ತನ್ನ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಕೈಗಾದಲ್ಲಿ ರಕ್ಷಣಾ ಸಿಬ್ಬಂದಿ ಆತ್ಮಹತ್ಯೆ

ಕಾರವಾರದ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಸಿಐಎಸ್‌ಎಫ್ ಅಧಿಕಾರಿ ತಮ್ಮ ಸೇವಾ ಶಸ್ತ್ರಾಸ್ತ್ರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯಿಂದ ಕೈಗಾದಲ್ಲಿ ಆತಂಕ ಹೆಚ್ಚಿದೆ.

ತನ್ನ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಕೈಗಾದಲ್ಲಿ ರಕ್ಷಣಾ ಸಿಬ್ಬಂದಿ ಆತ್ಮಹತ್ಯೆ
ತನ್ನ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಕೈಗಾದಲ್ಲಿ ರಕ್ಷಣಾ ಸಿಬ್ಬಂದಿ ಆತ್ಮಹತ್ಯೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Nov 11, 2024 | 8:10 PM

ಕಾರವಾರ, ನವೆಂಬರ್​ 11: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ನ್ಯೂಕ್ಲಿಯರ್ ಪ್ಲ್ಯಾಂಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ರಕ್ಷಣಾ ಸಿಬ್ಬಂದಿ ತನ್ನ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಡನೆ ನಡೆದಿದೆ. ಬಿಹಾರ ಮೂಲಕ ಅರವಿಂದ್​ ಮೃತ ಸಿಐಎಸ್‌ಎಫ್ ಸಿಬ್ಬಂದಿ. ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಕಾರಣದಿಂದಲೋ ಅಥವಾ ಅಧಿಕಾರಿಗಳ ಕಾರಣದಿಂದಲೋ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಇನ್ನೂ ತಿಳಿದಿಲ್ಲ. ಸದ್ಯ ರಕ್ಷಣಾ ಸಿಬ್ಬಂದಿಯ ಆತ್ಮಹತ್ಯೆಯಿಂದ ಕೈಗಾದಲ್ಲಿ ಆತಂಕ‌ ಸೃಷ್ಠಿಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರೇಮಿ ಮದುವೆಗೆ ನಿರಾಕರಿಸಿದ ಆರೋಪ: ಯುವತಿ ಆತ್ಮಹತ್ಯೆ 

ಬಾಗಲಕೋಟೆ: ಪ್ರೇಮಿ ಮದುವೆಗೆ ನಿರಾಕರಿಸಿದಕ್ಕೆ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಗ್ರಾಮದಲ್ಲಿ ಅಕ್ಟೊಬರ್ 02ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರುಕ್ಕವ್ವ ವಡವಾಣಿ (19) ಮೃತ ಯುವತಿ. ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಯುವಕನ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹತ್ಯೆಗೆ ಕಾರಣವಾಯ್ತಾ ವಿಧವೆಯೊಂದಿಗಿನ ಲವ್​?

ಶಂಕ್ರಪ್ಪ ಪತ್ತಾರ ಎಂಬ ಯುವಕನನ್ನು ಮೃತ ಯುವತಿ ಪ್ರೀತಿಸುತ್ತಿದ್ದಳು. ಮಗಳ ಸಾವಿಗೆ ಶಂಕ್ರಪ್ಪ ಮದುವೆ ಆಗಲು ನಿರಾಕರಿಸಿದ್ದು ಕಾರಣವೆಂದು ಪೋಷಕರು ಆರೋಪಿಸಿದ್ದಾರೆ. ಶಂಕ್ರಪ್ಪ ಹಾಗೂ ತಂದೆ-ತಾಯಿ, ಸಹೋದರಿ ವಿರುದ್ಧ ಯುವತಿ ಪೋಷಕರು ದೂರು ನೀಡಿದ್ದರು. ಆದರೆ ಪ್ರಕರಣ ದಾಖಲಾಗಿ ಒಂದು ತಿಂಗಳು ಕಳೆದರೂ ಆರೋಪಿಗಳನ್ನ ಬಂಧಿಸಿಲ್ಲ. ಆರೋಪಿಗಳಿಗೆ ಪೊಲೀಸರು ಸಹಕಾರ ನೀಡಿದ್ದು, ಜಾಮೀನು ಸಿಗುವಂತೆ ನೋಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಸದ್ಯ ಶಂಕ್ರಪ್ಪ ಮತ್ತು ಕುಟುಂಬಸ್ಥರು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಮಗಳ ಸಾವಿಗೆ ನ್ಯಾಯ ಕೊಡುಸುವಂತೆ ಪೋಷಕರು ಎಸ್ಪಿ ಕಚೇರಿಗೆ ಆಮಿಸಿದ ಪೋಷಕರು ಎಸ್​ಪಿ ಅಮರನಾಥ ರೆಡ್ಡಿಗೆ ಮನವಿ ಮಾಡಿದ್ದಾರೆ.

ಮಹಿಳೆ ಮೇಲೆಯೇ ಹರಿದ ಟ್ಯಾಂಕರ್ ಲಾರಿ

ಮಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಟ್ಯಾಂಕರ್ ಲಾರಿ ಹರಿದ ಪರಿಣಾಮ ಬೈಕ್​ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಉಳ್ಳಾಲ ತಾಲೂಕಿನ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ. ಕುತ್ತಾರು ವಿನ ರಹಮತ್(47) ಮೃತ ದುರ್ದೈವಿ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಈಡಿ ಅಧಿಕಾರಿಗಳು ಮಾಡುತ್ತಿರುವ ತನಿಖೆಗೆ ನಾವು ಅಡ್ಡಿಯಾಗಲ್ಲ: ಸಿದ್ದರಾಮಯ್ಯ
ಈಡಿ ಅಧಿಕಾರಿಗಳು ಮಾಡುತ್ತಿರುವ ತನಿಖೆಗೆ ನಾವು ಅಡ್ಡಿಯಾಗಲ್ಲ: ಸಿದ್ದರಾಮಯ್ಯ
ಉಪ ಚುನಾವಣೆ ಹೊತ್ತಲ್ಲಿ ಚುನಾವಣಾಧಿಕಾರಿಯ ಕಾರನ್ನು ಅಡ್ಡಗಟ್ಟಿ ಹೈಡ್ರಾಮಾ
ಉಪ ಚುನಾವಣೆ ಹೊತ್ತಲ್ಲಿ ಚುನಾವಣಾಧಿಕಾರಿಯ ಕಾರನ್ನು ಅಡ್ಡಗಟ್ಟಿ ಹೈಡ್ರಾಮಾ
ಯೋಗೇಶ್ವರ್ ರೈತನ ಮಗ ಮತ್ತು ರೈತ ದೇಶದ ಬೆನ್ನೆಲುಬು: ಶೀಲಾ ಯೋಗೇಶ್ವರ್
ಯೋಗೇಶ್ವರ್ ರೈತನ ಮಗ ಮತ್ತು ರೈತ ದೇಶದ ಬೆನ್ನೆಲುಬು: ಶೀಲಾ ಯೋಗೇಶ್ವರ್
ಜೆಡಿಎಸ್ ಕಾರ್ಯಕರ್ತೆಯೂ ಮತಗಟ್ಟೆ ಬಳಿ ಶಾಲು ಹೊದ್ದು ಓಡಾಡುತ್ತಿದ್ದರು
ಜೆಡಿಎಸ್ ಕಾರ್ಯಕರ್ತೆಯೂ ಮತಗಟ್ಟೆ ಬಳಿ ಶಾಲು ಹೊದ್ದು ಓಡಾಡುತ್ತಿದ್ದರು
‘ಭೈರತಿ ರಣಗಲ್’ ಚಿತ್ರದಲ್ಲಿ ಶ್ರೀಮುರಳಿ ಸರ್​ಪ್ರೈಸ್ ಎಂಟ್ರಿ?
‘ಭೈರತಿ ರಣಗಲ್’ ಚಿತ್ರದಲ್ಲಿ ಶ್ರೀಮುರಳಿ ಸರ್​ಪ್ರೈಸ್ ಎಂಟ್ರಿ?
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ
CCTV Video: ಬೈಕ್, ಕಾರು ನಡುವೆ ಭೀಕರ ಅಪಘಾತ, ಪವಾಡಸದೃಶವಾಗಿ ಸವಾರರು ಪಾರು
CCTV Video: ಬೈಕ್, ಕಾರು ನಡುವೆ ಭೀಕರ ಅಪಘಾತ, ಪವಾಡಸದೃಶವಾಗಿ ಸವಾರರು ಪಾರು
‘ಯಾರೂ ಉಳಿಯಲ್ಲ’; ತೊಡೆ ತಟ್ಟಿದ ಉಗ್ರಂ ಮಂಜು
‘ಯಾರೂ ಉಳಿಯಲ್ಲ’; ತೊಡೆ ತಟ್ಟಿದ ಉಗ್ರಂ ಮಂಜು
ಬುಡಕಟ್ಟು ಜನರೊಂದಿಗೆ ನೃತ್ಯ ಮಾಡಿದ ಸಿಎಂ ಸಿದ್ದರಾಮಯ್ಯ
ಬುಡಕಟ್ಟು ಜನರೊಂದಿಗೆ ನೃತ್ಯ ಮಾಡಿದ ಸಿಎಂ ಸಿದ್ದರಾಮಯ್ಯ
ಊಟ ಮಾಡುವಾಗ ಅರ್ಧಕ್ಕೆ ಎದ್ದು ಹೋಗಬಾರದು ಯಾಕೆ? ವಿಡಿಯೋ ನೋಡಿ
ಊಟ ಮಾಡುವಾಗ ಅರ್ಧಕ್ಕೆ ಎದ್ದು ಹೋಗಬಾರದು ಯಾಕೆ? ವಿಡಿಯೋ ನೋಡಿ