AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕೋಡಿ: 8 ನವಿಲುಗಳ ಮಾರಣ ಹೋಮ: ಓರ್ವ ಬಂಧನ, ಇಬ್ಬರು ಪರಾರಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಎಂಟು ನವಿಲುಗಳಿಗೆ ವಿಷ ಉಣಿಸಿ ಹತ್ಯೆ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ. ಝಳಕಿ ಗ್ರಾಮದ ನಿವಾಸಿ ಮಂಜುನಾಥ ಪವಾರ್​ ಬಂಧಿತ ವ್ಯಕ್ತಿ. ನವಿಲು ಮಾಂಸಕ್ಕಾಗಿ ಮೆಕ್ಕೆಜೋಳದ ಕಾಳುಗಳಲ್ಲಿ ವಿಷ ಹಾಕಿ ಕೊಂದಿದ್ದಾರೆ ಅಂತ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ರಾಯಬಾಗ ಎಸಿಎಫ್ ಸುನೀತಾ ನಿಂಬರಗಿ ಹೇಳಿದ್ದಾರೆ.

ಚಿಕ್ಕೋಡಿ: 8 ನವಿಲುಗಳ ಮಾರಣ ಹೋಮ: ಓರ್ವ ಬಂಧನ, ಇಬ್ಬರು ಪರಾರಿ
ಮೃತ ನವಿಲು, ರಾಯಬಾಗ ಎಸಿಎಫ್ ಸುನೀತಾ ನಿಂಬರಗಿ
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on: Jan 13, 2024 | 4:23 PM

ಬೆಳಗಾವಿ, ಜನವರಿ 13: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಎಂಟು ನವಿಲುಗಳಿಗೆ (peacocks) ವಿಷ ಉಣಿಸಿ ಹತ್ಯೆ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ. ಝಳಕಿ ಗ್ರಾಮದ ನಿವಾಸಿ ಮಂಜುನಾಥ ಪವಾರ್​ ಬಂಧಿತ ವ್ಯಕ್ತಿ. ಘಟನೆ ಕುರಿತು ರಾಯಬಾಗ ಎಸಿಎಫ್ ಸುನೀತಾ ನಿಂಬರಗಿ ಪ್ರತಿಕ್ರಿಯೆ ನೀಡಿದ್ದು, ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಮೂರು ಹೆಣ್ಣು, ಐದು ಗಂಡು ನವಿಲು ಕಂಡು ಬಂತು. ತಕ್ಷಣ ಮೃತ ನವಿಲುಗಳನ್ನ ತಂದು ಮರಣೋತ್ತರ ಪರೀಕ್ಷೆ ಮಾಡಿಸಿದ್ದೇವೆ. ಇನ್ನೂ ಇಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಶೋಧ ಮಾಡುತ್ತಿದ್ದೇವೆ ಎಂದಿದ್ದಾರೆ.

ಬಂಧಿತ ಆರೋಪಿ ಮಂಜುನಾಥ ಪವಾರ್​ ಇಟ್ಟಿಗೆ ಖಾರ್ನೆಯಲ್ಲಿ ಕೆಲಸ ಮಾಡುತ್ತಿದ್ದ. ಎರಡು ತಂಡ ರಚನೆ ಮಾಡಿದ್ದು, ಎಸ್ಕೇಪ್ ಆಗಿದ್ದವರನ್ನ ಬಂಧಿಸಲಾಗುವುದು. ನವಿಲು ಮಾಂಸಕ್ಕಾಗಿ ವಿಷ ಹಾಕಿ ಕೊಂದಿದ್ದಾರೆ. ಮೆಕ್ಕೆಜೋಳದ ಕಾಳುಗಳಲ್ಲಿ ವಿಷ ಹಾಕಿ ಕೊಂದಿದ್ದಾರೆ ಅಂತಾ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ತನಿಖೆ ಬಳಿಕ ಇನ್ನಷ್ಟು ಮಾಹಿತಿ ಬರುವುದಾಗಿ ಸುನೀತಾ ನಿಂಬರಗಿ ಹೇಳಿದ್ದಾರೆ.

ರಸ್ತೆ ದಾಟುತ್ತಿದ್ದ ಕಡವೆಗೆ ಅಪರಿಚಿತ ವಾಹನ ಡಿಕ್ಕಿ 

ತುಮಕೂರು: ರಸ್ತೆ ದಾಟುತ್ತಿದ್ದ ಕಡವೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಕೊರಟಗೆರೆ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಆಹಾರ ಅರಸಿ ಕಾಡಿನಿಂದ ಗ್ರಾಮದ ಕಡೆ ಹೊರಟಿತ್ತು. ಈ ವೇಳೆ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಕಡವೆಗೆ ಡಿಕ್ಕಿ ಹೊಡೆದು ಸ್ಥಳದಿಂದ ವಾಹನ ಚಾಲಕ ಪರಾರಿಯಾಗಿದ್ದಾನೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡಿದಿದೆ.

ಅಡ್ಡಾದಿಡ್ಡಿ ಸಂಚರಿಸಿದ ಕಾರು: ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಸಂಚರಿಸಿದ ಕಾರು ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ಹರಿದಿದ್ದು, ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಬಳಿ ಘಟನೆ ನಡೆದಿದೆ. ತಾಲೂಕು ಪಂಚಾಯತ್​ನ ಮಾಜಿ ಸದಸ್ಯ ಗೋಪಿನಾಥ ನಾಯಕ್ ಎಂಬವರ ಪತ್ನಿ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ: ಕಬ್ಬಿನ ಗದ್ದೆಯಲ್ಲಿ ಎಂಟು ನವಿಲುಗಳು ಮೃತ ದೇಹ ಪತ್ತೆ

ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನಾರ್ ಕಾರು ಡಿಕ್ಕಿಯಾಗಿದೆ. ಮಹಿಳೆಯನ್ನು ಎಳೆದುಕೊಂಡು ಬಂದು ಪಕ್ಕದಲ್ಲೇ ನಿಂತಿದ್ದ ಓಮ್ನಿ ಕಾರಿಗೂ ಡಿಕಿ ಹೊಡೆದಿದೆ. ತನ್ನ‌ ಮನೆಯ ಪಕ್ಕದ ರಸ್ತೆ ಬದಿ ನಿಂತಿದ್ದ ವೇಳೆ ಅವಘಡ ಸಂಭವಿಸಿದೆ. ಘಟನೆಯ ಭೀಕರ ದೃಶ್ಯಾವಳಿ ಸಿಸಿ ಕ್ಯಾಮಾರದಲ್ಲಿ ಸೆರೆ ಆಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು