ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರು ಹೊರವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ. ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು, ಸೆಪ್ಟೆಂಬರ್ 6: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಚಿಕ್ಕಮಗಳೂರು ಹೊರವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ. ಮಂಗಳೂರು ನಗರದ ವಿಜಯಪುರ ಬಡಾವಣೆ ನಿವಾಸಿಗಳು ನಿರಂಜನ್(42), ಚೆನ್ನಮ್ಮ(67) ಮೃತರು. ನಿರಂಜನ್ ಖಾಸಗಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.
ತರಕಾರಿ ವಾಹನದಲ್ಲಿ ಅಕ್ರಮವಾಗಿ ರಕ್ತಚಂದನ ಸಾಗಾಟ: ಐವರ ಬಂಧನ
ಚಾಮರಾಜನಗರ: ತರಕಾರಿ ವಾಹನದಲ್ಲಿ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡಿದ್ದ ಐವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 50 ಕೆಜಿ ತೂಕದ ರಕ್ತ ಚಂದನ ವಶಕ್ಕೆ ಪಡೆಯಲಾಗಿದೆ. ತರಕಾರಿ ಚೀಲಗಳ ತಳಭಾಗದಲ್ಲಿ ರಕ್ತಚಂದನ ಮರದ ತುಂಡುಗಳನ್ನು ಬಚ್ಚಿಟ್ಟು ಸಾಗಿಸುತ್ತಿದ್ದರು.
ಇದನ್ನೂ ಓದಿ: ಉತ್ತರ ಕನ್ನಡ: ಯುವಕನನ್ನ ಮಾರಕಾಸ್ತ್ರದಿಂದ ಕೊಚ್ಚಿ ಕೊಂದ ಮಾಜಿ ಸೈನಿಕ
ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ಲಕ್ಕೂರು ಬಳಿ ಬಂಡೀಪುರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ ಬೊಲೆರೋ ಪಿಕಪ್ ವಾಹನ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಗಳನ್ನ ಬಂಧಿಸಿರುವ ಖಾಕಿ ಪಡೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಭೀಮಾತೀರದ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ
ವಿಜಯಪುರ: ಜಿಲ್ಲೆ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿಯ ಭೀಮಾತೀರದ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ ಆಗಿದೆ. ಚಡಚಣ ತಾಲೂಕಿನ ಕಪನಿಂಬರಗಿ ಗ್ರಾಮದ ಶಾಂತಯ್ಯ ಹಿರೇಮಠ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಶಾಂತಯ್ಯ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಸ್ಥಳಕ್ಕೆ ಝಳಕಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಾಗಿದೆ.
ಬೈಕ್ ಕಳ್ಳತನ: ಓರ್ವ ಯುವಕ ಬಂಧನ, ಮತ್ತೋರ್ವ ಎಸ್ಕೇಪ್
ಬಾಗಲಕೋಟೆ: ಸ್ಕೂಟಿಯಲ್ಲಿ ಸಂಶಯಾತ್ಮಕವಾಗಿ ಹೊರಟಿದ್ದ ಯುವಕರನ್ನು ಹಿಡಿದು ವಿಚಾರಿಸಿದಾಗ ಬೈಕ್ ಕಳ್ಳತನ ಬಯಲಾಗಿರುವಂತಹ ಘಟನೆ ನಗರದ ಮುಚಖಂಡಿ ಕ್ರಾಸ್ನಲ್ಲಿ ನಡೆದಿದೆ. ಪ್ರಶಾಂತ ಪಟ್ಟದಕಲ್ (೨೦)ಬಂಧಿತ ಯುವಕ.
ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ತಾಯಿ, ಮಗನ ಬರ್ಬರ ಹತ್ಯೆ
ಸಿದ್ದು ಅಂಬಿಗೇರ ಎಸ್ಕೇಪ್ ಆದ ಮತ್ತೋರ್ವ ಯುವಕ. ಬಂಧಿತರಿಂದ ಹೊಂಡಾ ಡಿವೊ ಸ್ಕೂಟಿ, ಸ್ಪ್ಲೆಂಡರ್ ಪ್ಲಸ್, ಸ್ಪ್ಲೆಂಡರ್ ಪ್ರೊ,ಯಮಹಾ ಆರ್ ಎಕ್ 100 ಒಟ್ಟು ನಾಲ್ಕು ಬೈಕ್ ಜಪ್ತಿ ಮಾಡಲಾಗಿದೆ. ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವಾಹನಗಳನ್ನು ಕದಿಯಲಾಗಿದೆ.
ಅನುಮಾಸ್ಪದವಾಗಿ ಬಾರ್ ಬಳಿ ವ್ಯಕ್ತಿ ಶವ ಪತ್ತೆ
ಬೆಂಗಳೂರು: ಹೆಸರಘಟ್ಟ ರಸ್ತೆಯ ರೇಣುಕಾ ಬಾರ್ ಎದುರು ಸಿಡೇದಹಳ್ಳಿಯ ಮುತ್ತುರಾಯಪ್ಪ(35) ಅನುಮಾನಾಸ್ಪದ ಸಾವನ್ನಪ್ಪಿದ್ದಾರೆ. ಮದ್ಯ ಸೇವಿಸಿ ಬಾರ್ ಮುಂದೆ ಕುಳಿತಿದ್ದಾಗ ಮುತ್ತುರಾಯಪ್ಪ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಾಗಲಗುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.