AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮನೆ ಮುಂದೆಯೇ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

Murder: ಮೃತ ವ್ಯಕ್ತಿ ಶಾರುಖ್ ಮೇಲೆ ಹಲ್ಲೆ ಮಾಡಿದ ಆರೋಪಿಗಳಲ್ಲಿ ಒಬ್ಬನ ತಂಗಿಯ ಜೊತೆ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅದೇ ಕಾರಣಕ್ಕೆ ಆತನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

Crime News: ಮನೆ ಮುಂದೆಯೇ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಯುವಕನಿಗೆ ಥಳಿಸುತ್ತಿರುವ ಗೆಳೆಯರು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 30, 2021 | 6:36 PM

ನವದೆಹಲಿ: ದೆಹಲಿಯ ಶಾಹದಾರ ಜಿಲ್ಲೆಯಲ್ಲಿ 24 ವರ್ಷದ ವ್ಯಕ್ತಿಯೊಬ್ಬನನ್ನು ಆತನ ಮನೆಯ ಬಳಿಯೇ ಮೂವರು ವ್ಯಕ್ತಿಗಳು ಇರಿದು ಕೊಂದಿದ್ದಾರೆ. ವ್ಯಕ್ತಿಯನ್ನು ಥಳಿಸಿ, ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ದೃಶ್ಯಾವಳಿಯಲ್ಲಿ ಕಂಡುಬಂದ ಮೂವರಲ್ಲಿ ಇಬ್ಬರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಆ ದುಷ್ಕರ್ಮಿಗಳು ಕುರ್ಚಿಯಿಂದ ಯುವಕನ ತಲೆಗೆ ಹೊಡೆದಿರುವುದನ್ನು ವಿಡಿಯೋದಲ್ಲಿ ನೋಡಬಹುದು. ನಂತರ ಚಾಕುವಿನಿಂದ ಆತನ ಹೊಟ್ಟೆಗೆ ಇರಿದು, ಕೊಲೆ ಮಾಡಿದ್ದಾರೆ.

ಮೃತ ವ್ಯಕ್ತಿ ಶಾರುಖ್ ಮೇಲೆ ಹಲ್ಲೆ ಮಾಡಿದ ಆರೋಪಿಗಳಲ್ಲಿ ಒಬ್ಬನ ತಂಗಿಯ ಜೊತೆ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ತನ್ನ ತಂಗಿಯ ಜೊತೆಗೆ ಸಂಬಂಧ ಇಟ್ಟುಕೊಳ್ಳದಂತೆ ಶಾರುಖ್​ಗೆ ಎಚ್ಚರಿಕೆ ನೀಡಿದ್ದ. ಆದರೂ ಅವರಿಬ್ಬರ ಸಂಬಂಧ ಮುಂದುವರೆದಿತ್ತು. ಇದರಿಂದ ಕೋಪಗೊಂಡ ಆರೋಪಿ ತನ್ನ ಇಬ್ಬರು ಗೆಳೆಯರೊಂದಿಗೆ ಬುಧವಾರ ಸಂಜೆ ಶಾರುಖ್‌ನನ್ನು ರಸ್ತೆಯಲ್ಲಿ ಕೊಂದಿದ್ದ ಎನ್ನಲಾಗಿದೆ.

ರಸ್ತೆಯಲ್ಲಿ ರಕ್ತಸ್ರಾವವಾಗಿ ಬಿದ್ದಿದ್ದ ಶಾರುಖ್​ನನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ಪೊಲೀಸರು ಆ ಸ್ಥಳಕ್ಕೆ ಹೋಗುವಷ್ಟರಲ್ಲಿ ಶಾರುಖ್​ನನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ನಂತರ ಆತನಿಗೆ ಚಿಕಿತ್ಸೆ ನೀಡಿದರೂ ಗುಣಮುಖರಾಗದೆ ಸಾವನ್ನಪ್ಪಿದ್ದ.

ತನಿಖೆಯ ಸಮಯದಲ್ಲಿ, ಮತ್ತು ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಗಳನ್ನು ವಿಶ್ಲೇಷಿಸಿದ ಪೊಲೀಸರು ಆರೋಪಿಗಳನ್ನು ಸೀಮಾಪುರಿ ನಿವಾಸಿಗಳಾದ ಜುಬೇರ್, ಜಾಫರ್ ಮತ್ತು ಆದಿತ್ಯ ಎಂದು ಗುರುತಿಸಿದ್ದಾರೆ. ಅವರನ್ನ ಪತ್ತೆಹಚ್ಚಲು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಕೊನೆಗೂ ಇಬ್ಬರು ಆರೋಪಿಗಳಾದ ಆದಿತ್ಯ ಮತ್ತು ಜುಬೇರ್ ಅವರನ್ನು ಬಂಧಿಸಲಾಯಿತು. ಮೂರನೇ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ.

ಇದನ್ನೂ ಓದಿ: Crime News: ಕೇವಲ 400 ರೂ.ಗಾಗಿ ಪ್ರೇಯಸಿಯ ಮೂಗನ್ನೇ ಕತ್ತರಿಸಿದ ಮಹರಾಯ!

Crime News: ಗಂಡ ಬ್ಲೌಸ್ ಹೊಲಿದಿದ್ದು ಸರಿಯಾಗಿಲ್ಲವೆಂದು ಹೆಂಡತಿ ಆತ್ಮಹತ್ಯೆ!

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು