AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸಂಕ್ರಾಂತಿ ಹಬ್ಬದಂದೇ ಕರ್ನಾಟಕದ ವಿವಿಧೆಡೆ ಸಾಲು ಸಾಲು ಅಪಘಾತಗಳು

ರಾಜ್ಯದೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ. ಆದರೆ ಈ ದಿನದಂದೇ ಕರ್ನಾಟಕದ ವಿವಿಧೆಡೆ ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಚಿಕ್ಕಬಳ್ಳಾಫುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಪೆರಮಾಚನಹಳ್ಳಿ ಗ್ರಾಮದ ಬಳಿ ಕೆಎಸ್​ಆರ್​ಟಿಸಿ ಬಸ್ ಹಾಗೂ ಬೈಕ್​ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

Crime News: ಸಂಕ್ರಾಂತಿ ಹಬ್ಬದಂದೇ ಕರ್ನಾಟಕದ ವಿವಿಧೆಡೆ ಸಾಲು ಸಾಲು ಅಪಘಾತಗಳು
ಸರ್ಕಾರಿ ಬಸ್​ಗೆ ಬೈಕ್​ ಡಿಕ್ಕಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 15, 2024 | 4:33 PM

Share

ಚಿಕ್ಕಬಳ್ಳಾಫುರ, ಜನವರಿ 15: ರಾಜ್ಯದೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ. ಆದರೆ ಈ ದಿನದಂದೇ ಕರ್ನಾಟಕದ ವಿವಿಧೆಡೆ ಸಾಲು ಸಾಲು ಅಪಘಾತಗಳು (accidents) ಸಂಭವಿಸಿವೆ. ಕೆಎಸ್​ಆರ್​ಟಿಸಿ ಬಸ್ ಹಾಗೂ ಬೈಕ್​ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಪೆರಮಾಚನಹಳ್ಳಿ ಗ್ರಾಮದ ಬಳಿ ನಡೆದಿದೆ. ಶಂಕರ್ (28), ಶಂಕರಮ್ಮ ಮೃತರು. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಕ್ರಾಸ್​ ಬಳಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ಚಿರಾಗ್(26) ಮೃತ ವ್ಯಕ್ತಿ. ಕಾರು ಚಾಲಕ ಪ್ರವೀಣ್​ಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಸ್ತೆ ದಾಟುವ ವೇಳೆ ಲಾರಿ ಹರಿದು ಬಾಲಕಿ ಸಾವು

ವಿಜಯನಗರ: ರಸ್ತೆ ದಾಟುವ ವೇಳೆ ಲಾರಿ ಹರಿದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಕೆ. ಅಯ್ಯನಹಳ್ಳಿ‌ ಗ್ರಾಮದಲ್ಲಿ ನಡೆದಿದೆ. ವರ್ಷಣಿ (04) ಮೃತ ಬಾಲಕಿ. ಲಾರಿ ಚಾಲಕನ ಅಜಾಗರೂಕತೆಯಿಂದ ಬಾಲಕಿ ಮೇಲೆ ಲಾರಿ ಹರಿದಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಒಂದೇ ದಿನ ಎರಡು ರಸ್ತೆ ಅಪಘಾತದಲ್ಲಿ 7 ಸಾವು, 6 ಮಂದಿಗೆ ಗಾಯ

ತಾಯಿ ಜೊತೆಗೆ ರಸ್ತೆ ಬಳಿ ನಿಂತಿದ್ದಾಗ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪತಿ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

ನೆಲಮಂಗಲ: ಪತಿ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ರಜಿಯಾ ಸುಲ್ತಾನ್ ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಪತಿ ನವಾಜ್ ಹತ್ಯೆಗೈದಿದ್ದಾನೆಂದು ಪೋಷಕರು ಆರೋಪ ಮಾಡಿದ್ದಾರೆ. ಪತಿ ನವಾಜ್​ನನ್ನು ಮಾದನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಐದು ವರ್ಷದ ಹಿಂದೆ ಮದುವೆ ಆಗಿದ್ದು, 4 ವರ್ಷದ ಗಂಡು ಮಗು, 3 ವರ್ಷದ ಹೆಣ್ಣು ಮಗು ಇದೆ. ತಂಗಿಯ ಮಿಸ್ ಕಾಲ್ಡ್ ಹಿನ್ನೆಲೆ, ಒಂದು ಗಂಟೆ ಬಳಿಕ ಅಕ್ಕ ನಾಜಿಯ ಪೋನ್ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ಪತಿ, ರಜಿಯಾ ಪ್ಯಾನ್​ಗೆ ನೇಣುಬಿಗಿದುಕೊಂಡು ಸಾವನ್ನಪ್ಪಿದರ ಬಗ್ಗೆ ಹೇಳಿದ್ದಾನೆ. ಪೋಷಕರು ಮನೆಗೆ ಬಂದು ನೋಡಿದಾಗ ಹಾಲ್​ನಲ್ಲಿ ಶವ ಮಲಗಿಸಿದ್ದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ