ಚಿಕ್ಕಬಳ್ಳಾಪುರ: ಪುಷ್ಪ ಸಿನಿಮಾ ಸ್ಟೈಲಲ್ಲಿ ರಕ್ತಚಂದನ ಸಾಗಿಸುತಿದ್ದ ಗ್ಯಾಂಗ್ ಸೆರೆ

ಪುಷ್ಪ ಸಿನಿಮಾ ಸ್ಟೈಲಲ್ಲಿ ರಕ್ತಚಂದನ ಸಾಗಿಸುತಿದ್ದ ಗ್ಯಾಂಗ್​ನನ್ನು ಚಿಂತಾಮಣಿ ಗ್ರಾಮಾಂತರ ಪೊಲೀಸರು ಹಿಡಿದಿದ್ದಾರೆ. ಮೊದಲು ಪೊಲೀಸರನ್ನು ನೋಡುತ್ತಿದ್ದಂತೆಯೇ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆದ್ರೆ, ಪೊಲೀಸರು ಎರಡು ಕಿ.ಮೀಟರ್​ ಚೇಸ್​ ಮಾಡಿ ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ: ಪುಷ್ಪ ಸಿನಿಮಾ ಸ್ಟೈಲಲ್ಲಿ ರಕ್ತಚಂದನ ಸಾಗಿಸುತಿದ್ದ ಗ್ಯಾಂಗ್ ಸೆರೆ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ

Updated on: Feb 07, 2024 | 7:40 PM

ಚಿಕ್ಕಬಳ್ಳಾಪುರ, (ಫೆಬ್ರವರಿ 07): ಪುಷ್ಪ ಸಿನಿಮಾ ಸ್ಟೈಲಲ್ಲಿ ರಕ್ತಚಂದನ ಸಾಗಿಸುತಿದ್ದ ಗ್ಯಾಂಗ್​ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹಿರೇಕಟ್ಟಿಗೇನಹಳ್ಳಿ ಬಳಿ ಸೆರೆಯಾಗಿದೆ. ಸೀಮೆ ಹಸುವಿನೊಂದಿಗೆ ಹುಲ್ಲು ಮುಚ್ಚಿ ರಕ್ತ ಚಂದನ ಸಾಗಿಸುತಿದ್ದಾಗ ಖದೀಮರು ಸಿಕ್ಕಿಬಿದ್ದಿದ್ದಾರೆ. ಪೊಲೀಸರು ಎರಡು ಕಿ.ಮೀ ಬೆನ್ನಟ್ಟಿ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಸೀಮೆ ಹಸು, ಲಕ್ಷಾಂತರ ರೂಪಾಯಿ ಮೌಲ್ಯದ ರಕ್ತಚಂದನvನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳು ಆಂಧ್ರದಿಂದ ಬೆಂಗಳೂರಿಗೆ ರಕ್ತಚಂದನ ಸಾಗಿಸುತ್ತಿದ್ದರು. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರಕ್ತ ಚಂದನವನ್ನು ವಾಹನದಲ್ಲಿ ಸಾಗಿಸುತ್ತಿರುವ ಮಾಹಿತಿ ಆಧಾರದ ಮೇಲೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ದಾಳಿ ಮಾಡಿದ್ದಾರೆ.

ಇನ್ನು ಪೊಲೀಸರನ್ನು ನೋಡುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಆದ್ರೆ, ಪೊಲೀಸರು ಎರಡು ಕಿ.ಮೀಟರ್ ಚೇಸ್​ ಮಾಡಿ ಆರೋಪಿಗಳನ್ನು ಹಿಡಿದಿದ್ದಾರೆ. ಇಬ್ಬರು ಕಳ್ಳರನ್ನು ಬಂಧಿಸಲಾಗಿದ್ದು, 392 ಕೆಜಿ ರಕ್ತ ಚಂದನದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನುಳಿದ ಕಳ್ಳರ ಬಂಧನಕ್ಕೆ ಪೊಲೀಸರು ಗ್ರಾಮಸ್ಥರ ಸಹಕಾರದಿಂದ ಕಾರ್ಯಾಚರಣೆ ನಡೆಸಿದ್ದಾರೆ.

ಪರಿಚಿತ ಗುಂಪಿನಿಂದ ನಾಲ್ವರ ಮೇಲೆ ಹಲ್ಲೆ

ಕೋಲಾರ: ಜಮೀನಿನ ದಾರಿ ವಿಚಾರಕ್ಕೆ ಸಂಬಂಧಿಸಿದಂತೆ ಅಪರಿಚಿತ ಗುಂಪೊಂದು ನಾಲ್ವರ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಕಾಮದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಗೆ ನುಗ್ಗಿ ಹಲ್ಲೆ, ಗೃಹೋಪಯೋಗಿ ವಸ್ತು ಧ್ವಂಸಗೊಳಿಸಿದ್ದಾರೆ. ಅಲ್ಲದೇ ಭೀರಪ್ಪ, ಅಶ್ವತ್ಥ್​​​​, ಲಕ್ಷ್ಮಮ್ಮ, ಶಾರದಮ್ಮ ಎಂಬುವರ ಮೇಲೆ ಹಲ್ಲೆ ಮಾಡಿದೆ. ಪ್ರಕಾಶ್,​​ ರಮೇಶ್​​​ ಎಂಬುವರು ಹಲ್ಲೆ ಮಾಡಿಸಿದ್ದಾರೆಂದು ಆರೋಪಿಸಲಾಗಿದ್ದು, ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ