ಮೊಬೈಲ್ ಆ್ಯಪ್ ಮೂಲಕ​ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳು ಸಿಸಿಬಿ ಬಲೆಗೆ

ಬೆಂಗಳೂರು: ಮೊಬೈಲ್ ಆಪ್ ಮೂಲಕ ಹಣ ವರ್ಗಾವಣೆ ಮಾಡಿ ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೆಲ್ ಬೋರ್ನ್ ಸ್ಟಾರ್ ಮತ್ತು ಮೆಲ್ ಬೋರ್ನ್ ರೆನೆಗೇಡ್ಸ್ ತಂಡದ ಪಂದ್ಯದ ಮೇಲೆ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ದಾಳಿ ವೇಳೆ 1.05 ಲಕ್ಷ ನಗದು ಸೇರಿ ಒಂದು ಲ್ಯಾಪ್ ಟಾಪ್, 9 ಮೊಬೈಲ್​ಗಳನ್ನು ಜಪ್ತಿ ಮಾಡಿದ್ದಾರೆ.

ಮೊಬೈಲ್ ಆ್ಯಪ್ ಮೂಲಕ​ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳು ಸಿಸಿಬಿ ಬಲೆಗೆ
ಸಾಧು ಶ್ರೀನಾಥ್​

Updated on: Jan 11, 2020 | 2:49 PM

ಬೆಂಗಳೂರು: ಮೊಬೈಲ್ ಆಪ್ ಮೂಲಕ ಹಣ ವರ್ಗಾವಣೆ ಮಾಡಿ ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೆಲ್ ಬೋರ್ನ್ ಸ್ಟಾರ್ ಮತ್ತು ಮೆಲ್ ಬೋರ್ನ್ ರೆನೆಗೇಡ್ಸ್ ತಂಡದ ಪಂದ್ಯದ ಮೇಲೆ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ದಾಳಿ ವೇಳೆ 1.05 ಲಕ್ಷ ನಗದು ಸೇರಿ ಒಂದು ಲ್ಯಾಪ್ ಟಾಪ್, 9 ಮೊಬೈಲ್​ಗಳನ್ನು ಜಪ್ತಿ ಮಾಡಿದ್ದಾರೆ.

Published On - 1:54 pm, Sat, 11 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us