ಉತ್ತರ ಪ್ರದೇಶ: ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕಾಗಿ ಯುವತಿಯ ಕುತ್ತಿಗೆಗೆ ಚಾಕುವಿನಿಂದ ಇರಿದ ಸೋದರಸಂಬಂಧಿ
Uttar Pradesh: ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ತನ್ನ ಸೋದರಸಂಬಂಧಿಯ ಯುವತಿಗೆ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೃತ್ಯವನ್ನು ಮಾಡಿದ ಯುವತಿಯ ಚಿಕ್ಕಪ್ಪನ ಮಗ ಜ್ಞಾನ್ ಪ್ರಕಾಶ್ (26) ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಬಂದಾ, ಜ.6: ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ತನ್ನ ಸೋದರಸಂಬಂಧಿಯ ಯುವತಿಗೆ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬಂದಾ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೃತ್ಯವನ್ನು ಮಾಡಿದ ಯುವತಿಯ ಚಿಕ್ಕಪ್ಪನ ಮಗ ಜ್ಞಾನ್ ಪ್ರಕಾಶ್ (26) ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಯವತಿಯು ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಡಿಎಂ ಕಾಲೋನಿಯಲ್ಲಿರುವ ತನ್ನ ತಾಯಿಯ ಮಾವನ ಮನೆಯಲ್ಲಿ ವಾಸವಿದ್ದಳು, ಆಕೆ ಮತ್ತು ಪ್ರಕಾಶ್ ಒಂದೇ ಕಾಲೇಜಿನಲ್ಲಿ ಕಾನೂನು ಪದವಿಯನ್ನು ಓದುತ್ತಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಲಕ್ಷ್ಮಿ ನಿವಾಸ್ ಮಿಶ್ರಾ ಹೇಳಿದ್ದಾರೆ.
ಶುಕ್ರವಾರ (ಜ.5) ಸಂಜೆ 6 ಗಂಟೆ ಸುಮಾರಿಗೆ ಪ್ರಕಾಶ್ ಯುವತಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಎಸ್‌ಪಿ ಲಕ್ಷ್ಮಿ ನಿವಾಸ್ ಮಿಶ್ರಾ ಹೇಳಿದ್ದಾರೆ.
ಇದನ್ನೂ ಓದಿ: ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ ಮಾಡಿ ಸೆಪ್ಟಿಕ್ ಟ್ಯಾಂಕ್ ಒಳಗೆ ಎಸೆದಿದ್ದ ಮಹಿಳೆಯ ಬಂಧನ
ಪೊಲೀಸರ ತನಿಖೆ ಪ್ರಕಾರ, ಜ್ಞಾನ್ ಪ್ರಕಾಶ್ ಈ ಯುವತಿಯನ್ನು ಮದುವೆಯಾಗುವುದಾಗಿ ಹೇಳಿಕೊಂಡಿದ್ದಾನೆ, ಆದರೆ ಯುವತಿ ಈ ಮದುವೆ ಒಪ್ಪಿಲ್ಲ ಎಂದು ಹೇಳಲಾಗಿದೆ. ತನ್ನನ್ನು ತಿರಸ್ಕರಿಸಿದ್ದಕ್ಕಾಗಿ ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಘಟನೆ ನಡೆದ ತಕ್ಷಣ ಆತ ಅಲ್ಲಿಂದ ಪರಾರಿಯಾಗಿದ್ದು. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಾಗೂ ಆತನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ