ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ (Barabanki) ಜಿಲ್ಲೆಯಲ್ಲಿ ಇಂದು ಮುಂಜಾನೆ 3.30ರ ಸುಮಾರಿಗೆ ರಸ್ತೆ ಬದಿ ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ (Accident) ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಬಾರಾಬಂಕಿ ಜಿಲ್ಲೆಯ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಟ್ರಕ್ ರಸ್ತೆಯಲ್ಲಿ ನಿಂತಿದ್ದ ಡಬಲ್ ಡೆಕ್ಕರ್ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಆ ಬಸ್ ನೇಪಾಳದಿಂದ ಗೋವಾಕ್ಕೆ ಪ್ರಯಾಣಿಸುತ್ತಿತ್ತು. ಈ ಘಟನೆ ನಡೆದಾಗ ಪಂಕ್ಚರ್ ಆದ ಟೈರ್ ಬದಲಾಯಿಸಲು ಬಸ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಇದುವರೆಗೆ ಸುಮಾರು 14 ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಸವದಿ ಪಾರು
Uttar Pradesh | Four people died after a speeding truck rammed into their double-decker in Ramanagar Police Station area of Barabanki district earlier today around 3.30 am. The bus was going from Nepal to Goa, and was parked to change a punctured tyre when the incident took place pic.twitter.com/6Mu36ZkhoD
— ANI UP/Uttarakhand (@ANINewsUP) September 3, 2022
ಬಾರಾಬಂಕಿಯ ಹೆಚ್ಚುವರಿ ಎಸ್‌ಪಿ ಪ್ರಕಾರ, ಗಾಯಗೊಂಡ ಇಬ್ಬರನ್ನು ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಈ ವರದಿಯ ಪ್ರಕಾರ, ಬಸ್‌ನಲ್ಲಿ ಸುಮಾರು 60 ಪ್ರಯಾಣಿಕರು ಗೋವಾಗೆ ಪ್ರಯಾಣಿಸುತ್ತಿದ್ದರು. ಸದ್ಯಕ್ಕೆ ಪ್ರಯಾಣಿಕರನ್ನು ನೇಪಾಳಕ್ಕೆ ವಾಪಾಸ್ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ.