Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಕಾಯಿಲೆ ಗುಣಪಡಿಸಿಕೊಳ್ಳಲು ಗಂಡನ ಜತೆ ಸೇರಿ ನವಜಾತ ಶಿಶುವನ್ನು ಬಲಿಕೊಟ್ಟ ಮಹಿಳೆ

ತನ್ನ ಕಾಯಿಲೆಯನ್ನು ಗುಣಪಡಿಸಿಕೊಳ್ಳಲು ಮಹಿಳೆಯೊಬ್ಬಳು ಗಂಡನ ಜತೆ ಸೇರಿ ತನ್ನ ನವಜಾತ ಶಿಶುವನ್ನು ಬಲಿಕೊಟ್ಟಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಮಮತಾ ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ರೋಗವನ್ನು ಗುಣಪಡಿಸಲು ಮಗುವನ್ನು ಕೊಲ್ಲುವುದೊಂದೇ ದಾರಿ ಎನ್ನುವ ಮಾತ್ರಿಕನ ಮಾತು ಕೇಳಿ ದಂಪತಿ ದುಡುಕಿ ನಿರ್ಧಾರ ತೆಗೆದುಕೊಂಡಿದ್ದಾರೆ.

ತನ್ನ ಕಾಯಿಲೆ ಗುಣಪಡಿಸಿಕೊಳ್ಳಲು ಗಂಡನ ಜತೆ ಸೇರಿ ನವಜಾತ ಶಿಶುವನ್ನು ಬಲಿಕೊಟ್ಟ ಮಹಿಳೆ
ಬಂಧನImage Credit source: ipleaders
Follow us
ನಯನಾ ರಾಜೀವ್
|

Updated on: Oct 10, 2024 | 2:07 PM

ತನ್ನ ಕಾಯಿಲೆಯನ್ನು ಗುಣಪಡಿಸಿಕೊಳ್ಳಲು ಮಹಿಳೆಯೊಬ್ಬಳು ಗಂಡನ ಜತೆ ಸೇರಿ ತನ್ನ ನವಜಾತ ಶಿಶುವನ್ನು ಬಲಿಕೊಟ್ಟಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಮಮತಾ ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ರೋಗವನ್ನು ಗುಣಪಡಿಸಲು ಮಗುವನ್ನು ಕೊಲ್ಲುವುದೊಂದೇ ದಾರಿ ಎನ್ನುವ ಮಾತ್ರಿಕನ ಮಾತು ಕೇಳಿ ದಂಪತಿ ದುಡುಕಿ ನಿರ್ಧಾರ ತೆಗೆದುಕೊಂಡಿದ್ದಾರೆ.

ಭೋಪಾ ಪ್ರದೇಶದ ಬೆಲ್ಡಾ ಗ್ರಾಮದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಮಗು ಕಾಣೆಯಾಗಿರುವುದನ್ನು ಕಂಡು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಬನ್ಸಾಲ್ ಪಿಟಿಐಗೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಮಮತಾ ಮತ್ತು ಆಕೆಯ ಪತಿ ಗೋಪಾಲ್ ಕಶ್ಯಪ್ ಅವರು ತಮ್ಮ ಮಗಳನ್ನು ಕೊಂದು ಆಕೆಯ ಶವವನ್ನು ಕಾಡಿನಲ್ಲಿ ಎಲ್ಲೋ ಬಚ್ಚಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಬನ್ಸಾಲ್ ಹೇಳಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಬಾಮೈದ ಮಾಡಿದ ತಪ್ಪಿಗೆ ತನ್ನ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಮೃತದೇಹವನ್ನು ಹೊರತೆಗೆಯಲು ಮತ್ತು ಮಂತ್ರವಾದಿ ಹರೇಂದ್ರನನ್ನು ಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬಿಹಾರದಲ್ಲಿ ಆಡುತ್ತಿದ್ದ 3 ವರ್ಷದ ಬಾಲಕನಿಗೆ ಚಾಕುವಿನಿಂದ ಇರಿದು ಕೊಲೆ

ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕನನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಇಂದು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಿಘ್ರಾ ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ 3 ವರ್ಷದ ಮಗುವನ್ನು ಹತ್ಯೆ ಮಾಡಲಾಗಿದೆ.

ಈ ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಬಾಲಕ ತನ್ನ ಇತರ ಸ್ನೇಹಿತರೊಂದಿಗೆ ಆರೋಪಿಯ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಗ್ರಾಮದ ನಿವಾಸಿಗಳು ತಿಳಿಸಿದ್ದಾರೆ. ಮಕ್ಕಳು ತಮ್ಮ ಮನೆಯ ಹೊರಗೆ ಆಟವಾಡುವುದು ಆರೋಪಿಗಳ ಕುಟುಂಬಕ್ಕೆ ಇಷ್ಟವಿರಲಿಲ್ಲ. ಇದೇ ಕಾರಣಕ್ಕೆ ಮಕ್ಕಳು ಅವರ ಮನೆಯೆದುರು ಆಡುವಾಗ 3 ವರ್ಷದ ಮಗುವಿಗೆ ಚಾಕುವಿನಿಂದ ಇರಿದಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ