AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮೊಬೈಲ್​ನಲ್ಲಿ ಚಾಟ್ ಮಾಡಿದ್ದಕ್ಕೆ ಬೈದ ತಾಯಿ; ಮನನೊಂದು 16 ವರ್ಷದ ಬಾಲಕಿ ಆತ್ಮಹತ್ಯೆ

ಆ ಹುಡುಗಿ ತನ್ನ ಕೋಚಿಂಗ್ ಕ್ಲಾಸ್​ನಿಂದ ಮನೆಗೆ ಬಂದವಳು ಮೊಬೈಲ್ ಫೋನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದಳು. ಅದರಿಂದ ಕೋಪಗೊಂಡ ಆಕೆಯ ತಾಯಿ ಅವಳನ್ನು ಗದರಿಸಿದಳು.

Crime News: ಮೊಬೈಲ್​ನಲ್ಲಿ ಚಾಟ್ ಮಾಡಿದ್ದಕ್ಕೆ ಬೈದ ತಾಯಿ; ಮನನೊಂದು 16 ವರ್ಷದ ಬಾಲಕಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 24, 2022 | 11:40 AM

Share

ಕಾನ್ಪುರ: ಸದಾ ಮೊಬೈಲ್​ನಲ್ಲಿ ಚಾಟ್ ಮಾಡುತ್ತಿದ್ದ 16 ವರ್ಷದ ಮಗಳಿಗೆ ಆಕೆಯ ತಾಯಿ ಬೈದಿದ್ದರಿಂದ ಬೇಸರಗೊಂಡ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ದೀಕ್ಷಾ ಎಂಬ 9ನೇ ತರಗತಿಯ ಬಾಲಕಿ ಗಂಗಾಪುರ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮೃತ ಬಾಲಕಿಯ ಕುಟುಂಬದ ಸದಸ್ಯರ ಪ್ರಕಾರ, ಆ ಹುಡುಗಿ ತನ್ನ ಕೋಚಿಂಗ್ ಕ್ಲಾಸ್​ನಿಂದ ಮನೆಗೆ ಬಂದವಳು ಮೊಬೈಲ್ ಫೋನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದಳು. ಅದರಿಂದ ಕೋಪಗೊಂಡ ಆಕೆಯ ತಾಯಿ ಅವಳನ್ನು ಗದರಿಸಿದಳು. ಇದರಿಂದ ಆಕೆ ರೂಮಿನಲ್ಲಿ ಬಾಗಿಲು ಹಾಕಿಕೊಂಡು ಕುಳಿತಿದ್ದಳು. ಆ ದಿನ ರಾತ್ರಿ ಊಟಕ್ಕೆ ಕರೆಯಲು ತಾಯಿ ತನ್ನ ಮಗಳ ರೂಮಿಗೆ ಹೋಗಿ ನೋಡಿದಾಗ ಅವಳು ಫ್ಯಾನ್​ಗೆ ನೇಣು ಹಾಕಿಕೊಂಡಿದ್ದಳು. ಆ ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಳು.

ಇದನ್ನೂ ಓದಿ: ಗಂಡನ ಸಾವಿನ ಸುದ್ದಿ ಕೇಳಿ ಮಗಳೊಂದಿಗೆ ತಾಯಿ ಕೂಡ ಆತ್ಮಹತ್ಯೆಗೆ ಶರಣು!

ಇತ್ತೀಚೆಗೆ ಸಣ್ಣಪುಟ್ಟ ವಿಷಯಕ್ಕೂ ಮಕ್ಕಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ತಿಂಗಳು ಕಾನ್ಪುರದ ಚಕೇರಿಯಲ್ಲಿ 10 ವರ್ಷದ ಬಾಲಕಿ ತನ್ನ ಅಕ್ಕನೊಂದಿಗೆ ಜಗಳವಾಡಿದ ನಂತರ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ತನ್ನ ಅಕ್ಕನೊಂದಿಗೆ ಜಗಳವಾಡಿದ ನಂತರ 10 ವರ್ಷದ ಬಾಲಕಿ ಮನೆಯಿಂದ ಹೊರಗೆ ಓಡಿಬಂದಿದ್ದಳು. ಈ ವೇಳೆ ಅವರ ಸಂಬಂಧಿಕರು ಬಾಲಕಿಯನ್ನು ಹಿಡಿಯಲು ಯತ್ನಿಸಿದ್ದು, ಆಕೆ ಮನೆಯ ಸಮೀಪದ ರೈಲು ಹಳಿ ಮೇಲೆ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:40 am, Mon, 24 October 22

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!