ಕೊಲೆಯಾದ ಮಹದೇವಯ್ಯ ಮನೆಯಲ್ಲಿ ದರೋಡೆ ನಡೆದಿಲ್ಲ: ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ

ಬಿಜೆಪಿ ಎಂಎಲ್​ಸಿ ಯೋಗೇಶ್ವರ್ ಭಾವ ಮಹದೇವಯ್ಯ ಅವರು ಚಾಮರಾಜನಗರ ಜಿಲ್ಲೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೆಂಗಳೂರಿಗೆ ತರಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ಸಮ್ಮುಖದಲ್ಲಿ ಅರಣ್ಯ ಪ್ರದೇಶದಿಂದ ಶವ ಹೊರತಂದು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗುತ್ತಿದೆ.

ಕೊಲೆಯಾದ ಮಹದೇವಯ್ಯ ಮನೆಯಲ್ಲಿ ದರೋಡೆ ನಡೆದಿಲ್ಲ: ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ
ಕೊಲೆಯಾದ ಮಹದೇವಯ್ಯ ಮತ್ತು ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ
Follow us
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi

Updated on: Dec 04, 2023 | 9:50 PM

ಚಾಮರಾಜನಗರ, ಡಿ.4: ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್ (CP Yogeshwar) ಅವರ ಭಾವ ಮಹದೇವಯ್ಯ ಅವರ ಮನೆಯಲ್ಲಿ ಯಾವುದೇ ದರೋಡೆ ನಡೆದಿಲ್ಲ ಎಂದು ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ರಾಮನಗರ (Ramanagara) ಎಸ್​ಪಿ ಕಾರ್ತಿಕ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಮಹದೇವಯ್ಯ ಕೊಲೆ ಕೇಸ್ ಆರೋಪಿಗಳ ಪತ್ತೆಗಾಗಿ ತನಿಖೆ ನಡೆಯುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಯಾವುದೇ ಮಾಹಿತಿ ನೀಡಲಾಗುವುದಿಲ್ಲ. ಸಾಕ್ಷ್ಯಾಧಾರ ಸಂಗ್ರಹಿಸಿದ್ದೇವೆ, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ. ಯಾವ ಸಮಯದಲ್ಲಿ ಕೊಲೆಯಾಗಿದೆ ಎಂಬುದನ್ನು ಈಗ ಹೇಳಲು ಆಗಲ್ಲ. ಹತ್ಯೆಯಾಗಿರುವ ಮಹದೇವಯ್ಯ ಭೂಮಿ ವ್ಯಾಜ್ಯಗಳನ್ನು ನಿರ್ವಹಿಸುತ್ತಿದ್ದರು. ಮಹದೇವಯ್ಯ ಭೂಮಿ ವ್ಯಾಜ್ಯಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡಿದ್ದರು ಎಂದರು.

ಇದನ್ನೂ ಓದಿ: ರಾಮನಗರ: ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್ ಭಾವ ಮಹದೇವಯ್ಯ ಶವ ಪತ್ತೆ

ಮಹದೇವಯ್ಯ ಮೃತದೇಹ ಬೆಂಗಳೂರಿಗೆ ಶಿಫ್ಟ್

ಕೊಲೆಯಾದ ಮಹದೇವಯ್ಯ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ಆರ್​ಆರ್​ ನಗರದ ಶವಗಾರಕ್ಕೆ ಕೊಂಡೊಯ್ಯಲಾಗುತ್ತಿದೆ. ಅರಣ್ಯ ಪ್ರದೇಶದಿಂದ ಶವ ಹೊರತಂದು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ಸಮ್ಮುಖದಲ್ಲಿ ಌಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶವ ರವಾನಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ