ಎಲಾ ಇವರ ಧೈರ್ಯವಾ!? ಜಾತ್ರೆಯಲ್ಲೇ ಮಾರಾಟ ಮಾಡಲು ಗಾಂಜಾ ಸಂಗ್ರಹಿಸಿ, ಸಿಕ್ಕಿ ಬಿದ್ದ ದಂಪತಿ
ಚಾಮರಾಜನಗರ: ಮಾರಾಟ ಮಾಡಲು ಗಾಂಜಾ ಸಂಗ್ರಹಿಸಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಹನೂರು ತಾಲೂಕಿನ ದೊಮ್ಮನಗದ್ದೆಯಲ್ಲಿ ನಡೆದಿದೆ. ಸರಸಿಬಾಯಿ, ರಂಗೂನಾಯ್ಕ್ ದಂಪತಿಗಳಿಬ್ಬರು ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆಯಲ್ಲಿ ಮಾರಾಟ ಮಾಡ ಬೇಕು ಎಂದು ಮನೆಯಲ್ಲಿ ಬಚ್ಚಿಟ್ಟಿದ್ದ ಗಾಂಜಾವನ್ನು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 89 ಕೆಜಿ ಹಸಿ ಗಾಂಜಾ ಮತ್ತು 12 ಕೆಜಿ ಒಣ ಗಾಂಜಾ ವಶಕ್ಕೆ ಪಡೆದಿದ್ದಾರೆ. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.