AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಇನ್‌ಸ್ಟಾಗ್ರಾಮ್​​ ರೀಲ್ಸ್​ ಮಾಡಿದ್ದಕ್ಕೆ ಸಹೋದರಿಯನ್ನು ಕೊಂದ ಯುವಕ

ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್​ ರೀಲ್ಸ್​​ಗೆ​ ಮತ್ತು ಯೂಟ್ಯೂಬ್ ಶಾರ್ಟ್ಸ್​​ನಲ್ಲಿ ಅಪ್ಲೋಡ್​​ ಮಾಡುತ್ತಿದ್ದ ಯುವತಿಯನ್ನು, ಆಕೆಯ ಸಹೋದರನೇ ಕೊಲೆ ಮಾಡಿರುವ ಘಟನೆ ಹೈದರಾಬಾದ್​​ನ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯ ಯೆಲ್ಲಾಂಡು ಪಟ್ಟಣದಲ್ಲಿ ನಡೆದಿದೆ.

Crime News: ಇನ್‌ಸ್ಟಾಗ್ರಾಮ್​​ ರೀಲ್ಸ್​ ಮಾಡಿದ್ದಕ್ಕೆ ಸಹೋದರಿಯನ್ನು ಕೊಂದ ಯುವಕ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 27, 2023 | 3:51 PM

Share

ಹೈದರಾಬಾದ್, ಜು.27: ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್​ ರೀಲ್ಸ್​​ಗೆ (Instagram)​ ಮತ್ತು ಯೂಟ್ಯೂಬ್ ಶಾರ್ಟ್ಸ್​​ನಲ್ಲಿ ಅಪ್ಲೋಡ್​​ ಮಾಡುತ್ತಿದ್ದ ಯುವತಿಯನ್ನು, ಆಕೆಯ ಸಹೋದರನೇ ಕೊಲೆ ಮಾಡಿರುವ ಘಟನೆ ಹೈದರಾಬಾದ್​​ನ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯ ಯೆಲ್ಲಾಂಡು ಪಟ್ಟಣದಲ್ಲಿ ನಡೆದಿದೆ. 21 ವರ್ಷದ ಟ್ರೈನಿ ನರ್ಸ್​ನ್ನು ಸಹೋದರ ಕೊಂದಿದ್ದಾನೆ ಎಂದು ಪೊಲೀಸ್​​​ ತಿಳಿಸಿದ್ದಾರೆ. ಸಾವನ್ನಪ್ಪಿರುವ ಯುವತಿಯನ್ನು ಅಜ್ಮೀರಾ ಸಾಂಘ್ವಿ ಎಂದು ಗುರುತಿಸಲಾಗಿದೆ. ಮೃತ ಅಜ್ಮೀರಾ ಸಾಂಘ್ವಿ ಇತ್ತೀಚೆಗೆ ಆಕ್ಸಿಲಿಯರಿ ನರ್ಸ್ ಮಿಡ್‌ವೈಫ್ ಕೋರ್ಸ್ ಮುಗಿಸಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಇನ್ನೂ ಈಕೆಯ ಸಹೋದರ ಹಲವು ಬಾರಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕಬೇಡ ಎಂದು ಎಚ್ಚರಿಕೆ ನೀಡಿದ್ದ ಎಂದು ಹೇಳಲಾಗಿದೆ. ಆರೋಪಿಯನ್ನು ಅಜ್ಮೀರಾ ಹರಿಲಾಲ್ ಎಂದು ಗುರುತಿಸಲಾಗಿದೆ.

ಸಹೋದರ ಮಾತನ್ನು ನಿರ್ಲಕ್ಷಿಸಿ ಅಜ್ಮೀರಾ ಸಾಂಘ್ವಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಳು ಎಂದು ವರದಿಯಲ್ಲಿ ತಿಳಿಸಲಾಗಿದೆ. ಜು.24ರಂದು ಆಕೆ ತನ್ನ ಸಹೋದರ ಮುಂದೆಯೇ ವಿಡಿಯೋ ಮಾಡಿದ್ದಾಳೆ, ಇದನ್ನು ನೋಡಿದ ಸಹೋದರ ಆಕೆಯ ಜತೆಗೆ ವಾಗ್ವಾದಕ್ಕಿಳಿದ್ದಾರೆ. ಈ ಸಮಯದಲ್ಲಿ ಸಹೋದರ ಅಜ್ಮೀರಾ ಹರಿಲಾಲ್ ಕುಟ್ಟಾಣಿ (pestle)ಯಿಂದ ಆಕೆಗೆ ಹೊಡೆದಿದ್ದಾನೆ. ನಂತರ ಆಕೆಯ ತಾಯಿ ಅಜ್ಮೀರಾ ಸಾಂಘ್ವಿನ್ನು ಖಮ್ಮಮ್‌ನ ಆಸ್ಪತ್ರೆಗೆ ಸಾಗಿಸಿದ್ದಾರೆ.

ಇದನ್ನೂ ಓದಿ: ಸಮಾಲೋಚನೆ ವೇಳೆ ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ

ಅಜ್ಮೀರಾ ಹರಿಲಾಲ್ ಘಟನೆಯ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನೂ ಆಕೆಯನ್ನು ಖಮ್ಮಮ್‌ನ ಆಸ್ಪತ್ರೆಯಿಂದ ಉತ್ತಮ ಚಿಕಿತ್ಸೆಗಾಗಿ ವಾರಂಗಲ್‌ನ ಮತ್ತೊಂದು ಆಸ್ಪತ್ರೆಗೆ ಸಾಗಿಸುವಾಗ ಆಂಬ್ಯುಲೆನ್ಸ್‌ನಲ್ಲಿ ಸಾವನ್ನಪ್ಪಿದ್ದಾಳೆ ಎಂದು ಆಕೆಯ ತಾಯಿ ಹೇಳಿದ್ದಾರೆ. ಇನ್ನೂ ಅಜ್ಮೀರಾ ಸಾಂಘ್ವಿ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:44 pm, Thu, 27 July 23

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ