ಚಿಕ್ಕಬಳ್ಳಾಫುರ, ಜನವರಿ 15: ರಾಜ್ಯದೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ. ಆದರೆ ಈ ದಿನದಂದೇ ಕರ್ನಾಟಕದ ವಿವಿಧೆಡೆ ಸಾಲು ಸಾಲು ಅಪಘಾತಗಳು (accidents) ಸಂಭವಿಸಿವೆ. ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಪೆರಮಾಚನಹಳ್ಳಿ ಗ್ರಾಮದ ಬಳಿ ನಡೆದಿದೆ. ಶಂಕರ್ (28), ಶಂಕರಮ್ಮ ಮೃತರು. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಕ್ರಾಸ್ ಬಳಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ಚಿರಾಗ್(26) ಮೃತ ವ್ಯಕ್ತಿ. ಕಾರು ಚಾಲಕ ಪ್ರವೀಣ್ಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಿಜಯನಗರ: ರಸ್ತೆ ದಾಟುವ ವೇಳೆ ಲಾರಿ ಹರಿದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಕೆ. ಅಯ್ಯನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರ್ಷಣಿ (04) ಮೃತ ಬಾಲಕಿ. ಲಾರಿ ಚಾಲಕನ ಅಜಾಗರೂಕತೆಯಿಂದ ಬಾಲಕಿ ಮೇಲೆ ಲಾರಿ ಹರಿದಿದೆ.
ಇದನ್ನೂ ಓದಿ: ಪ್ರತ್ಯೇಕ ಘಟನೆ: ಒಂದೇ ದಿನ ಎರಡು ರಸ್ತೆ ಅಪಘಾತದಲ್ಲಿ 7 ಸಾವು, 6 ಮಂದಿಗೆ ಗಾಯ
ತಾಯಿ ಜೊತೆಗೆ ರಸ್ತೆ ಬಳಿ ನಿಂತಿದ್ದಾಗ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನೆಲಮಂಗಲ: ಪತಿ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ರಜಿಯಾ ಸುಲ್ತಾನ್ ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಪತಿ ನವಾಜ್ ಹತ್ಯೆಗೈದಿದ್ದಾನೆಂದು ಪೋಷಕರು ಆರೋಪ ಮಾಡಿದ್ದಾರೆ. ಪತಿ ನವಾಜ್ನನ್ನು ಮಾದನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಐದು ವರ್ಷದ ಹಿಂದೆ ಮದುವೆ ಆಗಿದ್ದು, 4 ವರ್ಷದ ಗಂಡು ಮಗು, 3 ವರ್ಷದ ಹೆಣ್ಣು ಮಗು ಇದೆ. ತಂಗಿಯ ಮಿಸ್ ಕಾಲ್ಡ್ ಹಿನ್ನೆಲೆ, ಒಂದು ಗಂಟೆ ಬಳಿಕ ಅಕ್ಕ ನಾಜಿಯ ಪೋನ್ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ಪತಿ, ರಜಿಯಾ ಪ್ಯಾನ್ಗೆ ನೇಣುಬಿಗಿದುಕೊಂಡು ಸಾವನ್ನಪ್ಪಿದರ ಬಗ್ಗೆ ಹೇಳಿದ್ದಾನೆ. ಪೋಷಕರು ಮನೆಗೆ ಬಂದು ನೋಡಿದಾಗ ಹಾಲ್ನಲ್ಲಿ ಶವ ಮಲಗಿಸಿದ್ದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.