ರಾಜಕೀಯ ದ್ವೇಷ: ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಮೇಲೆ ಹಾಡಹಗಲೇ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್​ ಪಡೆದುಕೊಂಡಿದೆ. ರಾಜಕೀಯ ತಿರುವು ಪಡೆದುಕೊಂಡ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು: ಕಳೆದ ಡಿ.9ರಂದು ಸಿದ್ಧಾಪುರದಲ್ಲಿ ಸೈಯದ್ ರಿಯಾಜ್ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದ. ಈ ವೇಳೆ ಲಾಂಗು ಮಚ್ಚುಗಳ ಸಮೇತ ಕಾದಿದ್ದ ಗ್ಯಾಂಗ್​ ಹೆಲ್ಮೆಟ್​ ಧರಿಸಿ ಹಲ್ಲೆ ನಡೆಸಿತ್ತು. ಹಲ್ಲೆಗೂ ಮುನ್ನ ಉಪಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಭಿನಂದನೆ ಹೇಳಿ […]

ರಾಜಕೀಯ ದ್ವೇಷ: ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ
Follow us
ಸಾಧು ಶ್ರೀನಾಥ್​
|

Updated on: Jan 04, 2020 | 9:29 AM

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಮೇಲೆ ಹಾಡಹಗಲೇ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್​ ಪಡೆದುಕೊಂಡಿದೆ. ರಾಜಕೀಯ ತಿರುವು ಪಡೆದುಕೊಂಡ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು: ಕಳೆದ ಡಿ.9ರಂದು ಸಿದ್ಧಾಪುರದಲ್ಲಿ ಸೈಯದ್ ರಿಯಾಜ್ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದ. ಈ ವೇಳೆ ಲಾಂಗು ಮಚ್ಚುಗಳ ಸಮೇತ ಕಾದಿದ್ದ ಗ್ಯಾಂಗ್​ ಹೆಲ್ಮೆಟ್​ ಧರಿಸಿ ಹಲ್ಲೆ ನಡೆಸಿತ್ತು. ಹಲ್ಲೆಗೂ ಮುನ್ನ ಉಪಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಭಿನಂದನೆ ಹೇಳಿ ರಿಯಾಜ್ ಬಂದಿದ್ದ. ಘಟನೆಯಲ್ಲಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಸೈಯದ್ ಬಚಾವ್ ಆಗಿದ್ದಾರೆ.

ಈ ಹಿಂದೆ ಎಸ್​ಡಿಪಿಐ ಪಕ್ಷದಲ್ಲಿ ರಿಯಾಜ್ ಗುರುತಿಸಿಕೊಂಡಿದ್ದ. ಕಳೆದ ಮೂರು ವರ್ಷಗಳ ಹಿಂದೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದ. ಬಳಿಕ ಈ ಬಾರಿಯ ಉಪಚುನಾವಣೆಯಲ್ಲಿ ರಿಜ್ವಾನ್ ಜೊತೆ ಗುರುತಿಸಿಕೊಂಡಿದ್ದ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಪರ ಪ್ರಚಾರ ಮಾಡಿದ್ದ. ಚುನಾವಣೆ ಫಲಿತಾಂಶದಲ್ಲಿ ಶಿವಾಜಿನಗರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಜಯಗಳಿಸಿದ್ದ.

ಈ ವೇಳೆ ರಿಯಾಜ್ ಮೇಲೆ ಹಳೆ ರಾಜಕೀಯ ದ್ವೇಷ ಇಟ್ಟುಕೊಂಡು ಹಲ್ಲೆ ನಡೆಸಿದ್ದಾರೆ. ಬೈಕ್​ಗಳಲ್ಲಿ ಮಾಸ್ಕ್​ ಧರಿಸಿ ಬಂದ 5ಕ್ಕೂ ಅಧಿಕ ಮಂದಿಯ ಗ್ಯಾಂಗ್ ಹಲ್ಲೆ ನಡೆಸಿದೆ. ಆಸೀಫ್ ಹಾಗು ಇರ್ಫಾನ್ ಎಂಬುವರನ್ನು ವಶಕ್ಕೆ ಪಡೆದು ಸಿದ್ದಾಪುರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ