ಬೆಳಗಾವಿ ಡಿಸಿ ಕಚೇರಿಯಲ್ಲೇ ವಿಷಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಅಸ್ವಸ್ಥನನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸ್
ಡಿಸಿ ಕಚೇರಿಯಲ್ಲೇ ವಿಷ ಕುಡಿದ ವ್ಯಕ್ತಿ ಆತ್ಮಹತ್ಯೆ ಯತ್ನಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಜಿಲ್ಲೆಯ ಗೋಕಾಕ್ ಪಟ್ಟಣ ನಿವಾಸಿ ಕುಮಾರ್ ಕೊಪ್ಪದ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಡಿಸಿ ಕಚೇರಿಯಲ್ಲಿ ಇಲ್ಲದಿರುವಾಗ ಆತ್ಮಹತ್ಯೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಕ್ಕೆ ಯಾವುದೇ ಕಾರಣ ತಿಳಿದಿಲ್ಲ.
ಬೆಳಗಾವಿ, ಜನವರಿ 10: ಡಿಸಿ ಕಚೇರಿಯಲ್ಲೇ ವಿಷ (poison) ಕುಡಿದ ವ್ಯಕ್ತಿ ಆತ್ಮಹತ್ಯೆ ಯತ್ನಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಜಿಲ್ಲೆಯ ಗೋಕಾಕ್ ಪಟ್ಟಣ ನಿವಾಸಿ ಕುಮಾರ್ ಕೊಪ್ಪದ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಡಿಸಿ ಕಚೇರಿಯಲ್ಲಿ ಇಲ್ಲದಿರುವಾಗ ಆತ್ಮಹತ್ಯೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಕ್ಕೆ ಯಾವುದೇ ಕಾರಣ ತಿಳಿದಿಲ್ಲ. ಪೊಲೀಸರು ಅಸ್ವಸ್ಥನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣ
ವಿಜಯಪುರ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಅಪಘಾತ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಸರ್ಕಾರಿ ಬಸ್ ಹೊತ್ತಿ ಉರಿದಿದೆ. ದೃಷ್ಟವಶಾತ್ ಪ್ರಯಾಣಿಕರು ಬಸ್ನಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಸ್ಪಾ ಹೆಸರಲ್ಲಿ ನಡೆಯುತ್ತಿದೆಯಾ ವೇಶ್ಯಾವಾಟಿಕೆ? ಸ್ಪಾ ವಿರುದ್ಧ ಮಹಿಳಾ ಸಿಬ್ಬಂದಿಯಿಂದಲೇ ದೂರು
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.
ಪೊಲೀಸರ ಎದುರೇ 2 ಕುಟುಂಬಗಳ ಮಾರಾಮಾರಿ
ತುಮಕೂರು: ಸೈಟ್ ಅಳೆಯುವಾಗ ಪೊಲೀಸರ ಎದುರೇ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಗ್ರಾಮದ ಗೆಡ್ಡೆತಿಮ್ಮನಹಳ್ಳಿಯಲ್ಲಿ ನಡೆದಿದೆ. ಮಡಿಗೇಶಿ ಪೊಲೀಸರೆದುರೇ ಪರಸ್ಪರ ಹೊಡೆದಾಡಿಕೊಂಡ ಪ್ರಕರಣ ಡಿ.30ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಹಾವೇರಿಯಲ್ಲಿ ನೈತಿಕ ಪೊಲೀಸ್ಗಿರಿ: ಲಾಡ್ಜ್ನಲ್ಲಿ ಅನ್ಯಕೋಮಿನ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿಗೆ ಥಳಿತ
ಜಗಳ ಬಿಡಿಸಲು ಪೊಲೀಸ್ ಸಿಬ್ಬಂದಿ ಪರದಾಡಿದ್ದಾರೆ. ರಾಮಾಂಜಿನಪ್ಪ, ಚಂದ್ರಕಲಾ ಹಾಗೂ ಗಂಗಾಧರ್, ಭೂತರಾಜು ಎಂಬುವರಿಂದ ಇಬ್ಬರ ಮೇಲೆ ಹಲ್ಲೆ ಮಾಡಲಾಗಿದೆ. ಗಾಯಾಳುಗಳು ಮಧುಗಿರಿ, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
ದೇವನಹಳ್ಳಿ: ಹಲವು ದಿನಗಳಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸಿದ್ದಾಪುರ ಗ್ರಾಮದ ಹೊರವಲಯದ ದರ್ಗಾ ಬಳಿ ಕಂಡುಬಂದಿದೆ. ಗ್ರಾಮದ ಪಾತಿಮಾ (52 ) ಮೃತ ಮಹಿಳೆ. ಜನವರಿ 5 ರಂದು ಮನೆಯಿಂದ ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಗ್ರಾಮದ ಹೊರವಲಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಮಹಿಳೆ ನಾಪತ್ತೆ ಬಗ್ಗೆ ಸಂಬಂಧಿಕರಿಂದ ದೂರು ನೀಡಿದ್ದರು. ದರ್ಗಾ ಪಕ್ಕದಲ್ಲಿರುವ ಖಾಲಿ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ನಂದಗುಡಿ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.