ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಮೇಲೆ ಹಾಡಹಗಲೇ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ರಾಜಕೀಯ ತಿರುವು ಪಡೆದುಕೊಂಡ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು:
ಈ ಹಿಂದೆ ಎಸ್ಡಿಪಿಐ ಪಕ್ಷದಲ್ಲಿ ರಿಯಾಜ್ ಗುರುತಿಸಿಕೊಂಡಿದ್ದ. ಕಳೆದ ಮೂರು ವರ್ಷಗಳ ಹಿಂದೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದ. ಬಳಿಕ ಈ ಬಾರಿಯ ಉಪಚುನಾವಣೆಯಲ್ಲಿ ರಿಜ್ವಾನ್ ಜೊತೆ ಗುರುತಿಸಿಕೊಂಡಿದ್ದ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಪರ ಪ್ರಚಾರ ಮಾಡಿದ್ದ. ಚುನಾವಣೆ ಫಲಿತಾಂಶದಲ್ಲಿ ಶಿವಾಜಿನಗರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಜಯಗಳಿಸಿದ್ದ.
ಈ ವೇಳೆ ರಿಯಾಜ್ ಮೇಲೆ ಹಳೆ ರಾಜಕೀಯ ದ್ವೇಷ ಇಟ್ಟುಕೊಂಡು ಹಲ್ಲೆ ನಡೆಸಿದ್ದಾರೆ. ಬೈಕ್ಗಳಲ್ಲಿ ಮಾಸ್ಕ್ ಧರಿಸಿ ಬಂದ 5ಕ್ಕೂ ಅಧಿಕ ಮಂದಿಯ ಗ್ಯಾಂಗ್ ಹಲ್ಲೆ ನಡೆಸಿದೆ. ಆಸೀಫ್ ಹಾಗು ಇರ್ಫಾನ್ ಎಂಬುವರನ್ನು ವಶಕ್ಕೆ ಪಡೆದು ಸಿದ್ದಾಪುರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.