ಅಪರಾಧ ಸುದ್ದಿ: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಜಮೀನಿನಲ್ಲಿ ಕುರಿ ಮೇಯಿಸಿದ್ದಕ್ಕೆ ಹಲ್ಲೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಎರಡು ಪ್ರಮುಖ ಅಪರಾಧ ಸುದ್ದಿಗಳು ಇಲ್ಲಿವೆ.
ಚಿಕ್ಕಮಗಳೂರು: 17 ವರ್ಷದ ಬಾಲಕಿ ಮೇಲೆ ಯುವಕನಿಂದ ಅತ್ಯಾಚಾರ ನಡೆದ ಪ್ರಕರಣವೊಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಿಸಿ ಆರೋಪಿ ನಿರಂಜನ್ (24) ಎಂಬಾತನನ್ನು ಬಂಧಿಸಲಾಗಿದೆ.
ಜಮೀನಿನಲ್ಲಿ ಕುರಿ ಮೇಯಿಸಿದ್ದಕ್ಕೆ ಹಲ್ಲೆ ಜಮೀನಿನಲ್ಲಿ ಕುರಿಗಳನ್ನು ಮೇಯಿಸಿದ್ದಕ್ಕೆ ವ್ಯಕ್ತಿ ಮೇಲೆ ಇನ್ನೋರ್ವ ವ್ಯಕ್ತಿ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬೊಂಬೈಲ್ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆ ಹಲ್ಲೆಗೊಳಗಾದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಲ್ಲೆಗೊಳಗಾಗಿದ್ದ ಮಂಜುನಾಥ್ (53) ಮೃತ ದುರ್ದೈವಿ, ಬಸಗೋಡು ಗ್ರಾಮದ ಕಿರಣ್ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ಕಿರಣ್ನನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಮೃತ ಮಂಜುನಾಥ ಅವರ ಕುಟುಂಬಸ್ಥರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ಅಮೆರಿಕದ ಗುಪ್ತಚರ ಇಲಾಖೆ ಅಧಿಕಾರಿಯಲ್ಲಿ ಕಾಣಿಸಿಕೊಂಡಿರುವ ಹವಾನಾ ಸಿಂಡ್ರೋಮ್ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ
(Chikkamagaluru Crime News Rape on 17 year old girl)