ನವದೆಹಲಿ: ದೆಹಲಿಯ ಶಾಹದಾರ ಜಿಲ್ಲೆಯಲ್ಲಿ 24 ವರ್ಷದ ವ್ಯಕ್ತಿಯೊಬ್ಬನನ್ನು ಆತನ ಮನೆಯ ಬಳಿಯೇ ಮೂವರು ವ್ಯಕ್ತಿಗಳು ಇರಿದು ಕೊಂದಿದ್ದಾರೆ. ವ್ಯಕ್ತಿಯನ್ನು ಥಳಿಸಿ, ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ದೃಶ್ಯಾವಳಿಯಲ್ಲಿ ಕಂಡುಬಂದ ಮೂವರಲ್ಲಿ ಇಬ್ಬರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಆ ದುಷ್ಕರ್ಮಿಗಳು ಕುರ್ಚಿಯಿಂದ ಯುವಕನ ತಲೆಗೆ ಹೊಡೆದಿರುವುದನ್ನು ವಿಡಿಯೋದಲ್ಲಿ ನೋಡಬಹುದು. ನಂತರ ಚಾಕುವಿನಿಂದ ಆತನ ಹೊಟ್ಟೆಗೆ ಇರಿದು, ಕೊಲೆ ಮಾಡಿದ್ದಾರೆ.
ಮೃತ ವ್ಯಕ್ತಿ ಶಾರುಖ್ ಮೇಲೆ ಹಲ್ಲೆ ಮಾಡಿದ ಆರೋಪಿಗಳಲ್ಲಿ ಒಬ್ಬನ ತಂಗಿಯ ಜೊತೆ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ತನ್ನ ತಂಗಿಯ ಜೊತೆಗೆ ಸಂಬಂಧ ಇಟ್ಟುಕೊಳ್ಳದಂತೆ ಶಾರುಖ್ಗೆ ಎಚ್ಚರಿಕೆ ನೀಡಿದ್ದ. ಆದರೂ ಅವರಿಬ್ಬರ ಸಂಬಂಧ ಮುಂದುವರೆದಿತ್ತು. ಇದರಿಂದ ಕೋಪಗೊಂಡ ಆರೋಪಿ ತನ್ನ ಇಬ್ಬರು ಗೆಳೆಯರೊಂದಿಗೆ ಬುಧವಾರ ಸಂಜೆ ಶಾರುಖ್‌ನನ್ನು ರಸ್ತೆಯಲ್ಲಿ ಕೊಂದಿದ್ದ ಎನ್ನಲಾಗಿದೆ.
ರಸ್ತೆಯಲ್ಲಿ ರಕ್ತಸ್ರಾವವಾಗಿ ಬಿದ್ದಿದ್ದ ಶಾರುಖ್‌ನನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ಪೊಲೀಸರು ಆ ಸ್ಥಳಕ್ಕೆ ಹೋಗುವಷ್ಟರಲ್ಲಿ ಶಾರುಖ್‌ನನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ನಂತರ ಆತನಿಗೆ ಚಿಕಿತ್ಸೆ ನೀಡಿದರೂ ಗುಣಮುಖರಾಗದೆ ಸಾವನ್ನಪ್ಪಿದ್ದ.
#HateCrime : Chilling video shows three men stab and thrash a man to death in Seemapuri area of #Delhi . He allegedly had an affair with the accused’s married sister, which he refused to put an end to. pic.twitter.com/saK14g0juH
— Pankhuri (@Pankhuri_Y) December 30, 2021
ತನಿಖೆಯ ಸಮಯದಲ್ಲಿ, ಮತ್ತು ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಗಳನ್ನು ವಿಶ್ಲೇಷಿಸಿದ ಪೊಲೀಸರು ಆರೋಪಿಗಳನ್ನು ಸೀಮಾಪುರಿ ನಿವಾಸಿಗಳಾದ ಜುಬೇರ್, ಜಾಫರ್ ಮತ್ತು ಆದಿತ್ಯ ಎಂದು ಗುರುತಿಸಿದ್ದಾರೆ. ಅವರನ್ನ ಪತ್ತೆಹಚ್ಚಲು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಕೊನೆಗೂ ಇಬ್ಬರು ಆರೋಪಿಗಳಾದ ಆದಿತ್ಯ ಮತ್ತು ಜುಬೇರ್ ಅವರನ್ನು ಬಂಧಿಸಲಾಯಿತು. ಮೂರನೇ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ.
ಇದನ್ನೂ ಓದಿ: Crime News: ಕೇವಲ 400 ರೂ.ಗಾಗಿ ಪ್ರೇಯಸಿಯ ಮೂಗನ್ನೇ ಕತ್ತರಿಸಿದ ಮಹರಾಯ!
Crime News: ಗಂಡ ಬ್ಲೌಸ್ ಹೊಲಿದಿದ್ದು ಸರಿಯಾಗಿಲ್ಲವೆಂದು ಹೆಂಡತಿ ಆತ್ಮಹತ್ಯೆ!