ಕೌಶಂಬಿ; ನಿಯಂತ್ರಣ ತಪ್ಪಿದ ಕಾರೊಂದು ಸೈಕಲ್‌ಗೆ ಡಿಕ್ಕಿ ಹೊಡೆದು ಮಹಿಳೆಯನ್ನು 200 ಮೀಟರ್‌ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ (uttar pradesh) ಕೌಶಂಬಿಯಲ್ಲಿ (Kaushambi) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಕೌಶಂಬಿಯ ಜಿಲ್ಲಾಸ್ಪತ್ರೆಗೆ ಮತ್ತು ಚಾಲಕನನ್ನು ಪ್ರಯಾಗರಾಜ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ಕಾರಣ ಮಹಿಳೆ ಬೈಸಿಕಲ್ ಜೊತೆಗೆ ಕಾರಿನಲ್ಲಿ ಸಿಕ್ಕಿಹಾಕಿಕೊಂಡು ಸುಮಾರು 200 ಮೀಟರ್ ವರೆಗೆ ಎಳೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವತಿಗೆ ಚಾಕುವಿನಿಂದ ಇರಿದ ಪ್ರೇಮಿ; ದೆಹಲಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ
ಕಾರು ಡಿಕ್ಕಿ ಹೊಡೆಯುವ ಮುನ್ನ, ಮಹಿಳೆ ತನ್ನ ಮನೆಯಿಂದ ಕಂಪ್ಯೂಟರ್ ತರಗತಿಗೆ ಹೋಗುತ್ತಿದ್ದಳು ಎಂದು ತಿಳಿಸಲಾಗಿದೆ. ಡಿಕ್ಕಿ ಹೊಡೆದು ಮಹಿಳೆಯನ್ನು ಎಳೆದುಕೊಂಡು ಹೋಗಿ ಕೊನೆಗೆ ಕಾರು ಹೊಂಡಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಭಾನುವಾರದಂದು ಮನೆಗೆ ಮರಳುತ್ತಿದ್ದ 20 ವರ್ಷದ ಯುವತಿಯ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು ಆಕೆಯನ್ನು ಕಿಲೋಮೀಟರ್‌ವರೆಗೆ ಎಳೆದೊಯ್ದ ಬಳಿಕ ಈ ಘಟನೆ ಮುನ್ನೆಲೆಗೆ ಬಂದಿದೆ. ಸಂತ್ರಸ್ತೆಯ ತಾಯಿ ಮಂಜನ್‌ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜನವರಿ 1 ರಂದು (ಭಾನುವಾರ) ಮಧ್ಯಾಹ್ನ 3 ಗಂಟೆಗೆ ನಡೆದ ಘಟನೆಯ ವಿವರಗಳನ್ನು ಬಹಿರಂಗಪಡಿಸಿದ್ದಾರೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:41 pm, Wed, 4 January 23