Crime News: ಡ್ರಗ್ಸ್ ಮಾರುತ್ತಿದ್ದ ಆರೋಪಿ ಅರೆಸ್ಟ್; ತುಮಕೂರು ಮತ್ತು ಬೆಂಗಳೂರಿನಲ್ಲಿ ನಡೆದ ಪ್ರತ್ಯೇಕ ಎರಡು ಅಪಘಾತದಲ್ಲಿ ಇಬ್ಬರು ಸಾವು
ಡ್ರಗ್ಸ್ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ತಮಿಳುನಾಡಿನ ಪೊಲೀಸರು ಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಕೋಲಾರ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ತಮಿಳುನಾಡಿನ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ತಮೇಶ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಹೈದರಾಬಾದ್ ಸೇರಿದಂತೆ ಹಲವು ಕಡೆಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ರಮೇಶ್ ಹೈದರಾಬಾದ್ ಮೂಲದವನಾಗಿದ್ದು, ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟೀಚರ್ಸ್ ಕಾಲೋನಿಯಲ್ಲಿ ಬಂಧಿಸಲಾಗಿದೆ.
ಬೈಕ್ಗೆ ಲಾರಿ ಡಿಕ್ಕಿ, ಸವಾರ ಸ್ಪಾಟ್ ಡೆತ್
ತುಮಕೂರು: ಬೈಕ್ಗೆ ಲಾರಿಯೊಂದು ಡಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಕುಣಿಗಲ್ ರಸ್ತೆಯ ನಾಗವಲ್ಲಿ ಬಳಿ ನಡೆದಿದೆ. ದುರ್ಘಟನೆಯಲ್ಲಿ ಮೃತಪಟ್ಟ ಯುವಕನನ್ನು ಮಂಜುನಾಥ್ (25) ಎಂದು ಗುರುತಿಸಲಾಗಿದೆ. ಹೆಬ್ಬೂರು ಕಡೆಯಿಂದ ತುಮಕೂರು ಕಡೆಗೆ ಬೈಕ್ ಮೂಲಕ ಬರುತ್ತಿದ್ದ ಮಂಜುನಾಥ್ಗೆ ತುಮಕೂರು ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ತುಮಕೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕೆಎಸ್ಆರ್ಟಿಸಿ-ಕಾರು ಅಪಘಾತ; ಓರ್ವ ಸಾವು
ಬೆಂಗಳೂರು: ಸಾರಿಗೆ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತ ನಡೆದ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲಹಂಕ ಏರ್ ಪೋರ್ಟ್ ರಸ್ತೆಯ ಬಿಎಸ್ಎಫ್ ಕ್ಯಾಂಪಸ್ ಬಳಿ ಇಂದು ಮುಂಜಾನೆ ನಡೆದಿದೆ. ಕಾರು ಚಾಲಕ ಲೊಹಿತ್ ಪ್ರಸಾದ್ ಸಾವನ್ನಪ್ಪಿದವರು. ಡಿವೈಡರ್ ಜಂಪ್ ಆದ ಕಾರು ಮಂತ್ರಾಲಯದಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಜಖಂಗೊಂಡಿದ್ದು, ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಕಾರು ಚಾಲಕನ ಅತಿಯಾದ ವೇಗದಿಂದ ಅಪಘಾತ ಸಂಭವಿಸಿದದು, ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.