ಚಿಕ್ಕಮಗಳೂರು: ಸರ್ಕಾರಿ ಬಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ತಾಯಿ, ಮಗ ದುರ್ಮರಣ

KSRTC ಬಸ್​ ಮತ್ತು ಪ್ರವಾಸಿಗರ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ. ಅದೇ ರೀತಿಯಾಗಿ ಅಪ್ರಾಪ್ತ ವಿದ್ಯಾರ್ಥಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಹೊರವಲಯದ ಕುಂಬಾಪುರ ಗೇಟ್ ಬಳಿ ನಡೆದಿದೆ.

ಚಿಕ್ಕಮಗಳೂರು: ಸರ್ಕಾರಿ ಬಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ತಾಯಿ, ಮಗ ದುರ್ಮರಣ
ಪ್ರಾತಿನಿಧಿಕ ಚಿತ್ರ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Aug 12, 2023 | 3:54 PM

ಚಿಕ್ಕಮಗಳೂರು, ಆಗಸ್ಟ್​ 12: ಸರ್ಕಾರಿ ಬಸ್ ಡಿಕ್ಕಿ  (accident) ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ತಾಯಿ ಮತ್ತು ಮಗ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ. ಪೂಜಾ ಹಿರೇಮಠ್, ರಾಜಶೇಖರ ಹಿರೇಮಠ್ ಮೃತ ದುರ್ದೈವಿಗಳು. ಗಾಯಗೊಂಡ ಶಿವಯಾಗಯ್ಯ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದು, ಸಕಲೇಶಪುರದಿಂದ ಮೂಡಿಗೆರೆ ಕಡೆ ಕೆಎಸ್​ಆರ್​ಟಿಸಿ ಬಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರೈಲಿಗೆ ತಲೆಕೊಟ್ಟು ಅಪ್ರಾಪ್ತ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಮನಗರ: ರೈಲಿಗೆ ತಲೆಕೊಟ್ಟು ಅಪ್ರಾಪ್ತ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಹೊರವಲಯದ ಕುಂಬಾಪುರ ಗೇಟ್ ಬಳಿ ನಡೆದಿದೆ. ಹತ್ತನೇ ತರಗತಿಯ ನವ್ಯಶ್ರೀ,(15) ಪಿಯು ವಿದ್ಯಾರ್ಥಿ ಹರ್ಷವರ್ಧನ್(17) ಮೃತರು. ಇಬ್ಬರು ಮೈಸೂರಿನ ನಂಜನಗೂಡಿಗೆ ತೆರಳಿದ್ದರು. ರೈಲ್ವೇ ಹಳಿಗಳ ಬಳಿ ಇಬ್ಬರು ಸುಮ್ಮನೇ ಕೂತಿದ್ದಾಗಿ ಕೆಲವರು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ವಿದ್ಯುತ್ ಪ್ರವಹಿಸಿ ದಂಪತಿ, ಮೊಮ್ಮಗಳು ಸಾವು; ಮತ್ತೊಂದೆಡೆ ಅಪಘಾತದಲ್ಲಿ ಇಬ್ಬರು ಸಾವು

ರಾತ್ರಿ ತಾಯಿಗೆ ಕರೆ ಮಾಡಿದ್ದ ನವ್ಯಶ್ರೀ, ಹರ್ಷವರ್ಧನ್ ಜತೆ ಇರುವುದಾಗಿ ಹೇಳಿದ್ದಾರೆ. ಮನೆಗೆ ಬರಲು  ತಾಯಿ ತಿಳಿಸಿದ್ದಾರೆ. ಬಳಿಕ ಇಬ್ಬರು ‌ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಬಟ್ಟೆ ಅಂಗಡಿಯಲ್ಲಿ ಮಾಲಕಿ ಅನುಮಾನಸ್ಪದ ಸಾವು 

ಹುಬ್ಬಳ್ಳಿ: ಬಟ್ಟೆ ಅಂಗಡಿಯಲ್ಲಿ ಮಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನವನಗರದಲ್ಲಿ ನಡೆದಿದೆ. 36 ವರ್ಷದ ಪ್ರಿಯಾ ಬೊಂಗಾಲೆ ಮೃತ ಅಂಗಡಿಯಲ್ಲಿ ಮಾಲಕಿ. ಇದು ಅನುಮಾನಸ್ಪದ ಸಾವ ಅಲ್ಲ, ಕೊಲೆ ಎಂದು ಪ್ರತಿ ವಿನೋದ್ ವಿರುದ್ದ ಪ್ರಿಯಾ ಕುಟುಂಬಸ್ಥರ ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ

ಕಂದಾಯ ಇಲಾಖೆ ದ್ವೀತಿಯ ದರ್ಜೆ ಸಹಾಯಕನಾಗಿರುವ ವಿನೋದ, ಕಳೆದ ಮೂರು ವರ್ಷಗಳಿಂದ ಬೇರೆ ಬೇರೆಯಾಗಿದ್ದರು. ಪ್ರಿಯಾ ತವರು ಮನೆಯಲ್ಲಿದ್ದರು ಗಂಡ ಕಿರುಕುಳ ಕೊಡುತ್ತಿದ್ದನಂತೆ. ಇದೇ ಕಾರಣಕ್ಕೆ ಗಂಡ ವಿನೋದ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪಿಸಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎನ್ನುತ್ತಿದ್ದಾರೆ ಪ್ರೀಯಾ ಕುಟುಂಬಸ್ಥರು. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೊಲೆರೊ ವಾಹನ ಡಿಕ್ಕಿ-ಬೈಕ್​ನಲ್ಲಿ ತೆರಳುತ್ತಿದ್ದ ಯುವಕರಿಬ್ಬರ ಸಾವು

ತುಮಕೂರು: ಬೊಲೆರೊ ವಾಹನ ಡಿಕ್ಕಿಯಾಗಿದ್ದು ಬೈಕ್​ನಲ್ಲಿ ತೆರಳುತ್ತಿದ್ದ ಯುವಕರಿಬ್ಬರು ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಬಳಿ ನಡೆದಿದೆ. ಚಿಕ್ಕಿಕೊಡಿಪಲ್ಲಿ ಗ್ರಾಮದ ಈಶ್ವರ(16), ಯಶ್ವಂತ್(17) ಮೃತರು. ಆಂಧ್ರಪ್ರದೇಶದ ರೊದ್ದಂ ತಾಲೂಕಿನ ಚಿಕ್ಕಿಕೊಡಿಪಲ್ಲಿ ಗ್ರಾಮದವರು. ರಾಮು(16) ಸ್ಥಿತಿ ಗಂಭೀರ, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್