Crime News: ಕಚ್ಚಾ ಬಾಂಬ್ ಸ್ಫೋಟಗೊಂಡು 9 ವರ್ಷದ ಬಾಲಕಿ ಸಾವು

ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ತಾಯಿಯ ಚಿಕ್ಕಪ್ಪನ ಮನೆಯಲ್ಲಿದ್ದ ಸಂಗ್ರಹಿಸಲಾಗಿದ್ದ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ.

Crime News: ಕಚ್ಚಾ ಬಾಂಬ್ ಸ್ಫೋಟಗೊಂಡು 9 ವರ್ಷದ ಬಾಲಕಿ ಸಾವು
ಸಾಂದರ್ಭಿಕ ಚಿತ್ರ
Edited By:

Updated on: Nov 17, 2022 | 4:16 PM

ಬರಾಸತ್ : ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ಬುಧವಾರ ಸಂಜೆ ಮಿನಖಾನ್ ಪ್ರದೇಶದ ಬಕ್ಚೋರಾ ಗ್ರಾಮದಲ್ಲಿ ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ಬಾಲಕಿ ಕುತೂಹಲದಿಂದ ಬಾಂಬ್ ಅನ್ನು ಎತ್ತಿದಾಗ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಿನಾಖಾನ್ ಉಪವಿಭಾಗದ ಪೊಲೀಸ್ ಅಧಿಕಾರಿ (SDPO) ಅಮಿನುಲ್ ಇಸ್ಲಾಂ ಆಕೆ 2ನೇ ತರಗತಿಯ ವಿದ್ಯಾರ್ಥಿಯಾಗಿದ್ದು ದಕ್ಷಿಣ 24 ಪರಗಣ ಜಿಲ್ಲೆಯ ಬಸಂತಿ ಪ್ರದೇಶದದಲ್ಲಿ ವಾಸವಾಗಿದ್ದು, ಘಟನೆಯ ಎರಡು ದಿನಗಳ ಮೊದಲು ತನ್ನ ತಾಯಿಯ ಚಿಕ್ಕಪ್ಪನ ಮನೆಗೆ ಬಂದಿದ್ದಳು ಎಂದು ಹೇಳಿದರು. ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುವ ಮತ್ತು ದಿನಸಿ ಅಂಗಡಿಯನ್ನು ನಡೆಸುತ್ತಿರುವ ಬಾಲಕಿ ತಾಯಿಯ ಚಿಕ್ಕಪ್ಪನ ಮನೆಯ ಮೊದಲ ಮಹಡಿಯಲ್ಲಿನ ಕ್ಯಾರಂ ಬೋರ್ಡ್ ಪಕ್ಕದಲ್ಲಿ ಕಚ್ಚಾ ಬಾಂಬ್ ಇಡಲಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿ:  ಒಂದು ಕೈಯಿಂದ ಸ್ಕೂಟಿ ಚಲಾಯಿಸುತ್ತಾ ಇನ್ನೊಂದು ಕೈಯಲ್ಲಿ ಸಿಗರೇಟ್ ಹಚ್ಚಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಕುತೂಹಲದಿಂದ ಬಾಲಕಿ ಕಚ್ಚಾ ಬಾಂಬ್‌ ಎತ್ತುತ್ತಿದ್ದಂತೆ ಸ್ಫೋಟ ಸಂಭವಿಸಿದೆ. ಆಕೆಯನ್ನು ಮಿನಾಖಾನ್ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಘಟನೆಯ ನಂತರ ಆ ಮನೆಯಲ್ಲಿದ್ದವರು ಪರಾರಿಯಾಗಿದ್ದಾರೆ. ತಾಯಿಯ ಚಿಕ್ಕಪ್ಪನನ್ನು ಗುರುವಾರ ಬೆಳಿಗ್ಗೆ ಬಂಧಿಸಲಾಯಿತು ಮತ್ತು ಬಸಿರ್ಹತ್‌ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು, ಎಂದು ಪೊಲೀಸರು ಹೇಳಿದ್ದಾರೆ.

ಫೋರೆನ್ಸಿಕ್ ತಂಡವು ಸ್ಥಳಕ್ಕೆ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿದೆ, ಆದರೆ ಅಲ್ಲಿ ಯಾವುದೇ ಬಾಂಬ್ ಅಥವಾ ಬಾಂಬ್ ತಯಾರಿಕೆ ಸಾಮಗ್ರಿಗಳು ಕಂಡುಬಂದಿಲ್ಲ ಎಂದು ಅವರು ಹೇಳಿದರು. ಮನೆಯ ಬಳಿ ಪೊಲೀಸ್ ಪಿಕೆಟ್ ಏರ್ಪಡಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಅಪರಾಧದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:16 pm, Thu, 17 November 22