Crime News, ವಿದ್ಯುತ್​ ಪ್ರವಹಿಸಿ ಗುತ್ತಿಗೆ ನೌಕರ ಸಾವು: ಚೆಸ್ಕಾಂ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಪ್ರಕರಣಕ್ಕೆ ಸಂಬಂಧ ಮತ್ತೆ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ತುರುವೇಕೆರೆ ತಾಲೂಕಿನ ಸೀಗೆಹಳ್ಳಿ ಬಳಿ ಅಪಘಾತ ನಡೆದಿತ್ತು.

Crime News, ವಿದ್ಯುತ್​ ಪ್ರವಹಿಸಿ ಗುತ್ತಿಗೆ ನೌಕರ ಸಾವು: ಚೆಸ್ಕಾಂ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
ಮಹದೇವ(24) ಮೃತ ಗುತ್ತಿಗೆ ನೌಕರ.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: May 21, 2022 | 8:29 AM

ಮೈಸೂರು: ವಿದ್ಯುತ್​ ಪ್ರವಹಿಸಿ ಚೆಸ್ಕಾಂ ಗುತ್ತಿಗೆ ನೌಕರ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಡೆದಿದೆ. ಟ್ರಾನ್ಸ್​ಫಾರ್ಮರ್​ ಬದಲಾಯಿಸುವಾಗ ದುರಂತ ನಡೆದಿದೆ. ಮಹದೇವ(24) ಮೃತ ಗುತ್ತಿಗೆ ನೌಕರ. ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಸಾವಿಗೆ ಕಾರಣ ಎಂದು ಆರೋಪ ಕೂಡ ಕೇಳಿಬರುತ್ತಿದೆ. ಚೆಸ್ಕಾಂ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಒತ್ತಾಯಿಸಲಾಗಿದೆ. ಮಹದೇವನ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ. ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಎರಡು ಬೈಕ್​ಗಳ ನಡುವೆ ಡಿಕ್ಕಿ ಪ್ರಕರಣ: ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ತುಮಕೂರು: ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಪ್ರಕರಣಕ್ಕೆ ಸಂಬಂಧ ಮತ್ತೆ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ತುರುವೇಕೆರೆ ತಾಲೂಕಿನ ಸೀಗೆಹಳ್ಳಿ ಬಳಿ ಅಪಘಾತ ನಡೆದಿತ್ತು. ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವು, ಮತ್ತಿಬ್ಬರಿಗೆ ಗಂಭೀರ ಗಾಯಾವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ತೃಪ್ತಿ ಆಗುವಂತೆ ಬೆವರು ಹರಿಸಿ ವರ್ಕೌಟ್​ ಮಾಡಿದ ಬಳಿಕ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ

ರೈಲಿಗೆ ಸಿಲುಕಿ ಮಹಿಳೆ ಸಾವು

ತುಮಕೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಸುಮಾರು 45 ವರ್ಷದ ಅಪರಿಚಿತ ಮಹಿಳೆ ಮೃತಪಟ್ಟಿರುವಂತಹ ಘಟನೆ ನಗರದ ಹೆಚ್​ಎಮ್​ಟಿ ಹಿಂಭಾಗ ಬಳಿ ನಡೆದಿದೆ. ತುಮಕೂರು ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಜಿಟಿಜಿಟಿ ಮಳೆಯಲ್ಲೇ ಸ್ಕೂಟಿಯಲ್ಲಿ ಯುವಕರ ವೀಲಿಂಗ್

ಚಿತ್ರದುರ್ಗ‌: ಜಿಟಿಜಿಟಿ ಮಳೆಯಲ್ಲೇ ಸ್ಕೂಟಿಯಲ್ಲಿ ಇಬ್ಬರು, ಮೂವರು  ಯುವಕರು ಕುಳಿತು ಬೈಕ್ ವೀಲಿಂಗ್ ಮಾಡಿರುವಂತಹ ದುಸ್ಸಾಹಸ ತಾಲೂಕಿನ ಗೋನೂರು ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಗೋನೂರು ಗ್ರಾಮದ ಅಂಡರ್ ಬ್ರಿಡ್ಜ್‌ ಬಳಿ ಬೈಕ್ ವೀಲಿಂಗ್ ಮಾಡಿದ್ದಾರೆ. ಯುವಕರ ಬೈಕ್ ವೀಲಿಂಗ್​ನಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಯುವಕರ ಬೈಕ್ ವೀಲಿಂಗ್ ವಿಡಿಯೋ ಕೂಡ ವೈರಲ್ ಆಗಿದೆ.

ಸಿಡಿಲು ಬಡಿದು ಯುವಕ ಸಾವು

ಸಿಡಿಲು ಬಡಿದು ಯುವಕ ಸಾವು ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಮದನೂರು ಬಳಿ ಸಿಡಿಲು ಬಡಿದು ಯುವಕ ಆನಂದ ಬರಾಗಡೆ(21) ಮೃತಪಟ್ಟಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್