ಚಿಕ್ಕಮಗಳೂರು: ಹಾಡಹಗಲೇ ಗುಂಡಿನ ದಾಳಿ ನಡೆಸಿ ಬೈಕ್​ನಲ್ಲಿ ತೆರಳುತ್ತಿದ್ದ ಸವಾರರಿಬ್ಬರ ಹತ್ಯೆ

| Updated By: ಗಂಗಾಧರ​ ಬ. ಸಾಬೋಜಿ

Updated on: Feb 20, 2023 | 12:46 PM

ಹಾಡು ಹಗಲೇ ಗುಂಡಿನ ದಾಳಿ ನಡೆಸಿ ಬೈಕ್​ನಲ್ಲಿ ತೆರಳುತ್ತಿದ್ದ ಸವಾರರಿಬ್ಬರ ಹತ್ಯೆ ಮಾಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರುಳ್ಳಿಬಿದರೆ ಗ್ರಾಮದ ಬಳಿ ಕೃತ್ಯವೆಸಗಲಾಗಿದೆ.

ಚಿಕ್ಕಮಗಳೂರು: ಹಾಡಹಗಲೇ ಗುಂಡಿನ ದಾಳಿ ನಡೆಸಿ ಬೈಕ್​ನಲ್ಲಿ ತೆರಳುತ್ತಿದ್ದ ಸವಾರರಿಬ್ಬರ ಹತ್ಯೆ
ಪ್ರಾತಿನಿಧಿಕ ಚಿತ್ರ
Image Credit source: prajavani.net
Follow us on

ಚಿಕ್ಕಮಗಳೂರು: ಹಾಡಹಗಲೇ ಗುಂಡಿನ ದಾಳಿ (shootout) ನಡೆಸಿ ಬೈಕ್​ನಲ್ಲಿ ತೆರಳುತ್ತಿದ್ದ ಸವಾರರಿಬ್ಬರ ಹತ್ಯೆ ಮಾಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರುಳ್ಳಿಬಿದರೆ ಗ್ರಾಮದ ಬಳಿ ಕೃತ್ಯವೆಸಗಲಾಗಿದೆ. ಚಂದ್ರುಳ್ಳಿಬಿದರೆ ಗ್ರಾಮದ ಪ್ರಕಾಶ್, ಪ್ರವೀಣ್ ಮೃತರು. ಚಿಕ್ಕಮಗಳೂರು ತಾಲೂಕಿನ ಉಜ್ಜಯಿನಿ ಗ್ರಾಮದ ರಮೇಶ್​ ಎಂಬಾತನಿಂದ ಕೋವಿಯಿಂದ ಗುಂಡುಹಾರಿಸಿ  ಹತ್ಯೆಗೈಯಲಾಗಿದೆ. ಸದ್ಯ ಆರೋಪಿ ರಮೇಶ್​ನನ್ನು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಡ್ಕೂರಿನಲ್ಲಿ ಜಾತ್ರೆ ವೇಳೆ ಪಟಾಕಿ ಸಿಡಿದು 5 ಮಕ್ಕಳಿಗೆ ಗಾಯ

ದಕ್ಷಿಣ ಕನ್ನಡ: ಕಿನ್ನಿಗೋಳಿ ಸಮೀಪದ ಮುಂಡ್ಕೂರಿನಲ್ಲಿ ಜಾತ್ರೆ ವೇಳೆ ಪಟಾಕಿ ಸಿಡಿದು ಐವರು ಮಕ್ಕಳಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ ಪ್ರಯುಕ್ತ ನಡೆಯುತ್ತಿದ್ದ ರಥೋತ್ಸವ ವೇಳೆ ಅವಘಡ ಸಂಭವಿಸಿದೆ. ಗಾಯಾಳು ಐವರು ಮಕ್ಕಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ದಾಖಲಾಗಿದೆ.

ಇದನ್ನೂ ಓದಿ: ಕೊಡಗು: ಮಗನನ್ನೇ ಹೊಡೆದು ಕೊಂದ ತಂದೆ; ಕಣ್ಣೀರು ಹಾಕುತ್ತಿರುವ ತಾಯಿ

ಹೊಲಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಬಿಳಿ ಜೋಳ ಸುಟ್ಟು ಕರಕಲು  

ಗದಗ: ಕಿಡಿಗೇಡಿಗಳು ಹೊಲಕ್ಕೆ ಬೆಂಕಿ ಹಚ್ಚಿದ ಪರಿಣಾಮ ಅಪಾರ ಪ್ರಮಾಣದ ಬಿಳಿ ಜೋಳ ಸುಟ್ಟು ಕರಕಲಾಗಿರುವಂತಹ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ನಡೆದಿದೆ. ಶಂಕ್ರಪ್ಪ, ಬಸಪ್ಪ, ಈರಪ್ಪ, ರಾಮಣ್ಣ ಕೊತಂಬರಿ ಎಂಬ ಸಹೋದರರಿಗೆ ಸೇರಿದ ಜಮೀನು. ಕಿಡಿಗೇಡಿಗಳಿಂದ ಪಕ್ಕದ ಪಾಳುಬಿದ್ದ ಜಮೀನಿಗೆ ಬೆಂಕಿ ಹಚ್ಚಿದ್ದು, ಅಲ್ಲಿಂದ ಬಿಳಿ ಜೋಳದ ಹೊಲಕ್ಕೆ ಬೆಂಕಿ ತಗುಲಿರೋ ಶಂಕೆ ವ್ಯಕ್ತವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು ರೈತರು ಕಂಗಾಲಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಆಕಸ್ಮಿಕ ಅಗ್ನಿ ಅವಘಡ-2 ಮೊಬೈಲ್ ಅಂಗಡಿಗಳು ಬೆಂಕಿಗಾಹುತಿ

ದೇವನಹಳ್ಳಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಮೊಬೈಲ್ ಅಂಗಡಿಗಳು ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೆಎಸ್​​ಆರ್​ಟಿಸಿ ಕಚೇರಿಯಲ್ಲಿನ ಎರಡು ಮೊಬೈಲ್ ಅಂಗಡಿಗಳಿಗೆ ಬೆಂಕಿ ತಗುಲುತ್ತಿದ್ದಂತೆ ಭೀತಿಗೊಂಡ ಜನರು ಅಂಗಡಿಗಳಿಂದ ಹೊರಬಂದಿದ್ದಾರೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಹಾಗೂ ಪೊಲೀಸರು ಟ್ಯಾಂಕರ್ ಮೂಲಕ ಬೆಂಕಿ ನಂದಿಸಿದ್ದಾರೆ. ಅದಾಗ್ಯೂ, ಅಂಗಡಿಯಲ್ಲಿದ್ದ ಮೊಬೈಲ್​ಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.

ಇದನ್ನೂ ಓದಿ: ಮದ್ಯ ಸೇವಿಸಿ ಸಿಕ್ಕ ಸಿಕ್ಕವರ ಮೇಲೆ ಮಚ್ಚಿನಿಂದ ದಾಳಿ; ಕಾರು ಚಾಲಕ ಜಸ್ಟ್ ಮಿಸ್

ಕೃಷಿ ಹೊಂಡಕ್ಕೆ ಬಿದ್ದು ತಾಯಿ-ಮಗು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ತಾಯಿ-ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ತಾಯಿ ರೂಪಾ (32), 9 ವರ್ಷದ ಮಗು ಹೇಮಂತ್ ಸಾವನ್ನಪ್ಪಿದ ದುರ್ದೈವಿಗಳು. ಜಾನುವಾರಿಗೆ ನೀರು ಕುಡಿಸಲು ಹೋಗಿದ್ದಾಗ ಈ ದುರ್ಘಟನೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಒಬ್ಬರನ್ನು ರಕ್ಷಿಸಲು ಹೋಗಿ ಹೊಂಡಕ್ಕೆ ಬಿದ್ದು ಇಬ್ಬರೂ ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳೀಯರು ಹೊಂಡದಿಂದ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:33 pm, Mon, 20 February 23