ಕಾಫಿ ವ್ಯಾಪಾರದಲ್ಲಿ 1 ಕೋಟಿ ನಷ್ಟ: ಚಿಕ್ಕಮಗಳೂರಿನ ವ್ಯಾಪಾರಿ ಬೆಂಗಳೂರಿನಲ್ಲಿ ಆತ್ಮಹತ್ಯೆ

1 ಕೋಟಿಗೂ ಹೆಚ್ಚು ನಷ್ಟ ಅನುಭವಿಸಿದ್ದ ಶಾಕೀರ್ ಅಹ್ಮದ್ ಜುಲೈ 13ರಿಂದ ನಾಪತ್ತೆಯಾಗಿದ್ದಾರೆಂದು ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಕಾಫಿ ವ್ಯಾಪಾರದಲ್ಲಿ 1 ಕೋಟಿ ನಷ್ಟ: ಚಿಕ್ಕಮಗಳೂರಿನ ವ್ಯಾಪಾರಿ ಬೆಂಗಳೂರಿನಲ್ಲಿ ಆತ್ಮಹತ್ಯೆ
ಮೃತ ಶಾಕೀರ್ ಅಹ್ಮದ್
Follow us
TV9 Web
| Updated By: guruganesh bhat

Updated on:Aug 02, 2021 | 10:49 PM

ಬೆಂಗಳೂರು: ಕಾಫಿ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ ಕಾರಣ ಶಾಕೀರ್ ಅಹ್ಮದ್(28) ಎಂಬ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ನಿವಾಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಖಾಸಗಿ ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 1 ಕೋಟಿಗೂ ಹೆಚ್ಚು ನಷ್ಟ ಅನುಭವಿಸಿದ್ದ ಶಾಕೀರ್ ಅಹ್ಮದ್ ಜುಲೈ 13ರಿಂದ ನಾಪತ್ತೆಯಾಗಿದ್ದಾರೆಂದು ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜುಲೈ 29ರಿಂದ ವಜ್ರೇಶ್ವರಿ ಲಾಡ್ಜ್ನಲ್ಲಿ ತಂಗಿದ್ದ ಶಾಕೀರ್, ಇಂದು ಮಧ್ಯಾಹ್ನ ಊಟಕ್ಕೆ ಹೊರ ಬರದಿದ್ದಾಗ ಲಾಡ್ಜ್ ಸಿಬ್ಬಂದಿ ಅನುಮಾನಗೊಂಡು ಪರಿಶೀಲಿಸಿದ್ದರು. ನೇಣುಬಿಗಿದ ಸ್ಥಿತಿಯಲ್ಲಿ ಶಾಕೀರ್ ಅಹ್ಮದ್ ಮೃತದೇಹ ಪತ್ತೆಯಾಗಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಪತಿಯಿಂದ ಪತ್ನಿಯ ಕೊಲೆ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಪತಿ ಪತ್ನಿಯನ್ನು ಹತ್ಯೆಗೈದ ಘಟನೆ ಬೆಂಗಳೂರಿನ ಚಂದ್ರಾಲೇಔಟ್ನಲ್ಲಿ ನಡೆದಿದೆ. ಸೈಯದ್ ಎಂಬಾತನೇ ಚಾಕುವಿನಿಂದ ಪತ್ನಿಯನ್ನು ಇರಿದು ಕೊಂದ ಪತಿಯಾಗಿದ್ದು, ಕ್ಷುಲ್ಲಕ ಕಾರಣಕ್ಕೆ ನಡೆದ ದಂಪತಿ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯಗೊಂಡಿದೆ. ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ ಟೌನ್ ಠಾಣೆ ಪೊಲೀಸರಿಂದ ಇಬ್ಬರು ವಶಕ್ಕೆ ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ ಇಬ್ಬರನ್ನು ನೆಲಮಂಗಲ ಟೌನ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ತಹಶೀಲ್ದಾರ್ ಕೆ.ಮಂಜುನಾಥ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿತ್ತು. ತೆರವು ಕಾಱಚರಣೆಗೆ ಬಜರಂಗ ದಳದಿಂದ ವಿರೋಧ ವ್ಯಕ್ತಪಡಿಸಿದ ಕಾರಣ ಸಂಘಟನೆಯ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: 

ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ; ಪ್ರಕರಣದಲ್ಲಿ ನಾವು ಭಾಗಿಯಾದ್ದರೆ ನಮ್ಮ ಕುಟುಂಬವೇ ನಾಶವಾಗಲಿ ಎಂದು ಬರೆದುಕೊಂಡ ಹನುಮೇಶ್ ನಾಯಕ್‌ ಕುಟುಂಬ

ಬೆಂಗಳೂರಲ್ಲಿ ಕೆಲಸಕ್ಕಿದ್ದವನು ಮಂಡ್ಯದಲ್ಲಿ ಶವವಾಗಿ ಪತ್ತೆ, ಊರಿಗೆ ಬರ್ತೀನಿ ಅಂದಿದ್ದವನ ಮೃತದೇಹ ಸಿಕ್ತು ನದಿಯಲ್ಲಿ

(Chikkmagaluru businessman commits suicide in Bengaluru for 1 crore loss in coffee business )

Published On - 9:34 pm, Mon, 2 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ