AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಕಾರಿನಲ್ಲೇ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ; ಕೊಚ್ಚಿಯಲ್ಲಿ ನಾಲ್ವರ ಬಂಧನ

ಅತ್ಯಾಚಾರಕ್ಕೊಳಗಾದ ಮಾಡೆಲ್ ಕೊಚ್ಚಿನ್ ಶಿಪ್‌ಯಾರ್ಡ್ ಬಳಿ ಪಬ್‌ಗೆ ಭೇಟಿ ಹೋಗಿದ್ದರು. ಮದ್ಯಪಾನ ಮಾಡಿದ್ದ ಆಕೆಯನ್ನು ಆರೋಪಿಗಳು ಕಾಕ್ಕನಾಡ್‌ನಲ್ಲಿರುವ ಆಕೆಯ ಮನೆಗೆ ಬಿಡುತ್ತೇವೆ ಎಂದು ಹೇಳಿ ಕಾರಿಗೆ ಹತ್ತಿಸಿಕೊಂಡಿದ್ದರು.

ಚಲಿಸುತ್ತಿದ್ದ ಕಾರಿನಲ್ಲೇ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ; ಕೊಚ್ಚಿಯಲ್ಲಿ ನಾಲ್ವರ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 19, 2022 | 3:55 PM

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿ (Kochi) ಗುರುವಾರ ತಡರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ 19 ವರ್ಷದ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ಎಸಗಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರ್ನಾಕುಲಂ ಪೊಲೀಸರು ಮೂವರು ಪುರುಷರು ಮತ್ತು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಮಾಡೆಲ್ ಕೊಚ್ಚಿನ್ ಶಿಪ್‌ಯಾರ್ಡ್ ಬಳಿ ಪಬ್‌ಗೆ ಭೇಟಿ ಹೋಗಿದ್ದರು. ಮದ್ಯಪಾನ ಮಾಡಿದ್ದ ಆಕೆಯನ್ನು ಆರೋಪಿಗಳು ಕಾಕ್ಕನಾಡ್‌ನಲ್ಲಿರುವ ಆಕೆಯ ಮನೆಗೆ ಬಿಡುತ್ತೇವೆ ಎಂದು ಹೇಳಿ ಕಾರಿಗೆ ಹತ್ತಿಸಿಕೊಂಡಿದ್ದರು.

ಆಗ ದಾರಿಯಲ್ಲಿ ಆಕೆಯ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಆರೋಪಿಗಳು ತಡರಾತ್ರಿಯವರೆಗೆ ನಗರದಲ್ಲಿ ಕಾರು ಚಲಾಯಿಸುತ್ತಿದ್ದಾಗಲೇ ಆಕೆಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಮನೆಯ ಬಳಿ ಬಿಟ್ಟು ಹೋಗಿದ್ದಾರೆ. ಇದೀಗ ಆ ಮಾಡೆಲ್ ಕಲಮಶ್ಶೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Crime News: ಕಾಡಿನಲ್ಲಿ ಯುವತಿಯ ಮೇಲೆ ಅತ್ಯಾಚಾರ, ಸ್ನೇಹಿತೆಯ ಸಹಾಯದಿಂದ ಬದುಕಿಳಿದ ಯುವತಿ

“ವೈದ್ಯಕೀಯ ಪುರಾವೆಗಳು ಆಕೆಯ ಮೇಲೆ ಅತ್ಯಾಚಾರ ಮತ್ತು ಹಲ್ಲೆ ನಡೆದಿದೆ ಎಂಬುದನ್ನು ಸೂಚಿಸುತ್ತಿವೆ. ಅತ್ಯಾಚಾರ ಮಾಡಿದ ನಂತರ ಮೂವರು ಪುರುಷರು ಆಕೆಯನ್ನು ಕಾಕ್ಕನಾಡ್‌ನಲ್ಲಿ ಬಿಟ್ಟು ಹೋಗಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಆಕೆಯನ್ನು ಆಕೆಯ ರೂಮ್‌ಮೇಟ್ ಚಿಕಿತ್ಸೆಗಾಗಿ ದಾಖಲಿಸಿದ್ದ ಖಾಸಗಿ ಆಸ್ಪತ್ರೆಯಿಂದ ಪೊಲೀಸರಿಗೆ ದೂರು ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಮಾಡೆಲ್​ನ ಗೆಳತಿ ಕೂಡ ಮೂವರು ಪುರುಷರಿಗೆ ಸಹಾಯ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಷನ್ 370 ಮತ್ತು 376 ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Sat, 19 November 22

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ