ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ. ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ […]

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!
ಸಾಧು ಶ್ರೀನಾಥ್​

Updated on: Feb 15, 2020 | 11:08 AM

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ.

ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ ಪರಾರಿಯಾಗಿದ್ದಾರೆ.

ಖಾಸಗಿ ಆಸ್ಪತ್ರೆಯ ICUನಲ್ಲಿ ಬಾಲಕನಿಗೆ ಚಿಕಿತ್ಸೆ:
ದುಷ್ಕರ್ಮಿಗಳ ಕೃತ್ಯದಿಂದ ನರಳಾಡುತ್ತಿದ್ದ ಬಾಲಕನ ನೆರವಿಗೆ ಬಂದ ಸ್ಥಳೀಯರು, ಘಟನೆ ಬಗ್ಗೆ ಷೋಷಕರಿಗೆ ಮಾಹಿತಿ ನೀಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯಕ್ಕೆ ಬಾಲಕನಿಗೆ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

Published On - 10:05 am, Sat, 15 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us