AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gang Rape: 8 ತಿಂಗಳಿಂದ 80ಕ್ಕೂ ಹೆಚ್ಚು ಜನರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆಂಧ್ರದಲ್ಲೊಂದು ಅಮಾನವೀಯ ಘಟನೆ

ಕಳೆದ ಎಂಟು ತಿಂಗಳಿನಿಂದ 13 ವರ್ಷದ ಬಾಲಕಿಯನ್ನು ವೇಶ್ಯಾವಾಟಿಕೆಯಲ್ಲಿ ಬಳಸಿಕೊಳ್ಳಲು ಆಂಧ್ರಪ್ರದೇಶ ಮತ್ತು ತೆಲಂಗಾಣದ ವಿವಿಧ ವೇಶ್ಯಾಗೃಹಗಳಿಗೆ ಕಳುಹಿಸಲಾಗಿತ್ತು.

Gang Rape: 8 ತಿಂಗಳಿಂದ 80ಕ್ಕೂ ಹೆಚ್ಚು ಜನರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆಂಧ್ರದಲ್ಲೊಂದು ಅಮಾನವೀಯ ಘಟನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 20, 2022 | 5:58 PM

Share

ಹೈದರಾಬಾದ್: ಆಂಧ್ರಪ್ರದೇಶದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ (Minor Girl) ಮೇಲೆ 8 ತಿಂಗಳಿನಿಂದ 80 ಮಂದಿ ಅತ್ಯಾಚಾರವೆಸಗಿದ್ದು, ಆಕೆಯನ್ನು ವೇಶ್ಯಾವಾಟಿಕೆಗೆ ತಳ್ಳಲು ಬಲವಂತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಗುಂಟೂರಿನ ಪೊಲೀಸರು ಬಾಲಕಿಯನ್ನು ರಕ್ಷಿಸಿ, ಆ 80 ಜನರನ್ನು ಬಂಧಿಸಿದ್ದಾರೆ. ಎಂಟು ತಿಂಗಳ ಅವಧಿಯಲ್ಲಿ 80ಕ್ಕೂ ಹೆಚ್ಚು ಪುರುಷರು ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ (Gang Rape) ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮಂಗಳವಾರ ಬಿ.ಟೆಕ್ ವಿದ್ಯಾರ್ಥಿ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಅಪರಾಧದಲ್ಲಿ ಭಾಗಿಯಾಗಿರುವ 80 ಜನರನ್ನು ಬಂಧಿಸಿದ್ದಾರೆ ಮತ್ತು ಪರಾರಿಯಾಗಿರುವ ಇತರೆ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಜೂನ್ 2021ರಲ್ಲಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಆಸ್ಪತ್ರೆಯಲ್ಲಿ ಬಾಲಕಿಯ ತಾಯಿಯೊಂದಿಗೆ ಸ್ನೇಹ ಬೆಳೆಸಿದ ಸವರ್ಣ ಕುಮಾರಿ ಎಂಬ ಮಹಿಳೆ ಆ ಬಾಲಕಿಯನ್ನು ದತ್ತು ಪಡೆದಿದ್ದಳು. ಹುಡುಗಿಯ ತಾಯಿ ಕೋವಿಡ್ -19ನಿಂದ ಸಾವನ್ನಪ್ಪಿದ್ದರು. ಬಳಿಕ ಆ ದತ್ತು ಪಡೆದ ಮಹಿಳೆ ಆ ಬಾಲಕಿಯನ್ನು ಕರೆದುಕೊಂಡು ಹೋಗಿದ್ದರು. ಆ ಬಾಲಕಿಯ ತಂದೆಗೆ ಈ ವಿಷಯ ತಿಳಿಸಿದೆ ಬಾಲಕಿಯನ್ನು ಕರೆದುಕೊಂಡು ಹೋಗಲಾಗಿತ್ತು.

ಆಗಸ್ಟ್ 2021ರಲ್ಲಿ ಹುಡುಗಿಯ ತಂದೆ ಪೊಲೀಸರನ್ನು ಸಂಪರ್ಕಿಸಿ ತಮ್ಮ ಮಗಳು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದರು. ಇದರ ಆಧಾರದ ಮೇಲೆ ಪೊಲೀಸರು ಪ್ರಮುಖ ಆರೋಪಿ ಮಹಿಳೆ ಸವರ್ಣ ಕುಮಾರಿ ಎಂದು ಗುರುತಿಸಿದ್ದಾರೆ. ಜನವರಿಯಲ್ಲಿ ಈ ಪ್ರಕರಣದ ಮೊದಲ ಹಂತದ ಆರೋಪಿಗಳನ್ನು ಬಂಧಿಸಲಾಗಿತ್ತು. ನಿನ್ನೆ ಗುಂಟೂರು ಪಶ್ಚಿಮ ವಲಯ ಪೊಲೀಸರು ಬಿ.ಟೆಕ್ ವಿದ್ಯಾರ್ಥಿ ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಆ ಬಾಲಕಿಯನ್ನು ಕೂಡ ಕಾಪಾಡಿದ್ದಾರೆ.

ಆರೋಪಿಗಳು ಮತ್ತು ಸಂತ್ರಸ್ತೆಯನ್ನು ವಿಚಾರಣೆಗೆ ಒಳಪಡಿಸಿದಾಗ ಭಯಾನಕ ಮತ್ತು ಆಘಾತಕಾರಿ ಮಾಹಿತಿಗಳು ಲಭ್ಯವಾಗಿವೆ. ಕಳೆದ ಎಂಟು ತಿಂಗಳಿನಿಂದ 13 ವರ್ಷದ ಬಾಲಕಿಯನ್ನು ವೇಶ್ಯಾವಾಟಿಕೆಯಲ್ಲಿ ಬಳಸಿಕೊಳ್ಳಲು ಆಂಧ್ರಪ್ರದೇಶ ಮತ್ತು ತೆಲಂಗಾಣದ ವಿವಿಧ ವೇಶ್ಯಾಗೃಹಗಳಿಗೆ ಕಳುಹಿಸಲಾಗಿತ್ತು. ಇದಕ್ಕೆಂದೇ ಆ ಬಾಲಕಿಯನ್ನು ಕರೆದೊಯ್ದ ಮಹಿಳೆ ಸವರ್ಣ ಕುಮಾರಿ ಅಪ್ರಾಪ್ತೆಯನ್ನು ವೇಶ್ಯಾವಾಟಿಕೆಗೆ ಬಲವಂತಪಡಿಸಿದ ಪ್ರಮುಖ ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ.

ಪೊಲೀಸರು 80 ಆರೋಪಿಗಳನ್ನು ಗುರುತಿಸಿದ್ದು, ಅವರನ್ನು ಬಂಧಿಸಲು ಪ್ರಾರಂಭಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ. ಸುಪ್ರಜಾ ತಿಳಿಸಿದ್ದಾರೆ. ಅವರಲ್ಲಿ ಕೆಲವರು ಕಿಂಗ್‌ಪಿನ್‌ಗಳು, 35 ಪಿಂಪ್‌ಗಳು ಮತ್ತು ಉಳಿದವರು ಗ್ರಾಹಕರಾಗಿದ್ದಾರೆ. ಪರಾರಿಯಾಗಿರುವ ಇನ್ನೂ ಕೆಲವು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ಪ್ರಕರಣದ ಓರ್ವ ಆರೋಪಿ ಲಂಡನ್‌ನಲ್ಲಿದ್ದಾನೆ ಎಂದು ಎಎಸ್ಪಿ ಸುಪ್ರಜಾ ತಿಳಿಸಿದ್ದಾರೆ.

ಆರೋಪಿಗಳಿಂದ ಪೊಲೀಸರು ಒಂದು ಕಾರು, 53 ಮೊಬೈಲ್‌ಗಳು, ಮೂರು ಆಟೋಗಳು ಮತ್ತು ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ವಿಜಯವಾಡ, ಹೈದರಾಬಾದ್, ಕಾಕಿನಾಡ ಮತ್ತು ನೆಲ್ಲೂರುಗಳಿಂದ ಬಂಧಿಸಲಾಗಿದೆ. ಆಂಧ್ರಪ್ರದೇಶದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಎಂಟು ತಿಂಗಳ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: Bengaluru Crime: ಗೆಳತಿಯ ಅಣ್ಣನಿಂದ ಬೆಂಗಳೂರಿನ ಬಾಲಕಿ ಮೇಲೆ ಅತ್ಯಾಚಾರ; ವಿಡಿಯೋ ಮಾಡಿಕೊಂಡು ಬ್ಲಾಕ್​ಮೇಲ್

Crime News: ಅತ್ಯಾಚಾರ ಕೊಲೆಗಿಂತಲೂ ಘೋರವಾದುದು; ಪೋಕ್ಸೋ ನ್ಯಾಯಾಲಯದಿಂದ ಅತ್ಯಾಚಾರಿಗೆ 10 ವರ್ಷ ಜೈಲು ಶಿಕ್ಷೆ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್