಂಬಂಧಿಕರ ಮನೆಗೆ ಮೂವರು ಆಗಮಿಸಿದ್ದಾಗ ಅವಘಡ ಸಂಭವಿಸಿದೆ. ಸದ್ಯ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್​ಪಿ ಕುಶಲ್ ಚೌಕ್ಸೆ, ಎಎಸ್ಪಿ ಆರ್.ಐ ಖಾಸಿಂ, ಡಿವೈಎಸ್​ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿ ಭ್ರಮೆ: ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ನೆಲಮಂಗಲ: ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿ ಎಂಬ ಭ್ರಮೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭೂಸಂದ್ರದಲ್ಲಿ ನಡೆದಿದೆ. ಕೃಷ್ಣಮೂರ್ತಿ(40) ಮೃತ ದುರ್ದೈವಿ.

ಇದನ್ನೂ ಓದಿ: ರಾಜಸ್ಥಾನದಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದು ಕಾರು ಕದಿಯುವ ಖದೀಮರ ಬಂಧನ

ಮೃತ ಕೃಷ್ಣಮೂರ್ತಿ 2022ರಲ್ಲಿ ತನ್ನ ಪತ್ನಿ ಶೃತಿಯನ್ನು ಕೊಂದು ಜೈಲು ಪಾಲಾಗಿದ್ದ. ಎರಡು ವರ್ಷ ಜೈಲಿನಲ್ಲಿ ಇದ್ದು ಕಳೆದ 6 ತಿಂಗಳ ಹಿಂದೆ ಬಿಡುಗಡೆ ಆಗಿದ್ದ. ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿ ಬಗ್ಗೆ ಸ್ನೇಹಿತರ ಜೊತೆ ಚರ್ಚೆ ಮಾಡಿದ್ದ ಕೃಷ್ಣಮೂರ್ತಿ ದೀಪಾವಳಿಯಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೋರಿ ತಿವಿದು ಯುವಕ ದುರ್ಮರಣ

ಕಾರವಾರ: ಹೋರಿ ತಿವಿದು ಯುವಕ ದುರ್ಮರಣ ಹೊಂದಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿರುವ ಕಲ್ಮೇಶ್ವರ ಮಠದಲ್ಲಿ ನಡೆದಿದೆ. ಚಿಗಳ್ಳಿಯ ಪರಮೇಶ್ ಸಿದ್ದಪ್ಪ ಹರಿಜನ(21) ಮೃತ ವ್ಯಕ್ತಿ.

ಇದನ್ನೂ ಓದಿ: ನಮ್ಮ ಮನೆ ಬಳಿ ಯಾಕೆ ಪಟಾಕಿ ಹಚ್ಚುತ್ತೀರಿ ಅಂದಿದ್ದಕ್ಕೆ ಕೊಲೆ: ಐವರು ವಶಕ್ಕೆ

ಕಲ್ಮೇಶ್ವರ ಮಠದ ಬಳಿ ಹೋರಿ ಹಬ್ಬ ನೋಡಲು ಹೋಗಿದ್ದರು. ಈ ವೇಳೆ ಏಕಾಏಕಿ ಯುವಕನ ಮೇಲೆ ದಾಳಿ ಮಾಡಿದೆ. ಪರಮೇಶ್ ಸಿದ್ದಪ್ಪ ಎದೆಗೆ ಬಲವಾಗಿ ಹೋರಿ ತಿವಿದಿದ ಕಾರಣ ಮೃತಪಟ್ಟಿದ್ದಾರೆ. ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:15 pm, Sun, 3 November 24

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ