ದನದ ವ್ಯಾಪಾರಿ ಹತ್ಯೆ, ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳ ಯತ್ನ
ಹಾವೇರಿ: ಕಟ್ಟಿಗೆಯಿಂದ ಬಡಿದು ದನದ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಮಾವಕೊಪ್ಪ ಗ್ರಾಮದ ಬಳಿ ನಡೆದಿದೆ. 42 ವರ್ಷದ ಸೋಮಶೇಖರ ಹಲಸೂರ ಕೊಲೆಯಾದ ದುರ್ದೈವಿ. ಮೇಲ್ನೋಟಕ್ಕೆ ಹಣಕಾಸಿನ ವ್ಯವಹಾರದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ವಿಜಯಕುಮಾರ್ ಹಾಗೂ ಹಾನಗಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾವೇರಿ: ಕಟ್ಟಿಗೆಯಿಂದ ಬಡಿದು ದನದ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಮಾವಕೊಪ್ಪ ಗ್ರಾಮದ ಬಳಿ ನಡೆದಿದೆ. 42 ವರ್ಷದ ಸೋಮಶೇಖರ ಹಲಸೂರ ಕೊಲೆಯಾದ ದುರ್ದೈವಿ.
ಮೇಲ್ನೋಟಕ್ಕೆ ಹಣಕಾಸಿನ ವ್ಯವಹಾರದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ವಿಜಯಕುಮಾರ್ ಹಾಗೂ ಹಾನಗಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Published On - 2:01 pm, Sun, 19 April 20