ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿ: ದೂರು ದಾಖಲು
ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ನಾಯಕರ ಹೆಸರಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಲಾಗುತ್ತಿತ್ತು. ಇದೀಗ ನಕಲಿ ಪತ್ರ ಸೃಷ್ಟಿಸಲು ಆರಂಭಿಸಿದ್ದಾರೆ. ಸಿಎಂ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿದವರ ವಿರುದ್ಧ ಸಿಎಂ ಆಪ್ತ ಕಾರ್ಯದರ್ಶಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಬೆಂಗಳೂರು, ಡಿ.11: ಸಿಎಂ ಆಪ್ತ ಕಾರ್ಯದರ್ಶಿಗಳ (Private Secretary) ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿದ ಪ್ರಕರಣ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
ನಕಲಿ ಲೆಟರ್ ಹೆಡರ್ ಸೃಷ್ಟಿಸಿ ಸಿಎಂ ಕಚೇರಿಯಿಂದ ಲೋಕೋಪಯೋಗಿ ಸಚಿವರಿಗೆ ಕಡತವೊಂದನ್ನು ಕಳುಹಿಸಲಾಗಿದೆ. ಈ ಕಡತದಲ್ಲಿ ರಾಜೇಂದ್ರ ಹೆಸರಿನಲ್ಲಿ ಸಹಿ ಹಾಕಲಾಗಿದ್ದು, ಅಂಕಿತ್ ಎಂಬಾತನಿಗೆ ಇಲಾಖೆಯಲ್ಲಿ ತಾತ್ಕಾಲಿಕ ಕೆಲಸ ನೀಡುವಂತೆ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ನಕಲಿ ದಾಖಲಾತಿ ಸೃಷ್ಟಿಸಿ ಬ್ಯಾಂಕ್ಗಳಲ್ಲಿ ಸಾಲ ಪಡೆದು ವಂಚಿಸಿದ ಗ್ಯಾಂಗ್; ದೂರು ದಾಖಲಾದರೂ ಕ್ರಮ ಕೈಗೊಳ್ಳದ ಪೊಲೀಸರು
ಆದರೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ರಾಜೇಂದ್ರ ಎಂಬ ವ್ಯಕ್ತಿಯೇ ಇಲ್ಲ. ಈ ಹಿನ್ನೆಲೆ ಸಿಎಂ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ರಾಜೇಂದ್ರ ಹಾಗೂ ಅಂಕಿತ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ