ಆಟವಾಡಿಕೊಂಡಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದು, ಶವ ಬಚ್ಚಿಟ್ಟ ಕಾಮುಕರು

Rape and Murder: ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ನಿರ್ದಯವಾಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಆ ಶವವನ್ನು ಮನೆಯ ಚಾವಣಿಯ ಮೇಲೆ ಅಡಗಿಸಿ ಇಡಲಾಗಿದೆ

ಆಟವಾಡಿಕೊಂಡಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದು, ಶವ ಬಚ್ಚಿಟ್ಟ ಕಾಮುಕರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 28, 2021 | 8:40 PM

ಭೂಪಾಲ್: ಕಾಮಕ್ಕೆ ಕಣ್ಣಿಲ್ಲ ಎಂಬುದು ಸಾರ್ವಕಾಲಿಕ ಸತ್ಯ. ಮನೆಯ ತುಂಬ ಆಟವಾಡಿಕೊಂಡು ಇರುತ್ತಿದ್ದ 5 ವರ್ಷದ ಬಾಲಕಿಯ ಮೇಲೆ ಆಕೆಯ ಮನೆಯಲ್ಲೇ ಅಮಾನುಷವಾಗಿ ಅತ್ಯಾಚಾರ ನಡೆಸಲಾಗಿದೆ. ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ನಿರ್ದಯವಾಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಅಲ್ಲದೆ, ಆ ಬಾಲಕಿಯ ಶವವನ್ನು ಮನೆಯ ಚಾವಣಿಯ ಮೇಲೆ ಅಡಗಿಸಿ ಇಡಲಾಗಿದೆ.

ಹೋಶಂಗಾಬಾದ್​ ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಸೊಹಾಗ್‌ಪುರ ಪ್ರದೇಶದಲ್ಲಿರುವ ಬಾಲಕಿಯ ಮನೆಯ ಚಾವಣಿಯ ಮೇಲೆ ಬಟ್ಟೆಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ ಎಂದು ಸೊಹಾಗ್‌ಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಕ್ರಮ್ ರಜಾಕ್ ತಿಳಿಸಿದ್ದಾರೆ.

ಭಾನುವಾರ ರಾತ್ರಿ ಆ ಬಾಲಕಿಯ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ. ಅತ್ಯಾಚಾರ ನಡೆಸಿದ ನಂತರ ಆಕೆಯ ಕತ್ತು ಹಿಸುಕಿ ಸಾಯಿಸಲಾಗಿದೆ ಎಂದು ವರದಿಯಲ್ಲಿ ದೃಢಪಟ್ಟಿದೆ.

ಸಂತ್ರಸ್ತೆಯ ನೆರೆಹೊರೆಯಲ್ಲಿ ವಾಸಿಸುವ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಈ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಕಾಮುಕರು ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. 5 ವರ್ಷದ ಬಾಲಕಿಯ ಮೇಲೆ ನಡೆದ ಈ ಭೀಕರ ಕೃತ್ಯಕ್ಕೆ ಇಡೀ ಮಧ್ಯಪ್ರದೇಶವೇ ಆಘಾತಗೊಂಡಿದೆ.

ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆ 5 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಆಕೆಯ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿದ್ದರೂ ಆಕೆಯ ಸುಳಿವು ಸಿಕ್ಕಿರಲಿಲ್ಲ. ಆಕೆಯು ತಮ್ಮ ಊರಿನಲ್ಲೆಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಕುಟುಂಬದ ಸದಸ್ಯರು ಅವರ ಮನೆಯ ಮೇಲ್ಛಾವಣಿಯನ್ನು ಪರಿಶೀಲಿಸಿದಾಗ ಅಲ್ಲಿ ಬಟ್ಟೆಯಲ್ಲಿ ಸುತ್ತಿಟ್ಟಿದ್ದ ಆ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ಅತ್ಯಾಚಾರ ನಡೆಸಿ ಕೊಲೆ ಮಾಡಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Crime News: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಹಿಳೆ ಬರ್ಬರ ಹತ್ಯೆ; ಕೊಲೆಯ ದೃಶ್ಯ ಮೊಬೈಲ್​ನಲ್ಲಿ ಸೆರೆ

Crime News: ಮಗನ ಹುಟ್ಟುಹಬ್ಬ ಆಚರಿಸುವಾಗ ಆಕಸ್ಮಿಕವಾಗಿ ಗುಂಡು ಹಾರಿ ತಾಯಿ ಸಾವು

Published On - 8:39 pm, Tue, 28 December 21

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್