Crime News: 17 ವರ್ಷದ ಬಾಲಕಿಯ ಕತ್ತು ಸೀಳಿ ಹತ್ಯೆ, ಪ್ರೇಮಿಯ ಬಂಧನ

ತಿರುವನಂತಪುರಂ ಸಮೀಪದ ವರ್ಕಲದ ವಡಸ್ಸೆರಿಕೋಣಂ ಎಂಬಲ್ಲಿ ಬುಧವಾರ ಮುಂಜಾನೆ 17 ವರ್ಷದ ಬಾಲಕಿಯೊಬ್ಬಳು ಮನೆಯ ಹೊರಗೆ ಕತ್ತು ಸೀಳಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Crime News: 17 ವರ್ಷದ ಬಾಲಕಿಯ ಕತ್ತು ಸೀಳಿ ಹತ್ಯೆ, ಪ್ರೇಮಿಯ ಬಂಧನ
Crime
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 28, 2022 | 1:12 PM

ವಡಸ್ಸೆರಿಕೋಣಂ: ತಿರುವನಂತಪುರಂ (Thiruvananthapuram) ಸಮೀಪದ ವರ್ಕಲದ ವಡಸ್ಸೆರಿಕೋಣಂ ಎಂಬಲ್ಲಿ ಬುಧವಾರ ಮುಂಜಾನೆ 17 ವರ್ಷದ ಬಾಲಕಿಯೊಬ್ಬಳು ಮನೆಯ ಹೊರಗೆ ಕತ್ತು ಸೀಳಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪತ್ತೆ ಮಾಡಲಾಲಗಿದೆ. ಮೃತ ಬಾಲಕಿ ಕೆಲ ದಿನಗಳಿಂದ ಪ್ರೀತಿಸುತ್ತಿದ್ದಳು ಎನ್ನಲಾದ ಆಕೆಯ ಸ್ನೇಹಿತ ಗೋಪು (20) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸರ ಪ್ರಕಾರ, ಮೃತ ಬಾಲಕಿ ಸಂಗೀತಾ ಎಂದು ಗುರುತಿಸಲಾಗಿದೆ. ಈಕೆಯನ್ನು ಆರೋಪಿಗಳು ಮನೆಯಿಂದ ಹೊರಗೆ ಕರೆದೊಯ್ದು ಮಧ್ಯರಾತ್ರಿಯ ನಂತರ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಕಿರುಚಾಟ ಕೇಳಿ ಸ್ಥಳಕ್ಕೆ ಧಾವಿಸಿದ ಆಕೆಯ ಮನೆಯವರು ಮತ್ತು ನೆರೆಹೊರೆಯವರು ಆಕೆ ಮನೆಯ ಹೊರಗಡೆ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ನೋಡಿದ್ದಾರೆ. ಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ವಿಪರೀತ ರಕ್ತ ಹೋಗಿರುವ ಕಾರಣ ಉಳಿಸಲು ಸಾಧ್ಯವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೊಬೈಲ್ ಫೋನ್ ವಿವರಗಳು ಮತ್ತು ಇತರ ಸಾಂದರ್ಭಿಕ ಸಾಕ್ಷ್ಯಗಳ ಆಧಾರದ ಮೇಲೆ ಆಕೆಯನ್ನು ಪ್ರೀತಿಸುತ್ತಿದ್ದ ಗೋಪು ಎಂಬುವನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ:ಅಪರಾಧ ಸುದ್ದಿ ರೌಂಡಪ್: ರೈಲಿಗೆ ತಲೆ ಕೊಟ್ಟ ಪ್ರೇಮಿಗಳು, ಡ್ರಗ್ಸ್ ಪೆಡ್ಲರ್ ಅರೆಸ್ಟ್

ಈ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಹಿಂದೆ ಇರುವ ಆರೋಪಿಗಳ ಶೀಘ್ರದಲ್ಲೇ ಬಂಧಿಸಲಾಗುವುದು. ವಿವರವಾದ ವಿಚಾರಣೆಯ ನಂತರವೇ ನಿಖರವಾದ ಕಾರಣವನ್ನು ತಿಳಿಸಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ಪ್ರೀತಿಯಲ್ಲಿ ಬಿರುಕು ಬಂದಿರುವುದರಿಂದ ಈ ಅಪರಾಧಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ ಮತ್ತು ಸದ್ಯಕ್ಕೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ಅವರು ಹೇಳಿದರು. ಆರೋಪಿ ಸಮೀಪದ ಪಳ್ಳಿಕ್ಕಲ್ ಮೂಲದವನಾಗಿದ್ದು, ಸಂಗೀತಾ ಇಲ್ಲಿನ ಸ್ಥಳೀಯ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು ಎಂದು ಹೇಳಲಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Wed, 28 December 22

ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?