Crime News: ಜಮ್ಮು ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ; ಮೂವರು ಸಾವು, 17 ಜನರಿಗೆ ಗಾಯ

ಜಮ್ಮು-ಪಠಾಣ್‌ಕೋಟ್ ಹೆದ್ದಾರಿಯಲ್ಲಿ ನಾನಕೆ ಚಾಕ್‌ನಲ್ಲಿ ಅತಿ ವೇಗವಾಗಿ ಬಂದ ಒಂದು ಬಸ್​ ಅನ್ನು ಇನ್ನೊಂದು ಬಸ್ ಓವರ್‌ಟೇಕ್ ಮಾಡುವಾಗ ಈ ಅಪಘಾತ ಸಂಭವಿಸಿದೆ.

Crime News: ಜಮ್ಮು ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ; ಮೂವರು ಸಾವು, 17 ಜನರಿಗೆ ಗಾಯ
ಬಸ್​ ಅಪಘಾತ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 10, 2022 | 9:22 AM

ಸಾಂಬಾ: ಜಮ್ಮು ಮತ್ತು ಕಾಶ್ಮೀರದ ಸಾಂಬಾ (Samba) ಜಿಲ್ಲೆಯಲ್ಲಿ 2 ಬಸ್‌ಗಳು ಡಿಕ್ಕಿಯಾದ ಪರಿಣಾಮ ಮಹಿಳೆ ಮತ್ತು ಆಕೆಯ ಮಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ (Accident) 17 ಮಂದಿ ಗಾಯಗೊಂಡಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ, ಜಮ್ಮು-ಪಠಾಣ್‌ಕೋಟ್ ಹೆದ್ದಾರಿಯಲ್ಲಿ ನಾನಕೆ ಚಾಕ್‌ನಲ್ಲಿ ಅತಿ ವೇಗವಾಗಿ ಬಂದ ಒಂದು ಬಸ್​ ಅನ್ನು ಇನ್ನೊಂದು ಬಸ್ ಓವರ್‌ಟೇಕ್ ಮಾಡುವಾಗ ಈ ಅಪಘಾತ ಸಂಭವಿಸಿದೆ.

ಒಂದು ಬಸ್ ಸಹರಾನ್‌ಪುರಕ್ಕೆ ತೆರಳುತ್ತಿದ್ದರೆ ಇನ್ನೊಂದು ಬಸ್ ಕಥುವಾ ಜಿಲ್ಲೆಗೆ ಪ್ರಯಾಣಿಸುತ್ತಿತ್ತು. ಮೃತರನ್ನು ಪಂಜಾಬ್‌ನ ಬಟಾಲಾ ಮೂಲದ ಮಂಗಿ ದೇವಿ (36), ಅವರ 14 ವರ್ಷದ ಮಗಳು ತಾನಿಯಾ ಮತ್ತು ರಾಜ್‌ಪುರದ 58 ವರ್ಷದ ಕಸ್ತೂರಿ ಲಾಲ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: 7 ಜನರು ಸಾವು, ಹಲವರಿಗೆ ಗಂಭೀರ ಗಾಯ

ಸಾಂಬಾ ಜಿಲ್ಲಾಡಳಿತವು ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ., ತೀವ್ರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಹಾಗೂ ಸಣ್ಣಪುಟ್ಟ ಗಾಯವಾದವರಿಗೆ 10 ಸಾವಿರ ರೂ. ಪರಿಹಾರ ಘೋಷಿಸಿದೆ.

ಈ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ದೋಡಾ ಮತ್ತು ಸಾಂಬಾದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಜೀವಹಾನಿಯಾಗಿರುವ ವಿಷಯ ತಿಳಿದು ಬಹಳ ನೋವಾಗಿದೆ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ