Crime News: ಎಕ್ಸಾಂ ಬರೆದು ಬಂದ ಯುವತಿಯ ಕುತ್ತಿಗೆ ಸೀಳಿದ ಭಗ್ನ ಪ್ರೇಮಿ; ಕಾಲೇಜಿನಲ್ಲೇ ಕಗ್ಗೊಲೆ

Murder News : ಅಭಿಷೇಕ್ ಹಾಗೂ ನಿತಿನಾಮೋಲ್ ಕ್ಲಾಸ್​ಮೇಟ್​ಗಳಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ. ಆದರೆ, ಆಕೆ ಆತನನ್ನು ಪ್ರೀತಿಸಲು ಸಾಧ್ಯವಿಲ್ಲ ಎಂದಿದ್ದಳು. ಇದರಿಂದ ಅವಮಾನಗೊಂಡಿದ್ದ ಅಭಿಷೇಕ್ ಇಂದು ಪರೀಕ್ಷೆ ಮುಗಿಸಿ ಬಂದ ಆಕೆಯ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಿದ್ದಾನೆ.

Crime News: ಎಕ್ಸಾಂ ಬರೆದು ಬಂದ ಯುವತಿಯ ಕುತ್ತಿಗೆ ಸೀಳಿದ ಭಗ್ನ ಪ್ರೇಮಿ; ಕಾಲೇಜಿನಲ್ಲೇ ಕಗ್ಗೊಲೆ
ಕೊಲೆ ನಡೆದ ಕೇರಳದ ಕಾಲೇಜು ಆವರಣ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 01, 2021 | 4:42 PM

ಕೊಚ್ಚಿ: ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕೋಪದಲ್ಲಿ ಯುವತಿಯ ಮೇಲೆ ದ್ವೇಷ ತೀರಿಸಿಕೊಳ್ಳಲು ಕಾಯುತ್ತಿದ್ದ ಯುವಕ ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕೇರಳದ ಕೊಟ್ಟಾಯಂನಲ್ಲಿ ಈ ಘಟನೆ ನಡೆದಿದ್ದು, ಪಾಲಾದಲ್ಲಿರುವ ಸೇಂಟ್ ಥಾಮಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ನಿತಿನಾಮೋಲ್ ಇಂದು ಪರೀಕ್ಷೆ ಬರೆದು ಎಕ್ಸಾಂ ಹಾಲ್​ನಿಂದ ಹೊರಬರುವಾಗ ಎದುರು ಬಂದ ಅಭಿಷೇಕ್ ಎಂಬ ಯುವಕ ಚಾಕುವಿನಿಂದ ಆಕೆಯ ಕುತ್ತಿಗೆ ಕೊಯ್ದಿದ್ದಾನೆ. ಕಾಲೇಜು ಆವರಣದಲ್ಲಿಯೇ ಈ ಘಟನೆ ನಡೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿತಿನಾಮೋಲ್​ಳನ್ನು ಆಕೆಯ ಸ್ನೇಹಿತರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ವಿಪರೀತ ರಕ್ತ ಹೋಗಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ.

ಅಭಿಷೇಕ್ ಹಾಗೂ ನಿತಿನಾಮೋಲ್ ಕ್ಲಾಸ್​ಮೇಟ್​ಗಳಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ. ಆದರೆ, ಆಕೆ ಆತನನ್ನು ಪ್ರೀತಿಸಲು ಸಾಧ್ಯವಿಲ್ಲ ಎಂದಿದ್ದಳು. ಇದರಿಂದ ಅವಮಾನಗೊಂಡಿದ್ದ ಅಭಿಷೇಕ್ ಇಂದು ಪರೀಕ್ಷೆ ಮುಗಿಸಿ ಬಂದ ಆಕೆಯ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಿದ್ದಾನೆ. ಕೆಳಗೆ ಬಿದ್ದ ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಕಾಲೇಜಿನ ಪರೀಕ್ಷೆಗಳು ನಡೆಯುತ್ತಿದ್ದು, ಘಟನೆ ನಡೆದಾಗ ಕೆಲವು ವಿದ್ಯಾರ್ಥಿಗಳು ಮಾತ್ರ ಹೊರಗೆ ಇದ್ದರು. ಉಳಿದವರು ಪರೀಕ್ಷೆ ಬರೆಯುತ್ತಿದ್ದರು ಎನ್ನಲಾಗಿದೆ. ಅಭಿಷೇಕ್ ಪರೀಕ್ಷೆ ಬರೆದು ಬೇಗನೆ ಹೊರಗೆ ಹೋಗಿದ್ದ. ನಿತಿನಾಮೋಲ್ ಹೊರಗೆ ಬರುತ್ತಿದ್ದಂತೆ ಆಕೆಯನ್ನು ಕೊಲೆ ಮಾಡಿದ್ದಾನೆ.

ಸೆಕ್ಯುರಿಟಿ ಸಿಬ್ಬಂದಿ ಕೆಳಗೆ ಬಿದ್ದಿದ್ದ ನಿತಿನಾಮೋಲ್​ಳನ್ನು ಮೊದಲು ನೋಡಿದ್ದು, ಜೋರಾಗಿ ಕಿರುಚಾಡಿದ್ದಾರೆ. ಆಗ ಆಕೆಯ ಸ್ನೇಹಿತರು ಹಾಗೂ ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು. ಅಭಿಷೇಕ್​ನನ್ನು ಪೊಲೀಸರು ಹಿಡಿದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Crime News: ಹಾಡಹಗಲೇ ಕಾಲೇಜು ಯುವತಿಯ ಕುತ್ತಿಗೆ ಸೀಳಿ ಕೊಲೆ; ಪ್ರೇಮ ವೈಫಲ್ಯದ ಶಂಕೆ

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್