AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಉತ್ತರ ಪ್ರದೇಶದ ರಸ್ತೆ ಬದಿ ನಿಂತಿದ್ದ ಬಸ್​ಗೆ ಟ್ರಕ್ ಡಿಕ್ಕಿ; 4 ಜನ ಸಾವು, ಹಲವರಿಗೆ ಗಾಯ

ಬಸ್ ನೇಪಾಳದಿಂದ ಗೋವಾಕ್ಕೆ ಪ್ರಯಾಣಿಸುತ್ತಿತ್ತು. ಈ ಘಟನೆ ನಡೆದಾಗ ಪಂಕ್ಚರ್ ಆದ ಟೈರ್ ಬದಲಾಯಿಸಲು ಬಸ್​ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಬಸ್​ಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಇದುವರೆಗೆ ಸುಮಾರು 14 ಮಂದಿ ಗಾಯಗೊಂಡಿದ್ದಾರೆ.

Crime News: ಉತ್ತರ ಪ್ರದೇಶದ ರಸ್ತೆ ಬದಿ ನಿಂತಿದ್ದ ಬಸ್​ಗೆ ಟ್ರಕ್ ಡಿಕ್ಕಿ; 4 ಜನ ಸಾವು, ಹಲವರಿಗೆ ಗಾಯ
ಉತ್ತರ ಪ್ರದೇಶದಲ್ಲಿ ಟ್ರಕ್ ಅಪಘಾತ
TV9 Web
| Edited By: |

Updated on: Sep 03, 2022 | 10:55 AM

Share

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ (Barabanki) ಜಿಲ್ಲೆಯಲ್ಲಿ ಇಂದು ಮುಂಜಾನೆ 3.30ರ ಸುಮಾರಿಗೆ ರಸ್ತೆ ಬದಿ ನಿಂತಿದ್ದ ಬಸ್​ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ (Accident) ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಬಾರಾಬಂಕಿ ಜಿಲ್ಲೆಯ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಟ್ರಕ್ ರಸ್ತೆಯಲ್ಲಿ ನಿಂತಿದ್ದ ಡಬಲ್ ಡೆಕ್ಕರ್ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಆ ಬಸ್ ನೇಪಾಳದಿಂದ ಗೋವಾಕ್ಕೆ ಪ್ರಯಾಣಿಸುತ್ತಿತ್ತು. ಈ ಘಟನೆ ನಡೆದಾಗ ಪಂಕ್ಚರ್ ಆದ ಟೈರ್ ಬದಲಾಯಿಸಲು ಬಸ್​ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಬಸ್​ಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಇದುವರೆಗೆ ಸುಮಾರು 14 ಮಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಸವದಿ ಪಾರು

ಬಾರಾಬಂಕಿಯ ಹೆಚ್ಚುವರಿ ಎಸ್‌ಪಿ ಪ್ರಕಾರ, ಗಾಯಗೊಂಡ ಇಬ್ಬರನ್ನು ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಈ ವರದಿಯ ಪ್ರಕಾರ, ಬಸ್‌ನಲ್ಲಿ ಸುಮಾರು 60 ಪ್ರಯಾಣಿಕರು ಗೋವಾಗೆ ಪ್ರಯಾಣಿಸುತ್ತಿದ್ದರು. ಸದ್ಯಕ್ಕೆ ಪ್ರಯಾಣಿಕರನ್ನು ನೇಪಾಳಕ್ಕೆ ವಾಪಾಸ್ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು