AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನಿದ್ದರೂ ಬೇರೊಬ್ಬನೊಂದಿಗೆ ಲವ್ವಿಡವ್ವಿ: ಪ್ರಿಯಕರನಿಂದ ಗೃಹಿಣಿಯ ಬರ್ಬರ ಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಎನ್​.ಆರ್.ಪುರ ತಾಲೂಕಿನ ಕಿಚ್ಚಬ್ಬಿ ಗ್ರಾಮದಲ್ಲಿ ಮಕ್ಕಳ ಎದುರಲ್ಲೇ ಪ್ರಿಯಕರನಿಂದ ಗೃಹಿಣಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರ ಭೇಟಿ, ಪರಿಶೀಲನೆ ಮಾಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಬಸ್​ನಿಂದ ಬಿದ್ದು ಸಾವನ್ನಪ್ಪಿದ್ದಾನೆ.

ಗಂಡನಿದ್ದರೂ ಬೇರೊಬ್ಬನೊಂದಿಗೆ ಲವ್ವಿಡವ್ವಿ: ಪ್ರಿಯಕರನಿಂದ ಗೃಹಿಣಿಯ ಬರ್ಬರ ಹತ್ಯೆ
ಗಂಡನಿದ್ದರೂ ಬೇರೊಬ್ಬನೊಂದಿಗೆ ಲವ್ವಿಡವ್ವಿ: ಪ್ರಿಯಕರನಿಂದ ಗೃಹಿಣಿಯ ಬರ್ಬರ ಹತ್ಯೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Dec 07, 2024 | 4:29 PM

Share

ಚಿಕ್ಕಮಗಳೂರು, ಡಿಸೆಂಬರ್​ 07: ತನ್ನ ಬಿಟ್ಟು ಗಂಡನ ಜತೆ ತೆರಳಿದ್ದಕ್ಕೆ ಮಕ್ಕಳ ಎದುರಲ್ಲೇ ಪ್ರಿಯಕರನಿಂದ ಮಹಿಳೆಯನ್ನು ಹತ್ಯೆಗೈದಿರುವಂತಹ (kill) ಘಟನೆ ಜಿಲ್ಲೆಯ ಎನ್​.ಆರ್.ಪುರ ತಾಲೂಕಿನ ಕಿಚ್ಚಬ್ಬಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ತೃಪ್ತಿ(25) ಹತ್ಯೆಗೈದ ಪ್ರಿಯಕರ ಚಿರಂಜೀವಿ, ಬಳಿಕ ಕೃಷಿ ಹೊಂಡಕ್ಕೆ ಶವ ಎಸೆದು ಪರಾರಿ ಆಗಿದ್ದಾನೆ. ಘಟನಾ ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ತೃಪ್ತಿ ಮತ್ತು ಚಿರಂಜೀವಿ ಫೇಸ್​ಬುಕ್​ ಮೂಲಕ ಪರಿಚಯವಾಗಿ ಬಳಿಕ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಒಂದು ತಿಂಗಳ ಹಿಂದೆ ಪತಿ ರಾಜು ಬಿಟ್ಟು ಪ್ರಿಯಕರನ ಜೊತೆ ತೃಪ್ತಿ ನಾಪತ್ತೆಯಾಗಿದ್ದರು. ಈ ಬಗ್ಗೆ ಬಾಳೆಹೊನ್ನೂರು ಠಾಣೆಯಲ್ಲಿ ನಾಪತ್ತೆ ಕೇಸ್ ಕೂಡ ದಾಖಲಾಗಿತ್ತು.

ಇದನ್ನೂ ಓದಿ: ಮಕ್ಕಳ ಕಾಟಕ್ಕೆ ಬೇಸತ್ತು ನಾಲ್ಕು ಮಹಡಿ ಕಟ್ಟಡದಿಂದ ಹಾರಿ ವೃದ್ಧ ತಂದೆ ಆತ್ಮಹತ್ಯೆ

ಬಿಜಾಪುರದಲ್ಲಿ‌ ತಲೆಮರೆಸಿಕೊಂಡಿದ್ದ ತೃಪ್ತಿ ಮತ್ತು ಪ್ರಿಯಕರ ಚಿರಂಜೀವಿಯನ್ನು ಪೊಲೀಸರು ಹುಡುಕಿ ಕರೆತಂದಿದ್ದರು. ಪೋಷಕರ ಸಂಧಾನದ ಬಳಿ ಪತಿ ರಾಜುವಿನ ಜೊತೆ ತೃಪ್ತಿ ತೆರಳಿದ್ದಾರೆ. ಇದರಿಂದ ಕುಪಿತಗೊಂಡ ಚಿರಂಜೀವಿ ತೃಪ್ತಿಯನ್ನು ಹತ್ಯೆ ಮಾಡಿ ಪರಾರಿ ಆಗಿದ್ದಾನೆ. ಸದ್ಯ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಬಸ್​ನಿಂದ ಬಿದ್ದು ಸಾವು

ಮತ್ತೊಂದು ಪ್ರಕರಣದಲ್ಲಿ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಬಸ್​ನಿಂದ ಬಿದ್ದು ಸಾವನ್ನಪ್ಪಿರುವಂತಹ ಘಟನೆ  ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಬಳಿ ನಡೆದಿದೆ. ತಮಿಳುನಾಡು ಮೂಲದ ದೀನಾ ದಯಾಳ್(21) ಮೃತ ವಿದ್ಯಾರ್ಥಿ.

ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ: ಸಹಾಯ ಮಾಡಿದ್ದ ಆರೋಪಿ ಸ್ನೇಹಿತನಿಗೂ ಶಿಕ್ಷೆ ವಿಧಿಸಿದ ಕೋರ್ಟ್​

ಬೈಲಕುಪ್ಪೆ ಗೋಲ್ಡನ್ ಟೆಂಪಲ್ ವೀಕ್ಷಿಸಲು ಹೋಗುವಾಗ ಘಟನೆ ಸಂಭವಿಸಿದೆ. ಬಸ್ ಡೋರ್ ಲಾಕ್ ಆಗದ ಹಿನ್ನೆಲೆ ವಿದ್ಯಾರ್ಥಿ ಕೆಳಗೆ ಬಿದಿದ್ದು, ಬಿದ್ದ ತಕ್ಷಣ ಬಲವಾದ ಪೆಟ್ಟು ಬಿದ್ದು ದೀನಾ ದಯಾಳ್ ಸಾವನ್ನಪ್ಪಿದ್ದಾನೆ. ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು